ಗ್ರಾಮೀಣ ವಿದ್ಯಾರ್ಥಿಗಳ ಆಶಾಕಿರಣಶಿರ್ವ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳು

ಬುಧವಾರ, ಜೂನ್ 26, 2019
25 °C

ಗ್ರಾಮೀಣ ವಿದ್ಯಾರ್ಥಿಗಳ ಆಶಾಕಿರಣಶಿರ್ವ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳು

Published:
Updated:
Prajavani

ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣಾಕಾಂಕ್ಷಿಗಳಿಗೆ ಸಕಾಲಿಕ ಶಿಕ್ಷಣದ ಮೂಲಕ ಸಂಸ್ಕೃತಿ, ಸಂಸ್ಕಾರ, ವ್ಯಕ್ತಿತ್ವ ವಿಕಸನ, ಆರ್ಥಿಕ ಸ್ಥಿರತೆ ಮತ್ತು ಆರೋಗ್ಯವಂತ ಸಮಾಜವನ್ನು ನಿರ್ಮಿಸುವ ಸದುದ್ದೇಶದಿಂದ 1944ರಲ್ಲಿ ಕನ್ನಡ ಮಾಧ್ಯಮ ಶಾಲೆಯೊಂದನ್ನು ಆರಂಭಿಸಿತು.

 ಶಿಕ್ಷಣ ಪ್ರಸಾರದ ಕೈಂಕರ್ಯವನ್ನು ಸಮರ್ಥವಾಗಿ ಮತ್ತು ಅರ್ಥಪೂರ್ಣವಾಗಿ ನಡೆಸಿಕೊಂಡು ಬರುತ್ತಿದೆ. ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿಯಾಗಿರುವ ಎನ್. ವಿನಯ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಕ್ರಿಯಾಶೀಲ ಕಾರ್ಯಕಾರಿ ಸಮಿತಿಯ ಪರಿಶ್ರಮದೊಂದಿಗೆ ಮುನ್ನಡೆಯುತ್ತಿರುವ ಈ ಶಿಕ್ಷಣ ಸಂಸ್ಥೆಗಳು ಸಂಸ್ಥೆಗಳು ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳ ಆಶಾಕಿರಣವಾಗಿ ಮೂಡಿ ಬಂದಿವೆ.

ಪ್ರಸ್ತುತ ಶಿರ್ವ ವಿದ್ಯಾವರ್ಧಕ ಸಂಘವು ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಪದವಿ ಕಾಲೇಜು, ಹಿಂದು ಪದವಿ ಪೂರ್ವ ಕಾಲೇಜು, ಹಿಂದು ಪ್ರೌಢ ಶಾಲೆ, ಹಿಂದು ಹಿರಿಯ ಪ್ರಾರ್ಥಮಿಕ ಶಾಲೆ, ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾರ್ಥಮಿಕ ಶಾಲೆ, ಕೋಡು ಶ್ರೀ ದುರ್ಗಾಂಬಿಕಾ ಹಿರಿಯ ಪ್ರಾರ್ಥಮಿಕ ಶಾಲೆ ಪಂಜಿಮಾರು, ಶಿರ್ವ ವಿದ್ಯಾವರ್ಧಕ ಕಂಪ್ಯೂಟರ್ ಸೆಂಟರ್ ಮತ್ತು ವಿದ್ಯಾವರ್ಧಕ ಸೆಂಟ್ರಲ್ ಸ್ಕೂಲ್ ಶಿರ್ವ ಸೇರಿದಂತೆ ಒಟ್ಟು 8 ಸಮೂಹ ಶಿಕ್ಷಣ ಸಂಸ್ಥೆಗಳನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದೆ.

1980ರಲ್ಲಿ ಆರಂಭಗೊಂಡ ಮೂಲ್ಕಿ ಸುಂದರ ರಾಮ್ ಶೆಟ್ಟಿ ಪದವಿ ಕಾಲೇಜು ಬಿ.ಎ ಮತ್ತು ಬಿ.ಕಾಂ ಶಿಕ್ಷಣವನ್ನು ಒದಗಿಸುವ ಮೂಲಕ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆದು ಉದ್ಯೋಗ, ಸ್ವ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸನ್ನು ಕಾಣುವಂತೆ ಮಾಡಿದೆ.  52 ವರ್ಷಗಳಿಂದ ಕಲಾ ಮತ್ತು ವಾಣಿಜ್ಯ ಶಿಕ್ಷಣವನ್ನು ಒದಗಿಸುತ್ತಿರುವ ಹಿಂದು ಪದವಿ ಪೂರ್ವ ಕಾಲೇಜಿನಲ್ಲಿ 2013-14ನೇ ಸಾಲಿನಿಂದ ವಿಜ್ಞಾನ ವಿಭಾಗವನ್ನು ಆರಂಭಿಸಲಾಗಿದೆ. ಸಂಘದ ಅಧ್ಯಕ್ಷರಾದ ಎನ್. ವಿನಯ ಹೆಗ್ಡೆ ಸುಮಾರು ₹ 45 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ತರಗತಿ ಕೋಣೆಗಳು, ಅತ್ಯಾಧುನಿಕ ತಂತ್ರಗಳನ್ನೊಳಗೊಂಡ ಪ್ರಯೋಗಾಲಯ, ಗ್ರಂಥಾಲಯ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಸೌಲಭ್ಯಗಳನ್ನೊಳಗೊಂಡ ಪ್ರತ್ಯೇಕ ವಿಜ್ಞಾನ ವಿಭಾಗ ರೂಪಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪಿ.ಸಿ.ಎಂ.ಬಿ, ಪಿ.ಸಿ.ಎಂ.ಎಸ್ ಮತ್ತು ಪಿ.ಸಿ.ಎಂ.ಸಿ ಕಾಂಬಿನೇಷನ್‌ ಲಭ್ಯವಿದ್ದು ವಾಣಿಜ್ಯ ವಿಭಾಗದಲ್ಲಿಯೂ ಚರಿತ್ರೆ, ಸಂಖ್ಯಾಶಾಸ್ತ್ರ ಅಥಥಾವ ಗಣಕ ವಿಜ್ಞಾನಗಳನ್ನೊಳಗೊಂಡ ಮೂರು ಕಾಂಬಿನೇಷನ್‌ ಲಭ್ಯವಿದೆ.  ಹಿಂದು ಪ್ರೌಢ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದ್ದು ಪ್ರತಿ ತರಗತಿಗಳಲ್ಲಿ ಎರಡು ವಿಭಾಗಳಿವೆ.

2007ರಲ್ಲಿ ಆರಂಭಗೊಂಡ ವಿದ್ಯಾವರ್ಧಕ ಸೆಂಟ್ರಲ್ ಸ್ಕೂಲ್ನಲ್ಲಿ ಸಿ.ಬಿ.ಎಸ್.ಇ ಶಿಕ್ಷಣ ಒದಗಿಸಲಾಗುತ್ತಿದೆ. ಮೂರು ವರ್ಷಗಳಿಂದ ಸತತವಾಗಿ ಶೇಕಡ 100 ಫಲಿತಾಂಶ ಬಂದಿರುತ್ತದೆ. ಪ್ಲೆ-ಸ್ಕೂಲ್, ಎಲ್.ಕೆ.ಜಿ. ಮತ್ತು ಯು.ಕೆ.ಜಿ ಮಕ್ಕಳಿಗೆ ಆಧುನಿಕ ಹಾಗೂ ಅತ್ಯುತ್ತಮ ಸೌಲಭ್ಯಗಳನ್ನೊಳಗೊಂಡ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದ ಹೊಸ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದ್ದು ಮುಂದಿನ ಶೈಕ್ಷಣಿಕ ವರ್ಷದಿಂದ ತರಗತಿಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು. 27 ಎಕರೆ ಪ್ರಶಾಂತ ವಾತಾವರಣದ ಕ್ಯಾಂಪಸ್ಸಿನಲ್ಲಿ ನಾಲ್ಕು ವಿದ್ಯಾ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿದ್ದು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ  ಸೌಲಭ್ಯಗಳನ್ನು ಒದಗಿಸಲಾಗಿದೆ.

ಸಂಘವು ಮೊತ್ತ ಮೊದಲು ಆರಂಭಿಸಿದ ಹಿಂದು ಹಿರಿಯ ಪ್ರಾಥಮಿಕ ಶಾಲೆ 2018-19 ರಲ್ಲಿ ನೂರು ವರ್ಷಗಳನ್ನು ಪೂರೈಸಿದ್ದು,ಶತಮಾನೋತ್ಸವ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಿದೆ.  ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ವಿಶೇಷ ತರಗತಿಗಳನ್ನು ಹಾಗೂ ರಾತ್ರಿ ಶಾಲೆಯಲ್ಲೆ ಉಳಿದುಕೊಂಡು ತರಗತಿಗಳನ್ನು ನಡೆಸುವ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಗಳನ್ನು ಧೈರ್ಯವಾಗಿ ಎದುರಿಸಲು ತರಬೇತಿ ನೀಡುವ ಮತ್ತು ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯವನ್ನು ನಿರಂತರವಾಗಿ ಗಮನಿಸುವ ಕೆಲಸವನ್ನು ಮಾಡಲಾಗುತ್ತಿದೆ.

ಪಾಠದಷ್ಟೆ ಪ್ರಾಮುಖ್ಯತೆಯನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಲಾಗುತ್ತಿದ್ದು ಸಂಸ್ಥೆಗಳಲ್ಲಿ ಎನ್.ಸಿ.ಸಿ, ಎನ್.ಎಸ್.ಎಸ್, ಸ್ಕೌಟ್ಸ್, ಗೈಡ್ಸ್ ಮತ್ತು ಬುಲ್ಬುಲ್ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಕ್ರೀಡಾ ಕ್ಷೇತ್ರದಲ್ಲಿ ಪ್ರತಿಭಾವಂತರಿಗೆ ವಿಶೇಷ ತರಬೇತಿಗಳನ್ನು ನೀಡಲಾಗುತ್ತಿದೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹಲವರು ಸ್ಥಾನಗಳಿಸಿರುತ್ತಾರೆ.
 

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !