ಕೃಷ್ಣ ಬೈರೇಗೌಡರಿಗೆ ಬ್ಯಾಟರಾಯನಪುರದಲ್ಲೇ ಹಿನ್ನಡೆ

ಬುಧವಾರ, ಜೂನ್ 19, 2019
23 °C
ಬೆಂಗಳೂರು ಉತ್ತರದಲ್ಲಿ ‘ಕೈ’ ಹಿಡಿದಿದ್ದು ಅಖಂಡ ಮಾತ್ರ

ಕೃಷ್ಣ ಬೈರೇಗೌಡರಿಗೆ ಬ್ಯಾಟರಾಯನಪುರದಲ್ಲೇ ಹಿನ್ನಡೆ

Published:
Updated:

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಬೈರೇಗೌಡ ಅವರಿಗೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲೇ ಮತದಾರರು ‘ಕೈ’ ಹಿಡಿದಿಲ್ಲ. 

ಈ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಕೃಷ್ಣ ಬೈರೇಗೌಡ ಸೇರಿ ಐವರು ಕಾಂಗ್ರೆಸ್‌ ಶಾಸಕರು ಮತ್ತು ಇಬ್ಬರು ಜೆಡಿಎಸ್ ಶಾಸಕರಿದ್ದಾರೆ. ಮಲ್ಲೇಶ್ವರ ಒಂದರಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ.

ಬ್ಯಾಟರಾಯನಪುರದಲ್ಲಿ ಕೃಷ್ಣ ಬೈರೇಗೌಡ ಅವರಿಗಿಂತ ಡಿ.ವಿ.ಸದಾನಂದಗೌಡ 17 ಸಾವಿರ ಅಧಿಕ ಮತಗಳನ್ನು ಪಡೆದಿದ್ದಾರೆ. ಪುಲಕೇಶಿನಗರ ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮಾತ್ರ ಕೃಷ್ಣ ಬೈರೇಗೌಡರಿಗೆ ಮತ ಕೊಡಿಸುವಲ್ಲಿ ಸಫಲರಾಗಿದ್ದಾರೆ. ಸದಾನಂದಗೌಡ ಅವರಿಗಿಂತ 63 ಸಾವಿರ ಅಧಿಕ ಮತಗಳನ್ನು ಕೃಷ್ಣ ಬೈರೇಗೌಡ ಅವರಿಗೆ ಕೊಡಿಸಿದ್ದಾರೆ.

ಕಾಂಗ್ರೆಸ್ ಶಾಸಕರಾದ ಬೈರತಿ ಬಸವರಾಜ್, ಎಸ್.ಟಿ. ಸೋಮಶೇಖರ್ ಮತ್ತು ಬೈರತಿ ಸುರೇಶ್ ಅವರು ತಾವು ಪ್ರತಿನಿಧಿಸುವ ಕೆ.ಆರ್.ಪುರ, ಯಶವಂತಪುರ ಮತ್ತು ಹೆಬ್ಬಾಳ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗೆ ಮತ ಕೊಡಿಸುವಲ್ಲಿ ವಿಫಲರಾಗಿದ್ದಾರೆ. ಕೆ.ಆರ್.ಪುರ ಕ್ಷೇತ್ರದಲ್ಲಿ 13 ಸಾವಿರ, ಯಶವಂತಪುರ ಕ್ಷೇತ್ರದಲ್ಲಿ 40 ಸಾವಿರ, ಹೆಬ್ಬಾಳ ಕ್ಷೇತ್ರಗಳಲ್ಲಿ 4 ಸಾವಿರ ಹೆಚ್ಚು ಮತಗಳನ್ನು ಸದಾನಂದಗೌಡ ಪಡೆದಿದ್ದಾರೆ.

ಜೆಡಿಎಸ್ ಶಾಸಕರಾದ ಗೋಪಾಲಯ್ಯ ಪ್ರತಿನಿಧಿಸುವ ಮಹಾಲಕ್ಷ್ಮಿ ಲೇಔಟ್ ಮತ್ತು ಆರ್. ಮಂಜುನಾಥ್ ಶಾಸಕರಾಗಿರುವ ದಾಸರಹಳ್ಳಿ ಕ್ಷೇತ್ರದಲ್ಲೂ ಮೈತ್ರಿ ಅಭ್ಯರ್ಥಿಯನ್ನು ಮತದಾರರು ಬೆಂಬಲಿಸಿಲ್ಲ. ಎರಡೂ ಕ್ಷೇತ್ರಗಳಲ್ಲಿ ಕ್ರಮವಾಗಿ 38 ಸಾವಿರ ಮತ್ತು 46 ಸಾವಿರ ಹೆಚ್ಚು ಮತಗಳನ್ನು ಬಿಜೆಪಿ ಅಭ್ಯರ್ಥಿ ಪಡೆದಿದ್ದಾರೆ.

ಬಿಜೆಪಿ ಶಾಸಕ ಸಿ.ಎನ್‌.ಅಶ್ವತ್ಥನಾರಾಯಣ ಅವರು ತಾವು ಪ್ರತಿನಿಧಿಸುವ ಮಲ್ಲೇಶ್ವರ ಕ್ಷೇತ್ರದಲ್ಲಿ 48 ಸಾವಿರ ಹೆಚ್ಚು ಮತಗಳನ್ನು ಸದಾನಂದಗೌಡ ಅವರಿಗೆ ಕೊಡಿಸುವಲ್ಲಿ ಸಫಲರಾಗಿದ್ದಾರೆ.

ಒಂದು ಕ್ಷೇತ್ರ ಹೊರತುಪಡಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರುಗಳಿರುವ ಕ್ಷೇತ್ರಗಳಲ್ಲಿ ಜನ ಬಿಜೆಪಿ ಪರವಾಗಿಯೇ ಮತ ಚಲಾಯಿಸಿರುವ ಕಾರಣ ಸದಾನಂದಗೌಡ ಅವರು ನಿರಾಯಾಸವಾಗಿ ಜಯ ದಾಖಲಿಸಿದ್ದಾರೆ. 1.47 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 7

  Happy
 • 2

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !