6ನೇ ತರಗತಿಗೆ ಪ್ರವೇಶಾತಿ ಪ್ರಕ್ರಿಯೆ

ಗುರುವಾರ , ಜೂನ್ 27, 2019
29 °C
ಜಿಲ್ಲೆಯ 21 ವಸತಿ ಶಾಲೆಗಳಲ್ಲಿ 1,050 ವಿದ್ಯಾರ್ಥಿಗಳಿಗೆ ಪ್ರವೇಶ

6ನೇ ತರಗತಿಗೆ ಪ್ರವೇಶಾತಿ ಪ್ರಕ್ರಿಯೆ

Published:
Updated:
Prajavani

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಬಿ.ಆರ್.ಅಂಬೇಡ್ಕರ್ ಹಾಗೂ ಇಂದಿರಾ ಗಾಂಧಿ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ನಗರದ ಅಂಬೇಡ್ಕರ್ ಭವನದಲ್ಲಿ ಇತ್ತೀಚೆಗೆ ಆರಂಭಗೊಂಡ ಪ್ರವೇಶಾತಿ ಪ್ರಕ್ರಿಯೆ ಶನಿವಾರ ಮುಗಿಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಪ್ರವೇಶಾತಿ ಪ್ರಕ್ರಿಯೆ ನಡೆದಿದೆ.

ಚಿಂತಾಮಣಿ ತಾಲ್ಲೂಕು ಕೆ.ರಾಗುಟ್ಟಹಳ್ಳಿ, ಮುಂಗಾನಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ನಿಲಯ, ಗಡಿವಾರಪಲ್ಲಿ, ಮುರುಗಮಲ್ಲ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಗೌರಿಬಿದನೂರು ತಾಲ್ಲೂಕು ಕರೇಕಲ್ಲಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ನಗರಗೆರೆ ಹಾಗೂ ಮಣಿವಾಲ ಕಿತ್ತೂರು ರಾಣಿ ಚನ್ನಮ್ಮ ವಸತಿ ನಿಲಯ, ಮಂಚೇನಹಳ್ಳಿ ಅಂಬೇಡ್ಕರ್‌ ವಸತಿ ನಿಲಯ.

ಬಾಗೇಪಲ್ಲಿ ತಾಲ್ಲೂಕು ಚೇಳೂರು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಮಿಟ್ಟೇಮರಿ ಕಿತ್ತೂರು ರಾಣಿ ಚೆನ್ನಮ್ಮ, ಪೂಲವಾರಪಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಶಿಡ್ಲಘಟ್ಟ ತಾಲ್ಲೂಕು ಪಿಂಡಿಪಾಪನಹಳ್ಳಿ ಇಂದಿರಾ ಗಾಂಧಿ ವಸತಿ ಶಾಲೆ, 11ನೇ ಮೈಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ. ಗುಡಿಬಂಡೆ ತಾಲ್ಲೂಕು ಕುಪ್ಪಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಪ್ರವೇಶಾತಿ ಪ್ರಕ್ರಿಯೆ ನಡೆಯಿತು.

‘ಪ್ರವೇಶಕ್ಕಾಗಿ ಜಿಲ್ಲೆಯಲ್ಲಿ 2,800 ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ, ಪರೀಕ್ಷೆ ಎದುರಿಸಿದ್ದರು. ಆ ಪೈಕಿ 1,353 ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಕರೆ ಪತ್ರ ಕಳುಹಿಸಲಾಗಿತ್ತು. ಪ್ರವೇಶಾತಿ ಪ್ರಕ್ರಿಯೆಯಲ್ಲಿ ಜಿಲ್ಲೆಯ 21 ವಸತಿ ಶಾಲೆಗಳಿಗೆ ಮೆರಿಟ್‌ ಆಧಾರದಲ್ಲಿ ಪ್ರತಿ ಶಾಲೆಗೆ ತಲಾ 50 ರಂತೆ 1,050 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಯಿತು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಹನುಮಂತರಾಯಪ್ಪ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ತೇಜಾನಂದ ರೆಡ್ಡಿ, ವಸತಿ ಶಾಲೆಗಳ ಜಿಲ್ಲಾ ಸಮನ್ವಯ ಅಧಿಕಾರಿ ಸಿ.ಕೆ ಚಂದ್ರಪ್ಪ ಉಪಸ್ಥಿತರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !