ನಂದಿಬೆಟ್ಟದಲ್ಲಿ ರಾಸಾಯನಿಕ ಮುಕ್ತ ಮಾವು ಮೇಳಕ್ಕೆ ಚಾಲನೆ

ಬುಧವಾರ, ಜೂನ್ 19, 2019
26 °C
ಜಿಲ್ಲೆಯ ಮಾವು ಬೆಳೆಗಾರರಿಗೆ ಮಧ್ಯವರ್ತಿಗಳ ಕಾಟವಿಲ್ಲದೆ ಮಾರುಕಟ್ಟೆ ಒದಗಿಸುವ ಪ್ರಯತ್ನ

ನಂದಿಬೆಟ್ಟದಲ್ಲಿ ರಾಸಾಯನಿಕ ಮುಕ್ತ ಮಾವು ಮೇಳಕ್ಕೆ ಚಾಲನೆ

Published:
Updated:
Prajavani

ಚಿಕ್ಕಬಳ್ಳಾಪುರ: ‘ರಾಸಾಯನಿಕ ಮುಕ್ತ ಉತ್ತಮ ಗುಣಮಟ್ಟದ ಮಾವಿನ ಹಣ್ಣುಗಳನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸುವ ಮತ್ತು ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ ರೈತರಿಗೆ ನ್ಯಾಯ ಬೆಲೆ ದೊರಕಿಸಿ ಕೊಡುವ ಉದ್ದೇಶದಿಂದ ಮಾವಿನ ಮೇಳವನ್ನು ಆಯೋಜಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ತಿಳಿಸಿದರು.

ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತ ಮಾರುಕಟ್ಟೆ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ನಂದಿ ಬೆಟ್ಟದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ನಂದಿಬೆಟ್ಟಕ್ಕೆ ಪ್ರವಾಸಿಗರು ಹೆಚ್ಚಾಗಿ ಬರುವುದರಿಂದ ಮಾವು ಮಾರಾಟಕ್ಕೆ ಸಹಕಾರಿಯಾಗಲಿದೆ. ಅಲ್ಲದೇ, ನಮ್ಮ ಜಿಲ್ಲೆಯಲ್ಲಿ ಬೆಳೆಯಲಾಗುವ ಮಾವಿನ ಹಣ್ಣಿನ ರುಚಿಯನ್ನು ಗ್ರಾಹಕರಿಗೆ ಪರಿಚಯಿಸಿದಂತಾಗುತ್ತದೆ. ಆದ್ದರಿಂದಲೇ ನಂದಿ ಬೆಟ್ಟದಲ್ಲಿ ಮಾವು ಮೆಳ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

‘ಈ ಮೇಳದಲ್ಲಿ ಗ್ರಾಹಕರು ಬಾದಾಮಿ, ಸಿಂಧೂರ, ರಸಪೂರಿ, ಮಲಗೋವಾ, ಮಲ್ಲಿಕಾ, ತೋತಾಪುರಿ ಸೇರಿದಂತೆ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಖರೀದಿಸಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಿ ಮಾವು ಮೇಳವನ್ನು ಯಶಸ್ವಿಗೊಳಿಸಿ, ರೈತರಿಗೆ ಪ್ರೋತ್ಸಾಹ ನೀಡಬೇಕು’ ಎಂದು ಮನವಿ ಮಾಡಿದರು.

ಮೇಳದ ಮೊದಲ ದಿನವೇ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿವಿಧ ಬಗೆಯ ಮಾವಿನ ಹಣ್ಣುಗಳನ್ನು ಖರೀದಿಸಿದರು. ಅಷ್ಟೇ ಅಲ್ಲದೇ, ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಮಾವು ತಿನ್ನುವ ಸ್ಪರ್ಧೆಯಲ್ಲಿ ಮಹಿಳೆಯರು ಮತ್ತು ಪುರುಷರು ಉತ್ಸುಕರಾಗಿ ಭಾಗವಹಿಸಿದ್ದರು. ವೀಜೆತರಾದವರಿಗೆ ಮಾವಿನ ಹಣ್ಣುಗಳನ್ನು ಬಹುಮಾನವಾಗಿ ನೀಡಲಾಯಿತು.

ಮಾವು ಮೇಳದ ಅಂಗವಾಗಿ ಆಯೋಜಿಸಲಾಗಿದ್ದ ವೀರಗಾಸೆ ಡೊಳ್ಳು ಕುಣಿತ, ಸಾಂಸ್ಕೃತಿಕ ಸ್ಪರ್ಧೆ ಪ್ರವಾಸಿಗರನ್ನು ಆಕರ್ಷಿಸಿತು. ವೀರಗಾಸೆ ಕುಣಿತದವರ ಜತೆಗೆ ಪ್ರವಾಸಿಗರು ಹೆಜ್ಜೆ ಹಾಕಿ ಆನಂದಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್‌ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಸಂತೋಷ್ ಬಾಬು, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕುಮಾರಸ್ವಾಮಿ, ಸಹಾಯಕ ನಿರ್ದೇಶಕ ಅಂಜನ್, ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಆನಂದ್, ಜೆ.ಎನ್ ರವಿಕುಮಾರ್, ಬಾಲಾಜಿ ಉಪಸ್ಥಿತರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !