ದಕ್ಷಿಣಕನ್ನಡ: 11 ಅಭ್ಯರ್ಥಿಗಳಿಗೆ ಠೇವಣಿ ನಷ್ಟ

ಮಂಗಳವಾರ, ಜೂನ್ 18, 2019
28 °C

ದಕ್ಷಿಣಕನ್ನಡ: 11 ಅಭ್ಯರ್ಥಿಗಳಿಗೆ ಠೇವಣಿ ನಷ್ಟ

Published:
Updated:

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಚುನಾವಣಾ ಕಣಕ್ಕಿಳಿದಿದ್ದ 13 ಅಭ್ಯರ್ಥಿಗಳ ಪೈಕಿ 11 ಮಂದಿ ಠೇವಣಿ ಕಳೆದುಕೊಂಡಿದ್ದಾರೆ.

ಚುನಾವಣಾ ಆಯೋಗದ ನಿಯಮದ ಪ್ರಕಾರ, ಎಣಿಕೆಯ ವೇಳೆ ಮಾನ್ಯಗೊಂಡ ಒಟ್ಟು ಮತಗಳ ಪೈಕಿ ಆರನೇ ಒಂದರಷ್ಟನ್ನು ಗಳಿಸಿದರೆ ಮಾತ್ರವೇ ಠೇವಣಿ ಉಳಿಯುತ್ತದೆ. ಈ ಪ್ರಮಾಣದ ಮತ ಗಳಿಸಲು ವಿಫಲರಾದ ಅಭ್ಯರ್ಥಿಗಳ ಚುನಾವಣಾ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ.

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಒಟ್ಟು 13,37,659 ಮತಗಳು ಎಣಿಕೆಗೆ ಮಾನ್ಯಗೊಂಡಿದ್ದವು. ಠೇವಣಿ ಉಳಿಯಲು 2,22,943 ಮತಗಳನ್ನು ಗಳಿಸಬೇಕಿತ್ತು.

ಗೆಲುವು ಸಾಧಿಸಿರುವ ಬಿಜೆಪಿಯ ನಳಿನ್‌ ಕುಮಾರ್‌ ಮತ್ತು ಸಮೀಪದ ಪ್ರತಿಸ್ಪರ್ಧಿಯಾಗಿರುವ ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ಎಂ. ರೈ ಮಾತ್ರ ಠೇವಣಿಗೆ ನಿಗದಿಪಡಿಸಿರುವ ಸಂಖ್ಯೆಯ ಮತಗಳನ್ನು ಪಡೆದಿದ್ದಾರೆ. ಮೂರನೇ ಸ್ಥಾನದಲ್ಲಿರುವ ಎಸ್‌ಡಿಪಿಐ ಅಭ್ಯರ್ಥಿ ಮೊಹಮ್ಮದ್‌ ಇಲ್ಯಾಸ್‌ ಸೇರಿದಂತೆ 11 ಮಂದಿ ಠೇವಣಿ ಕಳೆದುಕೊಂಡಿದ್ದಾರೆ.

ಎಣಿಕೆ ಕೇಂದ್ರಕ್ಕೆ ಬಾರದ ಮಿಥುನ್‌:

ಬೆಳಿಗ್ಗೆ 7.30ಕ್ಕೆ ಚುನಾವಣಾ ವೀಕ್ಷಕರು ಮತ್ತು ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ಭದ್ರತಾ ಕೊಠಡಿಯ ಬಾಗಿಲು ತೆರೆದ ಚುನಾವಣಾಧಿಕಾರಿ ಸಸಿಕಾಂತ್‌ ಸೆಂಥಿಲ್‌, ಮತ ಎಣಿಕೆಗೆ ಚಾಲನೆ ನೀಡಿದರು. 8 ಗಂಟೆಗೆ ಸರಿಯಾಗಿ ಆರಂಭವಾದ ಎಣಿಕೆ ಪ್ರಕ್ರಿಯೆ ಸಂಜೆ 4 ಗಂಟೆಯವರೆಗೂ ನಡೆಯಿತು.

ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲ್‌ ಗೆಲುವಿನ ಮುನ್ಸೂಚನೆ ದೊರೆಯುತ್ತಿದ್ದಂತೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮತ ಎಣಿಕೆ ಕೇಂದ್ರಕ್ಕೆ ಬಂದರು. ಅಲ್ಲಿಯೇ ತಮ್ಮ ಎಣಿಕೆ ಏಜೆಂಟರನ್ನು ಭೇಟಿ ಮಾಡಿ ಸಂಭ್ರಮ ಹಂಚಿಕೊಂಡರು. ಸಂಜೆ ಫಲಿತಾಂಶ ಘೋಷಣೆಯ ಸಮಯಕ್ಕೆ ಮತ್ತೊಮ್ಮೆ ಬಂದು ಚುನಾವಣಾಧಿಕಾರಿಯಿಂದ ಪ್ರಮಾಣಪತ್ರ ಸ್ವೀಕರಿಸಿದರು.

ಆದರೆ, ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಮತ ಎಣಿಕೆ ಕೇಂದ್ರದತ್ತ ಸುಳಿಯಲಿಲ್ಲ. ಅವರ ಎಣಿಕೆ ಏಜೆಂಟರಷ್ಟೇ ಮತ ಎಣಿಕೆ ಆರಂಭದಿಂದ ಅಂತ್ಯದವರೆಗೂ ಇದ್ದು ಮಾಹಿತಿ ಪಡೆದುಕೊಂಡರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !