ಧೋನಿ ನಿವೃತ್ತಿಯ ನಂತರ ಏನಾಗ್ತರಂತೆ ಗೊತ್ತಾ?

ಬುಧವಾರ, ಜೂನ್ 26, 2019
25 °C

ಧೋನಿ ನಿವೃತ್ತಿಯ ನಂತರ ಏನಾಗ್ತರಂತೆ ಗೊತ್ತಾ?

Published:
Updated:
Prajavani

ನವದೆಹಲಿ: ನಿಗದಿಯ ಓವರ್‌ಗಳ ಕ್ರಿಕೆಟ್‌ನಿಂದ ನಿವೃತ್ತರಾದ ಮಹೇಂದ್ರಸಿಂಗ್ ಧೋನಿ ಏನಾಗ್ತಾರಂತೆ ಗೊತ್ತಾ?

ಅವರು ತಮ್ಮ ಬಾಲ್ಯದ ಕನಸನ್ನು ನನಸು ಮಾಡಿಕೊಳ್ಳಲಿದ್ದಾರಂತೆ. ಅವರು ವರ್ಣಚಿತ್ರ ಕಲಾವಿದರಾಗಲಿದ್ದಾರಂತೆ!

ಸೋಮವಾರ ತಮ್ಮ ಕೆಲವು ವರ್ಣಚಿತ್ರಗಳನ್ನು ಪ್ರದರ್ಶಿಸಿ ಮಾತನಾಡಿರುವ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಾಕಿರುವ ಅವರು, ‘ನಿಮ್ಮೊಂದಿಗೆ ಒಂದು ಗುಟ್ಟನ್ನು ಹಂಚಿಕೊಳ್ಳುತ್ತಿದ್ದೇನೆ. ಬಾಲ್ಯದಿಂದಲೂ ನನಗೆ ಕಲಾವಿದನಾಗಬೇಕು ಎಂಬ ಹೆಬ್ಬಯಕೆ ಇತ್ತು. ನಾನು ಬಹಳಷ್ಟು ಕ್ರಿಕೆಟ್ ಆಡಿದ್ದೇನೆ. ಇದೀಗ ನನ್ನಿಷ್ಟದ ಮತ್ತೊಂದು ಕಾರ್ಯವನ್ನು ಕೈಗೆತ್ತಿಕೊಳ್ಳುವ ಸಮಯ ಬಂದಿದೆ’ ಎಂದಿದ್ದಾರೆ.

ವಿಡಿಯೊದಲ್ಲಿ ತಮ್ಮ ಒಂದು ಪೇಟಿಂಗ್ ತೋರಿಸಿರುವ ಅವರು, ‘ಇದು ಭವಿಷ್ಯದ ಸಾರಿಗೆ ವ್ಯವಸ್ಥೆಯಾಗಲಿದೆ’ ಎಂದಿದ್ದಾರೆ. ಇನ್ನೊಂದು ಚಿತ್ರದಲ್ಲಿ ಅವರು ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಪೋಷಾಕು ಧರಿಸಿ ಬ್ಯಾಟ್ ಹಿಡಿದು ನಿಂತಿರುವ ಚಿತ್ರವಿದೆ.

ಬದಲಾದ ಕೇಶವಿನ್ಯಾಸ: ಮುಂಬರಲಿರುವ ವಿಶ್ವಕಪ್ ಟೂರ್ನಿಯಲ್ಲಿ ಆಡಲಿರುವ ಅವರು ತಮ್ಮ ಕೇಶವಿನ್ಯಾಸವನ್ನೂ ಬದಲಿಸಿಕೊಂಡಿದ್ದಾರೆ. ಈಚೆಗೆ ಮುಕ್ತಾಯವಾದ ಐಪಿಎಲ್‌ನಲ್ಲಿ ಇದ್ದ ಕೇಶವಿನ್ಯಾಸಕ್ಕಿಂತ ಇದು ಭಿನ್ನವಾಗಿದೆ. 

2014ರಲ್ಲಿ ಧೋನಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರು. ನಂತರ ಏಕದಿನ ಮತ್ತು ಟ್ವೆಂಟಿ–20 ಮಾದರಿಗಳಲ್ಲಿ ಮಾತ್ರ ಆಡುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ನಿಗದಿಯ ಓವರ್‌ಗಳ ಕ್ರಿಕೆಟ್‌ ತಂಡಗಳ ನಾಯಕತ್ವವನ್ನು ಅವರು ಬಿಟ್ಟುಕೊಟ್ಟಿದ್ದರು.

2007ರಲ್ಲಿ ಟ್ವೆಂಟಿ–20 ವಿಶ್ವಕಪ್ ಮತ್ತು 2011ರ ಏಕದಿನ ವಿಶ್ವಕಪ್ ಗೆದ್ದ ಭಾರತ ತಂಡದ ನಾಯಕತ್ವವನ್ನು ಅವರು ವಹಿಸಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !