ಜಮೀರ್ ಯಡಿಯೂರಪ್ಪ ಮನೆ ಕಾಯಲಿ: ಡಾ.ಜಿ.ವಿ.ಮಂಜುನಾಥ್ ಆಗ್ರಹ

ಗುರುವಾರ , ಜೂನ್ 27, 2019
29 °C

ಜಮೀರ್ ಯಡಿಯೂರಪ್ಪ ಮನೆ ಕಾಯಲಿ: ಡಾ.ಜಿ.ವಿ.ಮಂಜುನಾಥ್ ಆಗ್ರಹ

Published:
Updated:

ಚಿಕ್ಕಬಳ್ಳಾಪುರ: ‘ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಭೂತಪೂರ್ವ ಗೆಲುವು ದಾಖಲಿಸಿದ್ದು, ಯಡಿಯೂರಪ್ಪ ಅವರ ಮನೆ ಬಾಗಿಲು ಕಾಯುತ್ತೇನೆ ಎಂದು ಹೇಳಿರುವ ಶಾಸಕ ಜಮೀರ್ ಅಹ್ಮದ್‌ ವಾಚ್‌ಮನ್ ಬಟ್ಟೆ ತೊಟ್ಟು ಮನೆ ಕಾಯಲಿ. ಇಲ್ಲದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಜಿ.ವಿ.ಮಂಜುನಾಥ್ ಆಗ್ರಹಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಅವರು ಈ ಹಿಂದೆ 22 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದಾಗ, ಸಿದ್ದರಾಮಯ್ಯ ಅವರು 22 ಅಲ್ಲ 2 ಸ್ಥಾನ ಗೆದ್ದರೆ ಸಾಕು ಎಂದಿದ್ದರು. ಅವರ ಮಾತೇ ಇದೀಗ ಅವರಿಗೆ ವಾಪಸ್‌ ಆಗಿದೆ. ಕಾಂಗ್ರೆಸ್‌ಗೆ ಎರಡು ಸ್ಥಾನ ಕೂಡ ಗೆಲ್ಲಲ್ಲು ಆಗಲಿಲ್ಲ’ ಎಂದು ತಿಳಿಸಿದರು.

‘ಈ ಬಾರಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸಂಸದ ವೀರಪ್ಪ ಮೊಯಿಲಿ ಅವರ ಆಡಳಿತ ವಿರೋಧಿ ಅಲೆ, ಮೋದಿ ಅಲೆ ಮತ್ತು ಬಚ್ಚೇಗೌಡರಿಗೆ ಅನುಕಂಪ ಬಿಜೆಪಿಗೆ ಅಮೋಘ ಗೆಲುವು ತಂದು ಕೊಡುವ ಮೂಲಕ ಮೊದಲ ಬಾರಿಗೆ ಖಾತೆ ತೆರೆದಿದೆ. ಗೆಲುವಿಗೆ ಸಹಕರಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇವೆ’ ಎಂದರು.

‘ಮುಂಬರುವ ದಿನಗಳಲ್ಲಿ ಬಚ್ಚೇಗೌಡರ ನೇತೃತ್ವದಲ್ಲಿ ದೆಹಲಿಗೆ ನಿಯೋಗ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ನೀರಾವರಿ ಸಮಸ್ಯೆ ಬಗೆಹರಿಸುವ ದಿಸೆಯಲ್ಲಿ ಕೇಂದ್ರದ ಸಹಕಾರ ಕೋರುತ್ತೇವೆ. ಆಂಧ್ರದ ಗಡಿಭಾಗ ತಲುಪಿರುವ ಕೃಷ್ಣಾ ನದಿ ನೀರನ್ನು ಜಿಲ್ಲೆಗೆ ಹರಿಸಲು ಪ್ರಯತ್ನಿಸಲಾಗುತ್ತದೆ. ಎಚ್‌.ಎನ್‌.ವ್ಯಾಲಿ ನೀರು ಮೂರನೇ ಹಂತದಲ್ಲಿ ಶುದ್ಧೀಕರಿಸಿ ಕೆರೆಗಳಿಗೆ ಹರಿಸಬೇಕು ಎಂಬುದು ನಮ್ಮ ಬೇಡಿಕೆ’ ಎಂದು ಹೇಳಿದರು.

ಮುಖಂಡರಾದ ಅಗಲಗುರ್ಕಿ ಚಂದ್ರಶೇಖರ್, ಹನುಮಂತಪ್ಪ, ರಾಮಣ್ಣ, ಮಂಜುನಾಥ್‌, ಭೈರೇಗೌಡ, ಪ್ರೇಮಲೀಲಾ ವೆಂಕಟೇಶ್‌, ಶ್ರೀನಿವಾಸ್‌, ಕೃಷ್ಣಾರೆಡ್ಡಿ, ನಾಗಭೂಷಣ್‌, ಲಕ್ಷ್ಮಿಪತಿ ಹಾಜರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !