ಕುವೈತ್‌ನಲ್ಲಿ ಮಂಗಳೂರಿನ ಯುವಕರು ಅತಂತ್ರ

ಭಾನುವಾರ, ಜೂನ್ 16, 2019
28 °C
ಸಹಾಯಕ್ಕಾಗಿ ಮೊರೆ ಇಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌

ಕುವೈತ್‌ನಲ್ಲಿ ಮಂಗಳೂರಿನ ಯುವಕರು ಅತಂತ್ರ

Published:
Updated:

ಮಂಗಳೂರು: ಉದ್ಯೋಗ ಅರಸಿ ಏಜೆನ್ಸಿಯೊಂದರ ಮೂಲಕ ಕುವೈತ್‌ಗೆ ತೆರಳಿ, ಅಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಮಂಗಳೂರಿನ 35 ಯುವಕರ ಗುಂಪು ಸಹಾಯಕ್ಕಾಗಿ ಮೊರೆ ಇಡುತ್ತಿರುವ ವಿಡಿಯೊ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ.

ಜನವರಿ ತಿಂಗಳಿನಲ್ಲಿ ಕುವೈತ್‌ಗೆ ತೆರಳಿದ್ದು, ಐದು ತಿಂಗಳಿನಿಂದ ಸಂಬಳ ನೀಡಿಲ್ಲ. ಊಟಕ್ಕೂ ಪರದಾಡುವ ಸ್ಥಿತಿ ಬಂದೊದಗಿದೆ ಎಂದು ವಿಡಿಯೊದಲ್ಲಿ ಯುವಕರು ಅಳಲು ತೋಡಿಕೊಂಡಿದ್ದಾರೆ. ತಮ್ಮಂತೆಯೇ ವಿವಿಧ ರಾಜ್ಯಗಳಿಂದ ಬಂದಿರುವ 200 ಕಾರ್ಮಿಕರು ಸಂಕಷ್ಟದಲ್ಲಿರುವುದಾಗಿ ತಿಳಿಸಿದ್ದಾರೆ.

‘ಮಂಗಳೂರಿನ ಮಾಣಿಕ್ಯ ಅಸೋಸಿಯೇಟ್ಸ್ ಪ್ಲೇಸ್‍ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಮಾಲೀಕ ಪ್ರಸಾದ್ ಶೆಟ್ಟಿ ಎಂಬವರಿಗೆ ₹ 65,000 ನೀಡಿ ಜನವರಿ 7ರಂದು ಕುವೈತ್‌ಗೆ ಬಂದಿದ್ದೇವೆ. ಇಲ್ಲಿ ಬಂದ ಬಳಿಕ ಅತಂತ್ರರಾಗಿದ್ದೇವೆ. ಐದು ತಿಂಗಳಿನಿಂದ ಸಂಬಳ ನೀಡಿಲ್ಲ. ಕೆಲಸದ ಸ್ಥಳದಲ್ಲಿ ಊಟದ ವ್ಯವಸ್ಥೆಯನ್ನೂ ರದ್ದುಗೊಳಿಸಿದ್ದಾರೆ. ಊಟಕ್ಕಾಗಿ ನಾವು ಬೇಡುವ ಪರಿಸ್ಥಿತಿ ಬಂದಿದೆ’ ಎಂದು ಗಣೇಶ್‌ ಎಂಬುವವರು ಹೇಳಿರುವುದು ವಿಡಿಯೊದಲ್ಲಿದೆ.

‘ಕುವೈತ್‌ನ ಕೇಂಬ್ರಿಡ್ಜ್‌ ಎಂಬ ಕಂಪೆನಿಯಲ್ಲಿ ಉದ್ಯೋಗ ನೀಡುವುದಾಗಿ ಇಲ್ಲಿಗೆ ಕರೆದುಕೊಂಡು ಬಂದಿದ್ದರು. ಆದರೆ, ಬೇರೆ ಕಂಪೆನಿಯಲ್ಲಿ ಕೆಲಸ ನೀಡಿದರು. ಊರಿಗೆ ಮರಳಿದರೆ ಸಾಕು ಎಂಬ ಸ್ಥಿತಿಯಲ್ಲಿದ್ದೇವೆ’ ಎಂದು ಇನ್ನೊಬ್ಬ ಯುವಕ ಹೇಳಿದ್ದಾರೆ.

‘ಸಹಾಯ ಕೇಳಿ ಕುವೈತ್‌ನ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳ ಸಂಪರ್ಕ ಮಾಡಿದೆವು. ಆದರೆ, ಯಾವುದೇ ಪ್ರಯೋಜನವಾಗಲಿಲ್ಲ. ಈ ವಿಡಿಯೊವನ್ನು ಶಾಸಕ ವೇದವ್ಯಾಸ ಕಾಮತ್‌ ಅವರಿಗೆ ತಲುಪಿಸಿ. ನಮ್ಮ ನೆರವಿಗೆ ಬನ್ನಿ ಎಂದು ಅವರಲ್ಲಿ ಮನವಿ ಮಾಡುತ್ತೇವೆ. ಮಾಧ್ಯಮದವರು, ರಾಜಕಾರಣಿಗಳು ಮತ್ತು ಶಾಸಕರು ನಮ್ಮ ನೆರವಿಗೆ ಬನ್ನಿ. ದಯವಿಟ್ಟು ನಾವು ವಾಪಸು ಊರಿಗೆ ಬರಲು ನೆರವು ನೀಡಿ’ ಎಂದು ಇವರೆಲ್ಲರೂ ಬೇಡಿಕೊಂಡಿದ್ದಾರೆ.

200ಕ್ಕೂ ಹೆಚ್ಚು ಮಂದಿ: ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ರಾಜ್ಯಗಳ 200ಕ್ಕೂ ಹೆಚ್ಚು ಮಂದಿ ಕೆಲಸಕ್ಕಾಗಿ ಬಂದು ಅಲ್ಲಿ ಸಂಕಷ್ಟದಲ್ಲಿದ್ದಾರೆ ಎಂದು ಈ ಯುವಕರು ವಿಡಿಯೊದಲ್ಲಿ ಹೇಳಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 10

  Happy
 • 2

  Amused
 • 5

  Sad
 • 2

  Frustrated
 • 5

  Angry

Comments:

0 comments

Write the first review for this !