ಶನಿವಾರ, ಸೆಪ್ಟೆಂಬರ್ 25, 2021
22 °C
Aishwarya Rai

ಮಣಿ ಸಿನಿಮಾದಲ್ಲಿ ಐಶ್ವರ್ಯಾ ರೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅನಿಲ್‌ಕಪೂರ್, ರಾಜ್‌ಕುಮಾರ್ ರಾವ್ ಜೊತೆಗೆ ‘ಫನ್ನೆ ಖಾನ್’ನಲ್ಲಿ ಅಭಿನಯಿಸಿದ್ದ ಐಶ್ವರ್ಯಾ ರೈ ಬಚ್ಚನ್ ನಂತರ ಯಾವ ಸಿನಿಮಾಗಳನ್ನೂ ಒಪ್ಪಿಕೊಂಡಿರಲಿಲ್ಲ. ಆದರೆ, ಈಚೆಗಷ್ಟೇ ತಾವು ಮಣಿರತ್ನಂ ಅವರ ಹೊಸ ಸಿನಿಮಾವೊಂದರಲ್ಲಿ ಅಭಿನಯಿಸುತ್ತಿದ್ದೇನೆ ಎಂದು ಅವರು ದೃಢಪಡಿಸಿದ್ದಾರೆ.

ಈಚೆಗಷ್ಟೇ 72ನೇ ಕಾನ್ ಸಿನಿಮೋತ್ಸವದ ರೆಡ್ ಕಾರ್ಪೆಟ್‌ನಲ್ಲಿ ಮಿಂಚಿದ್ದ ಐಶು, ಸಂದರ್ಶನವೊಂದರಲ್ಲಿ ಈ ಬಗ್ಗೆ ಹೇಳಿದ್ದು, ಸಾಮಾನ್ಯವಾಗಿ ಮಣಿರತ್ನಂ ತಮ್ಮ ಹೊಸ ಸಿನಿಮಾದ ಬಗ್ಗೆ ಎಲ್ಲಿಯೂ ಘೋಷಿಸುವುದಿಲ್ಲ. ಆದರೆ, ಈ ಬಗ್ಗೆ ಐಶ್ವರ್ಯಾ ಮಾಹಿತಿ ಬಹಿರಂಗಪಡಿಸಿದ್ದು, ತಾವು ಅವರ ಜತೆಗೆ ಹೊಸ ಸಿನಿಮಾವೊಂದರಲ್ಲಿ ತೊಡಗಿಸಿಕೊಂಡಿರುವುದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ ಈ ಸಿನಿಮಾದ ಬಗ್ಗೆ ತಾವು ಥ್ರಿಲ್ಲ್, ಕಾತುರರಾಗಿರುವುದಾಗಿಯೂ ಹೇಳಿಕೊಂಡಿದ್ದಾರೆ. 

ಮಣಿ ಅವರ ‘ಇರುವರ್’ ಚಿತ್ರದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದ ಐಶ್ವರ್ಯಾ, ಅದರಲ್ಲಿ ಅಧಿಕಾರದಾಹ ಹೊಂದಿರುವ ನಂದಿನಿ ಅನ್ನುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಮೋಹನ್ ಲಾಲ್ ಪತ್ನಿಯಾಗಿ ಈ ಚಿತ್ರದಲ್ಲಿ ಐಶ್ವರ್ಯಾ ನಟಿಸಿದ್ದರು. ಮಣಿ ಅವರ ಹೊಸಚಿತ್ರದಲ್ಲೂ ಮೋಹನ್ ಲಾಲ್ ಪ್ರಧಾನ ಪಾತ್ರದಲ್ಲಿದ್ದಾರೆ ಎನ್ನುವ ಗಾಸಿಪ್ ಕೇಳಿಬರುತ್ತಿದ್ದು, ಇದು ನಿಜವೇ ಆದಲ್ಲಿ ಐಶು–ಲಾಲ್ ಮತ್ತೊಮ್ಮೆ ಜೋಡಿಯಾಗಿ ತೆರೆಯ ಮೇಲೆ ಕಾಣಿಸಿಕೊಳ್ಳುವುದು ಖಚಿತ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು