ಸೋಲಿನಿಂದ ಕಾಂಗ್ರೆಸ್‌ ಎದೆಗುಂದುವುದಿಲ್ಲ: ಸಚಿವ ಯು.ಟಿ.ಖಾದರ್‌

ಬುಧವಾರ, ಜೂನ್ 19, 2019
25 °C

ಸೋಲಿನಿಂದ ಕಾಂಗ್ರೆಸ್‌ ಎದೆಗುಂದುವುದಿಲ್ಲ: ಸಚಿವ ಯು.ಟಿ.ಖಾದರ್‌

Published:
Updated:
Prajavani

ಮಂಗಳೂರು: ‘ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಈ ಫಲಿತಾಂಶ ಅನಿರೀಕ್ಷಿತವಾದುದು. ಆದರೆ, ಸೋಲಿಗೆ ಪಕ್ಷ ಎದೆಗುಂದುವುದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್‌ ಹೇಳಿದರು.

ಚುನಾವಣಾ ಫಲಿತಾಂಶ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಸಂಸದರಾಗಿ ಪುನರಾಯ್ಕೆ ಆಗಿರುವ ನಳಿನ್‌ ಕುಮಾರ್‌ ಕಟೀಲ್‌ ಅವರನ್ನು ಅಭಿನಂದಿಸುತ್ತೇನೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುತ್ತೇವೆ’ ಎಂದರು.

ರಾಜ್ಯದಲ್ಲೂ ಪಕ್ಷ ಈ ಫಲಿತಾಂಶವನ್ನು ನಿರೀಕ್ಷೆ ಮಾಡಿರಲಿಲ್ಲ. ಸೋಲು ಶಾಶ್ವತ ಅಲ್ಲ. ಆದರೆ, ಪಕ್ಷದ ಹಿನ್ನಡೆಗೆ ಕಾರಣಗಳೇನು ಎಂಬುದನ್ನು ಅವಲೋಕಿಸಿ, ಸಂಘಟನೆಯನ್ನು ಬಲಪಡಿಸಲಾಗುವುದು. ಜಾತ್ಯತೀತ ತತ್ವ ಮತ್ತು ಸಂವಿಧಾನದ ರಕ್ಷಣೆಗೆ ಕಾಂಗ್ರೆಸ್‌ ಹೋರಾಟ ಮುಂದುವರಿಸಲಿದೆ ಎಂದು ಹೇಳಿದರು.

ವಿದ್ಯುನ್ಮಾನ ಮತಯಂತ್ರದ ಕುರಿತು ಗೊಂದಲ ಮುಂದುವರಿದಿದೆ. ಸಾರ್ವಜನಿಕರಲ್ಲಿ ಈ ಬಗ್ಗೆ ಇರುವ ಗೊಂದಲಗಳನ್ನು ಪರಿಹರಿಸಲು ಕೇಂದ್ರ ಸರ್ಕಾರ ಮತ್ತು ಕೇಂದ್ರ ಚುನಾವಣಾ ಆಯೋಗ ಸರಿಯಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !