ಮದ್ಯದ ಅಮಲಿನಲ್ಲಿ ಜಗಳ:ಯುವಕನಿಗೆ ಇರಿತ

ಬುಧವಾರ, ಜೂನ್ 19, 2019
23 °C

ಮದ್ಯದ ಅಮಲಿನಲ್ಲಿ ಜಗಳ:ಯುವಕನಿಗೆ ಇರಿತ

Published:
Updated:

ಮಂಗಳೂರು: ನಗರದ ಉರ್ವ ಚರ್ಚ್‌ ಬಳಿ ಶುಕ್ರವಾರ ರಾತ್ರಿ ಮದ್ಯದ ಅಮಲಿನಲ್ಲಿ ಜಗಳವಾಡಿಕೊಂಡಿದ್ದು, ಒಬ್ಬಾತ ಇನ್ನೊಬ್ಬ ಯುವಕನಿಗೆ ಚೂರಿಯಿಂದ ಇರಿದಿದ್ದಾನೆ.

ರಿತೇಶ್‌ (23) ಎಂಬಾತ ಇರಿತದಿಂದ ಗಾಯಗೊಂಡ ಯುವಕ. ವಿಕ್ಕಿ ಎಂಬಾತ ಆತನಿಗೆ ಇರಿದು ಪರಾರಿಯಾಗಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ಚೇತರಿಸಿಕೊಳ್ಳುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ಯದ ಅಮಲಿನಲ್ಲಿ ಆರಂಭವಾದ ಜಗಳದಿಂದ ಘಟನೆ ನಡೆದಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ್‌ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !