ಎಲ್ಲ ವಿವಿಪ್ಯಾಟ್‌ಗಳ ಪರಿಶೀಲನೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಗುರುವಾರ , ಜೂನ್ 27, 2019
29 °C

ಎಲ್ಲ ವಿವಿಪ್ಯಾಟ್‌ಗಳ ಪರಿಶೀಲನೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

Published:
Updated:

ನವದೆಹಲಿ: ಚುನಾವಣೆ ಫಲಿತಾಂಶ ಪ್ರಕಟಿಸುವುದಕ್ಕೂ ಮೊದಲು ಎಲ್ಲ ವಿದ್ಯುನ್ಮಾನ ಮತಯಂತ್ರಗಳ ಮತದಾನ ದೃಢೀಕರಣ ಚೀಟಿ (VVPAT)ಗಳನ್ನು ಪರಿಶೀಲಿಸಲು ಚುನಾವಣೆ ಆಯೋಗಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ವಜಾಗೊಳಿಸಿದೆ. 

ತಂತ್ರಜ್ಞಾನ ಕ್ಷೇತ್ರ ಕೆಲ ಮಂದಿ ಈ ಅರ್ಜಿಯನ್ನು ಸಲ್ಲಿಸಿದ್ದರು. ಅಲ್ಲದೇ, ರಜೆ ಕಾಲದ ಪೀಠವು ತುರ್ತಾಗಿ ಅರ್ಜಿಯ ವಿಚಾರಣೆ ನಡೆಸಬೇಕು ಎಂದು ಕೋರಲಾಗಿತ್ತು. 

ಇದೇ ಮಾದರಿಯ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯಿ ಅವರ ಪೀಠ ಈಗಾಗಲೇ ವಿಚಾರಣೆ ನಡೆಸಿದೆ. ಹೀಗಾಗಿ ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಾಗದು ಎಂದು ನ್ಯಾಯಮೂರ್ತಿ ಅರುಣ್‌ ಮಿಶ್ರಾ ಮತ್ತು ಎಂ.ಆರ್  ಶಾ ಅವರಿದ್ದ ರಜೆ ಕಾಲದ ಪೀಠ ಹೇಳಿತ್ತು. ಆದರೆ, ಅರ್ಜಿದಾರರ ಪರ ವಕೀಲರು ಒತ್ಡದ ಮೇರೆ ನ್ಯಾಯಮೂರ್ತಿ ಮಿಶ್ರಾ ಅರ್ಜಿಯ ವಿಚಾರಣೆ ನಡೆಸಿದರು. 

ಇದನ್ನೂ ಓದಿ: ಮತಯಂತ್ರ ವಿರುದ್ಧ ಹೋರಾಟ ಚುರುಕು, ವಿರೋಧ ಪಕ್ಷಗಳಿಂದ ಚುನಾವಣಾ ಆಯೋಗಕ್ಕೆ ಭೇಟಿ

ಆದರೆ, ಅರ್ಜಿಯನ್ನು ಉಪದ್ರವಕಾರಿ ಎಂದ ನ್ಯಾಯಮೂರ್ತಿ, ತಕ್ಷಣವೇ ಅರ್ಜಿಯನ್ನು ವಜಾಗೊಳಿಸಿದರು. ‘ ಈ ದೇಶ ತನಗೆ ಬೇಕಾದ ಸರ್ಕಾರವನ್ನು ಆಯ್ಕೆ ಮಾಡಿಕೊಳ್ಳಲು ಬಿಡಿ,’ ಎಂದೂ ನ್ಯಾಯಮೂರ್ತಿಗಳು ತಾಕೀತು ಮಾಡಿದರು. 

ಪ್ರತಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ, ಪ್ರತಿ ವಿಧಾನಸಭೆ ಕ್ಷೇತ್ರದ ತಲಾ ಐದು ವಿವಿಪ್ಯಾಟ್‌ಗಳನ್ನು ಪರಿಶೀಲನೆ ನಡೆಸಬೇಕು ಎಂದು ಏಪ್ರಿಲ್‌ 8ರಂದು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ. ಈ ತೀರ್ಪಿಗೆ ಮೇಲ್ಮನವಿ ಸಲ್ಲಿಸಿದ್ದ ರಾಜಕೀಯ ಪಕ್ಷಗಳು, ವಿವಿಪ್ಯಾಟ್‌ ಪರಿಶೀಲನೆ ಪ್ರಮಾಣವನ್ನು ಶೇ. 50ಕ್ಕೆ ಏರಿಸಬೇಕು ಎಂಬ ಮನವಿಯನ್ನು ಸುಪ್ರೀಂ ಕೋರ್ಟ್‌ ತಳ್ಳಿ ಹಾಕಿದೆ. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 15

  Happy
 • 0

  Amused
 • 0

  Sad
 • 0

  Frustrated
 • 4

  Angry

Comments:

0 comments

Write the first review for this !