ಮೈತ್ರಿಕೂಟಕ್ಕೆ ತೀವ್ರ ಮುಖಭಂಗ: ಸಂತೋಷ್‌

ಬುಧವಾರ, ಜೂನ್ 26, 2019
22 °C

ಮೈತ್ರಿಕೂಟಕ್ಕೆ ತೀವ್ರ ಮುಖಭಂಗ: ಸಂತೋಷ್‌

Published:
Updated:
Prajavani

ಬಾಳೆಹೊನ್ನೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರಮಟ್ಟದಲ್ಲಿನ ಮಹಾಘಟಬಂಧನ್ ಹಾಗೂ ರಾಜ್ಯದ ಮೈತ್ರಿಕೂಟಕ್ಕೆ ತೀವ್ರ ಮುಖಭಂಗವಾಗಿದೆ ಎಂದು ಮೇಗುಂದಾ ಹೋಬಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರೇನೂರು ಎ.ಸಿ.ಸಂತೋಷ್ ಹೇಳಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಇಲ್ಲಸಲ್ಲದ ಪ್ರಯತ್ನ ಮಾಡಲಾಗಿತ್ತು. ಆದರೆ, ದೇಶದ ಪ್ರಜ್ಞಾವಂತ ಮತದಾರರು ಅವರ ಅಪವಿತ್ರ ಮೈತ್ರಿಗೆ ತಕ್ಕ ಪಾಠ ಕಲಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಹೀನಾಯ ಪರಿಸ್ಥಿತಿಗೆ ತಲುಪಿರುವುದು ಶೋಚನೀಯವಾಗಿದೆ’ ಎಂದು ಹೇಳಿದ್ದಾರೆ.

‘ಶೃಂಗೇರಿ ಕ್ಷೇತ್ರದಲ್ಲಿ ನಡೆದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಜನತೆ ಗೆಲ್ಲಿಸಿದ್ದರು. ಆದರೆ, ಒಂದು ವರ್ಷದಲ್ಲಿ ಕ್ಷೇತ್ರದ ಎಲ್ಲೆಡೆ ಭ್ರಷ್ಟಾಚಾರ ಮಿತಿಮೀರಿದ್ದರಿಂದ ಜನತೆ ಬೇಸತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ 29ಸಾವಿರಕ್ಕೂ ಅಧಿಕ ಮತಗಳ ಮುನ್ನಡೆಯನ್ನು ಬಿಜೆಪಿಗೆ ನೀಡಿದ್ದಾರೆ. ಕ್ಷೇತ್ರದ ಮಾಜಿ ಶಾಸಕ ಡಿ.ಎನ್.ಜೀವರಾಜ್ ಅವರು ತಮ್ಮ ಮೂರು ಅವಧಿಯಲ್ಲಿ ನಡೆಸಿರುವ ಅಭಿವೃದ್ಧಿ ಕಾರ್ಯಗಳು, ಪಕ್ಷದ ಮುಖಂಡರಾದ ಮಹಾಬಲರಾವ್, ರಾಮಸ್ವಾಮಿ ಅವರ ಪಕ್ಷ ಸಂಘಟನೆಯ ಫಲವಾಗಿ ಕ್ಷೇತ್ರದಲ್ಲಿ ಅಧಿಕ ಮತದ ಮುನ್ನಡೆ ದೊರೆತಿದೆ’ ಎಂದಿದ್ದಾರೆ.
 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !