ಲೋಕಸಭಾ ಚುನಾವಣೆ: ಜನರ ಅಭಿಪ್ರಾಯಗಳು

ಗುರುವಾರ , ಜೂನ್ 20, 2019
24 °C

ಲೋಕಸಭಾ ಚುನಾವಣೆ: ಜನರ ಅಭಿಪ್ರಾಯಗಳು

Published:
Updated:
Prajavani

ಧಾರವಾಡ: ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಗೆಲುವು, ಸೋಲು ಸಾಮಾನ್ಯ. ಆದರೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಸೋಲಿನಿಂದಾಗಿ ರಾಜ್ಯ ಅಥವಾ ರಾಷ್ಟ್ರ ಮಟ್ಟದ ರಾಜಕೀಯದಲ್ಲಿ ಕನ್ನಡಿಗರ ಪರವಾಗಿ ಧ್ವನಿ ಎತ್ತಲು ಸಾಧ್ಯವಾಗದು. ಈ ಇಬ್ಬರ ಸೋಲು ತುಂಬಾ ನೋವು ಉಂಟು ಮಾಡಿದೆ. ಆದರೂ ಪ್ರಜಾಪ್ರಭುತ್ವದಲ್ಲಿ ಮತದಾರರ ನಿರ್ಧಾರವನ್ನು ಸ್ವಾಗತಿಸಬೇಕು.

– ರಮೇಶ ಗೌಡೂರು, ಕರ್ನಾಟಕ ವಿಶ್ವವಿದ್ಯಾಲಯ ಪತ್ರಿಕೋದ್ಯಮ ವಿದ್ಯಾರ್ಥಿ.

****

ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರದ ಕಿತ್ತಾಟವನ್ನು ಗಮನಿಸಿದ ಜನತೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರಿಗೆ ಜಯ ಒದಗಿಸಿ ಕೊಟ್ಟಿದ್ದಾರೆ. ಜನಪರ ಆಡಳಿತ, ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಸಂದ ಜಯವಾಗಿದೆ.

– ಲಲಿತಾ ಭಂಡಾರಿ, ವ್ಯಾಪಾರಿ, ಧಾರವಾಡ.

****

ಬಿಜೆಪಿ ಪಕ್ಷಕ್ಕೆ ನಿರೀಕ್ಷಿತ ಮಟ್ಟದಲ್ಲಿ ಜಯ ಸಂದಿದೆ. ಜಯಕ್ಕೆ ತಕ್ಕ ಹಾಗೆ ಅಭಿವೃದ್ಧಿ ಕಾರ್ಯಗಳನ್ನು ಜಯ ಗಳಿಸಿದ ಅಭ್ಯರ್ಥಿಗಳು ಮಾಡಬೇಕು. ಅಲ್ಲದೇ ಜನರ ಸಮಸ್ಯೆಗಳನ್ನು ಅರಿತು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು.

– ಜಗದೀಶ ಹಳಕಟ್ಟಿ, ನೌಕರ, ಧಾರವಾಡ

****

ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ ಜೋಶಿ ಅವರು ನಾಲ್ಕನೇ ಬಾರಿ ಸಂಸತ್‌ ಪ್ರವೇಶಿಸಲಿದ್ದಾರೆ. ಜನರ ಆಶೋತ್ತರಗಳಿಗೆ ಸ್ಪಂದಿಸಿ ಕ್ಷೇತ್ರವನ್ನು ಅಭಿವೃದ್ಧಿ ಮಾಡಬೇಕು. ಈ ಹಿಂದಿನ ಮೂರು ಅವಧಿಯಲ್ಲಿ ಅವರೇ ಈ ಕ್ಷೇತ್ರದಿಂದ ಸಂಸತ್‌ಗೆ ಆಯ್ಕೆಯಾಗಿದ್ದು, ಈ ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಬೇಕು ಎಂಬುದು ಅವರಿಗೆ ತಿಳಿದಿರುತ್ತದೆ.

– ಕಾಸೀಂ ಡಂಕೆವಾಲೆ, ನೌಕರ, ಧಾರವಾಡ.

****

ಐದು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜಾರಿಗೊಳಿಸಿದ ಹಲವು ಜನಪರ ಯೋಜನೆಗಳಿಗೆ ಮತ್ತು ಕೈಗೊಂಡ ಕ್ರಾಂತಿಕಾರಿ ಕ್ರಮಗಳಿಗೆ ಜನ ತಮ್ಮ ಒಪ್ಪಿಗೆ ಸಹಮತ ಸೂಚಿಸಿದ್ದಾರೆ. ಅದರ ಪರಿಣಾಮವೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಪ್ರಮಾಣದ ಗೆಲುವು ಸಾಧ್ಯವಾಗಿದೆ.

– ಉದಯ ತಲಗೇರಿ, ಉದ್ಯಮಿ, ಧಾರವಾಡ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !