ಹುತಾತ್ಮ ಯೋಧ ಶ್ರೀಶೈಲಗೆ ಭಾವಪೂರ್ಣ ನಮನ

ಭಾನುವಾರ, ಜೂನ್ 16, 2019
28 °C

ಹುತಾತ್ಮ ಯೋಧ ಶ್ರೀಶೈಲಗೆ ಭಾವಪೂರ್ಣ ನಮನ

Published:
Updated:
Prajavani

ಬಾಗಲಕೋಟೆ: ಕಾಶ್ಮೀರದಲ್ಲಿ ಮೇ 22ರಂದು  ಆರ್‌ಡಿಎಕ್ಸ್‌ ಸ್ಫೋಟಗೊಂಡು ಹುತಾತ್ಮರಾಗಿದ್ದ ತಾಲ್ಲೂಕಿನ ಇಲಾಳ ಗ್ರಾಮದ ಯೋಧ ಶ್ರೀಶೈಲ ಬಳಬಟ್ಟಿ ಅವರ ಪ್ರಾರ್ಥಿವ ಶರೀರಕ್ಕೆ ಶುಕ್ರವಾರ ಬೆಳಿಗ್ಗೆ ಜಿಲ್ಲಾಡಳಿತದಿಂದ ಗೌರವ ಸಲ್ಲಿಸಲಾಯಿತು. 

ಬೆಳಗಾವಿಯಿಂದ ರಸ್ತೆ ಮೂಲಕ ಬಂದ ಪಾರ್ಥಿವ ಶರೀರವಿದ್ದ ವಾಹನವನ್ನು ಸಮೀಪದ ತುಳಸಿಗೇರಿ ಬಳಿ ಬರಮಾಡಿಕೊಂಡ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಹಾಗೂ ಎಸ್‌ಪಿ ಅಭಿನವ್ ಖರೆ ಪಾರ್ಥಿವ ಶರೀರಕ್ಕೆ ಪುಷ್ಪ ಸಮರ್ಪಿಸುವ ಅಂತಿಮ ನಮನ ಸಲ್ಲಿಸಿದರು.

ಅಲ್ಲಿಂದ ಮೆರವಣಿಗೆಯ ಮೂಲಕ ನಗರದ ಬಸವೇಶ್ವರ ವೃತ್ತಕ್ಕೆ ಬಂದ ಪಾರ್ಥಿವ ಶರೀರದ ದರ್ಶವನ್ನು ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಸಾರ್ವಜನಿಕರು ಪಡೆದರು. ನಂತರ ಇಲಾಳಕ್ಕೆ ಪಾರ್ಥಿವ ಶರೀರ ಕೊಂಡೊಯ್ಯಲಾಯಿತು. ಅಲ್ಲಿ ಗ್ರಾಮಸ್ಥರು ದರ್ಶನ ಪಡೆದ ಬಳಿಕ ಪಾರ್ಥಿವ ಶರೀರವನ್ನು ಯೋಧನ ಪೋಷಕರು ನೆಲೆಸಿರುವ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಬಳಬಟ್ಟಿಗೆ ಒಯ್ಯಲಾಯಿತು. 

ಶ್ರೀಶೈಲ ಬಳಬಟ್ಟಿ 2006ರಿಂದ 12ನೇ ಮದ್ರಾಸ್ ರೆಜಿಮೆಂಟ್‌ನಲ್ಲಿ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದರು. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !