ಶಂಕರ ಮಠ ಲೋಕಾರ್ಪಣೆ

ಬುಧವಾರ, ಜೂನ್ 19, 2019
26 °C

ಶಂಕರ ಮಠ ಲೋಕಾರ್ಪಣೆ

Published:
Updated:

ಶಿವಮೊಗ್ಗ: ನಗರದ ಶಂಕರಮಠ ವೃತ್ತದ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಶಂಕರ ಮಠವನ್ನು ಗುರುವಾರ ಶೃಂಗೇರಿಯ ಶಾರದಾ ಪೀಠದ ವಿಧುಶೇಖರ ಭಾರತೀ ಸ್ವಾಮೀಜಿ ಲೋಕಾರ್ಪಣೆಗೊಳಿಸಿದರು.

ಪುನರ್ ನಿರ್ಮಾಣಗೊಂಡಿರುವ ಶಾರದಾಂಬೆ, ಗಣಪತಿ ಹಾಗೂ ಶಂಕರಾಚಾರ್ಯರ ಮೂರ್ತಿಗಳ ಪ್ರತಿಷ್ಠಾಪನಾ ಕಾರ್ಯ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ನಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಪೂಜಾ ವಿಧಿಗಳು ನೆರವೇರಿದವು. 

ಸನಾತನ ವೈದಿಕ ಧರ್ಮವನ್ನು ಪುನರುಜ್ಜೀವನಗೊಳಿಸಿ ಉಪದೇಶ ನೀಡಿದವರು ಆದಿ ಶಂಕರಾಚಾರ್ಯರು ಎಂದು ಸ್ವಾಮೀಜಿ ವಿವರಿಸಿದರು.

ನಿರಂತರ ಧರ್ಮ ಪ್ರಚಾರಕ್ಕಾಗಿ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ಪೀಠಗಳನ್ನು ಸ್ಥಾಪಿಸಿದರು. ದಕ್ಷಿಣದಲ್ಲಿ ಪುಣ್ಯಭೂಮಿ ಶೃಂಗೇರಿಯಲ್ಲಿ ಪೀಠ ಸ್ಥಾಪಿಸಿದರು ಎಂದು ತಿಳಿಸಿದರು.

ಶೃಂಗೇರಿ ಆಡಳಿತಾಧಿಕಾರಿ ಡಾ.ವಿ.ಆರ್.ಗೌರಿಶಂಕರ್, ಧರ್ಮದರ್ಶಿ ಡಾ.ಪಿ.ನಾರಾಯಣ, ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ನಟರಾಜ ಭಾಗವತ್, ಶಂಕರ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !