ಪ್ರಜ್ಞಾರನ್ನು ಬಿಜೆಪಿಯಿಂದ ಹೊರ ಹಾಕಿ: ನಿತೀಶ್‌

ಬುಧವಾರ, ಜೂನ್ 19, 2019
28 °C

ಪ್ರಜ್ಞಾರನ್ನು ಬಿಜೆಪಿಯಿಂದ ಹೊರ ಹಾಕಿ: ನಿತೀಶ್‌

Published:
Updated:

ಪಟ್ನಾ: ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಂ ಗೋಡ್ಸೆಯನ್ನು ‘ದೇಶಭಕ್ತ’ ಎಂದ ಭೋಪಾಲ್‌ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರನ್ನು ಪಕ್ಷದಿಂದ ಹೊರಗೆ ಹಾಕುವ ಬಗ್ಗೆ ಬಿಜೆಪಿ ಯೋಚನೆ ಮಾಡಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹೇಳಿದ್ದಾರೆ.

ಇಂತಹ ನಡವಳಿಕೆಯನ್ನು ತಮ್ಮ ಪಕ್ಷ ಸಹಿಸುವುದಿಲ್ಲ ಎಂದು ಬಿಜೆಪಿಯ ಪ್ರಮುಖ ಮಿತ್ರಪಕ್ಷವಾಗಿರುವ ಜೆಡಿಯು ಅಧ್ಯಕ್ಷ ನಿತೀಶ್‌ ಹೇಳಿದ್ದಾರೆ.

ಪಟ್ನಾ ಸಾಹಿಬ್‌ ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಮತ ಚಲಾಯಿಸಿದ ಬಳಿಕ ನಿತೀಶ್‌ ಮಾತನಾಡಿದರು. ಪ್ರಜ್ಞಾ ಅವರನ್ನು ಪಕ್ಷದಿಂದ ಹೊರಗೆ ಹಾಕುವುದು ಬಿಜೆಪಿಯ ಆಂತರಿಕ ವಿಚಾರ. ಆದರೆ, ದೇಶ ಅಥವಾ ಸಿದ್ಧಾಂತಕ್ಕೆ ಸಂಬಂಧಿಸಿ ಹೇಳುವುದಾದರೆ ಇಂತಹುದನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು. 

ಅಪರಾಧ, ಭ್ರಷ್ಟಾಚಾರ ಮತ್ತು ಕೋಮುವಾದದ ವಿಚಾರದಲ್ಲಿ ರಾಜಿ ಇಲ್ಲವೇ ಇಲ್ಲ ಎಂದೂ ಅವರು ಹೇಳಿದರು. 

ಮತದಾನ ಯಾಕಿಷ್ಟು ದೀರ್ಘ?: ಕಡು ಬಿಸಿಲಿನ ದಿನಗಳಲ್ಲಿ ದೀರ್ಘವಾದ ಚುನಾವಣೆ ಪ್ರಕ್ರಿಯೆ ನಡೆಸುವುದು ಸರಿಯಲ್ಲ. ಈಗಿನದ್ದು ಚುನಾವಣೆ ನಡೆಸಲು ಸೂಕ್ತವಾದ ಸಮಯವೂ ಅಲ್ಲ. ಫೆಬ್ರುವರಿ–ಮಾರ್ಚ್‌ ಅಥವಾ ಅಕ್ಟೋಬರ್‌–ನವೆಂಬರ್‌ನಲ್ಲಿ ಮತದಾನ ನಡೆಸುವುದು ಉತ್ತಮ. ಎರಡು ಅಥವಾ ಮೂರು ಹಂತಗಳಲ್ಲಿ ಮತದಾನ ಪೂರ್ಣಗೊಳ್ಳಬೇಕು ಎಂದು ನಿತೀಶ್‌ ಪ್ರತಿಪಾದಿಸಿದ್ದಾರೆ. 

ಒಂದೇ ಹಂತದಲ್ಲಿ ಮತದಾನ ಪೂರ್ಣಗೊಳ್ಳುವುದು ಉತ್ತಮ. ಆದರೆ, ಇಷ್ಟೊಂದು ದೊಡ್ಡ ದೇಶದಲ್ಲಿ ಒಂದೇ ಹಂತದಲ್ಲಿ ಮತದಾನ ಪೂರ್ಣಗೊಳಿಸುವುದು ಸಾಧ್ಯವಿಲ್ಲ ಎಂಬುದು ನಿಜ. ಹಾಗಿದ್ದರೂ ಕೆಲವೇ ಹಂತಗಳಲ್ಲಿ ಈ ಪ್ರಕ್ರಿಯೆಯನ್ನು ಮುಗಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !