ನೀರಿನ ಕೊರತೆ: ಸಿಎಂ ನೇತೃತ್ವದಲ್ಲಿ ಸಭೆ

ಮಂಗಳವಾರ, ಜೂನ್ 18, 2019
23 °C
ಜಿಲ್ಲಾಧಿಕಾರಿ ಸೇರಿ ಹಿರಿಯ ಅಧಿಕಾರಿಗಳು ಬೆಂಗಳೂರಿಗೆ ದೌಡು

ನೀರಿನ ಕೊರತೆ: ಸಿಎಂ ನೇತೃತ್ವದಲ್ಲಿ ಸಭೆ

Published:
Updated:

ಮಂಗಳೂರು: ನಗರವೂ ಸೇರಿದಂತೆ ಜಿಲ್ಲೆಯ ವಿವಿವಿಧೆಡೆ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕುರಿತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸೋಮವಾರ ಬೆಂಗಳೂರಿನಲ್ಲಿ ಉನ್ನತಮಟ್ಟದ ಸಭೆ ನಡೆಯಲಿದೆ. ತುಂಬೆ ಅಣೆಕಟ್ಟೆಯ ಹಿನ್ನೀರು ಪ್ರದೇಶದ ಭೂಸ್ವಾಧೀನ ಸೇರಿದಂತೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಸೋಮವಾರ ಸಚಿವ ಸಂಪುಟ ಸಭೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್‌ ಅವರ ಕೋರಿಕೆಯಂತೆ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಕೊರತೆ ಕುರಿತು ಉನ್ನತಮಟ್ಟದ ಸಭೆ ನಡೆಸಲು ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ. ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಬರುವಂತೆ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆರ್‌.ಸೆಲ್ವಮಣಿ ಮತ್ತು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಬಿ.ಎಚ್‌.ನಾರಾಯಣಪ್ಪ ಅವರಿಗೆ ಮುಖ್ಯಮಂತ್ರಿಯವರ ಕಚೇರಿಯಿಂದ ಸೂಚನೆ ಬಂದಿದೆ.

ತುಂಬೆ ಅಣೆಕಟ್ಟೆಯಲ್ಲಿ ಸದ್ಯ ಲಭ್ಯವಿರುವ ನೀರಿನ ಸಂಗ್ರಹ, ಮಳೆ ತಡವಾದಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ರೇಷನಿಂಗ್‌ ವ್ಯವಸ್ಥೆಯ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ತುಂಬೆ ಅಣೆಕಟ್ಟೆಯಲ್ಲಿ ಪೂರ್ಣ ಪ್ರಮಾಣದಲ್ಲಿ ನೀರು ನಿಲ್ಲಿಸಿದಾಗ ಮುಳುಗಡೆಯಾಗುವ ಜಮೀನುಗಳ ಮಾಲೀಕರಿಗೆ ಪರಿಹಾರ ನೀಡಲು ಅನುದಾನ ಕೋರಿರುವ ಪ್ರಸ್ತಾವವೂ ಚರ್ಚೆಗೆ ಬರಲಿದೆ. ಅನುದಾನ ಮಂಜೂರಾತಿಗೆ ಒಪ್ಪಿಗೆ ದೊರೆತರೆ ತಕ್ಷಣದಿಂದಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಜಿಲ್ಲೆಯ ಕೆಲವು ಗ್ರಾಮಗಳಲ್ಲೂ ಕುಡಿಯುವ ನೀರಿನ ಕೊರತೆ ತೀವ್ರವಾಗಿದೆ. ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರುವ ಒದಗಿಸುವ ಉದ್ದೇಶದಿಂದ ಕೈಗೆತ್ತಿಕೊಂಡಿರುವ ಬಹುಗ್ರಾಮ ಯೋಜನೆಗಳ ಪ್ರಗತಿ ಮತ್ತು ಕಿಂಡಿ ಅಣೆಕಟ್ಟೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆಯೂ ಚರ್ಚೆ ನಡೆಯಲಿದೆ. ಪಶ್ಚಿಮ ವಾಹಿನಿ ಯೋಜನೆಯ ಮೊದಲನೇ ಹಂತದ ಕಾಮಗಾರಿಗಳ ಆರಂಭಕ್ಕೆ ನಡೆದಿರುವ ಸಿದ್ಧತೆಯ ಬಗ್ಗೆಯೂ ಮುಖ್ಯಮಂತ್ರಿಯವರು ಪರಿಶೀಲನೆ ನಡೆಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೋರಿಕೆಯಂತೆ ಸಭೆ: ಈ ಕುರಿತು ‘ಪ್ರಜಾವಾಣಿ’ ಜೊತೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್‌, ‘ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಅಗತ್ಯವಾಗಿದೆ. ಈ ಕಾರಣದಿಂದ ತುರ್ತು ಸಭೆ ನಡೆಸುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದೆ. ಅದನ್ನು ಪುರಸ್ಕರಿಸಿ ಅವರು ಸಭೆ ನಿಗದಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಇರುವ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಮಹತ್ವದ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !