ಕೆ.ಎನ್‌.ರಾಜಣ್ಣ ವಿರುದ್ಧ ದ್ವೇಷದ ರಾಜಕಾರಣ: ಸಿಆರ್‌ಎಸ್‌

ಮಂಗಳವಾರ, ಜೂನ್ 25, 2019
22 °C

ಕೆ.ಎನ್‌.ರಾಜಣ್ಣ ವಿರುದ್ಧ ದ್ವೇಷದ ರಾಜಕಾರಣ: ಸಿಆರ್‌ಎಸ್‌

Published:
Updated:
Prajavani

ಮಂಡ್ಯ: ‘ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌.ರಾಜಣ್ಣ ವಿರುದ್ಧ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ರಾಜಣ್ಣ ಅವರನ್ನು ಕೆಳಗಿಳಿಸಿ ಜೈಲಿಗೆ ಹೋಗಿ ಬಂದಿರುವ ಮತ್ತೊಬ್ಬ ವ್ಯಕ್ತಿಗೆ ಹುದ್ದೆ ನೀಡಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ’ ಎಂದು ಕಾಂಗ್ರೆಸ್‌ ಮುಖಂಡ ಎನ್‌.ಚಲುವರಾಯಸ್ವಾಮಿ ಸೋಮವಾರ ಆರೋಪಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಅಧಿಕಾರದ ಆಸೆಗೆ ಅಪೆಕ್ಸ್‌ ಬ್ಯಾಂಕ್‌ ಸೂಪರ್‌ಸೀಡ್‌ ಮಾಡಲಾಗುತ್ತಿದೆ. ಬೆಂಗಳೂರು ಡೇರಿ ಚುನಾವಣೆಯಲ್ಲೂ ಸರ್ಕಾರ ಹಸ್ತಕ್ಷೇಪ ಮಾಡಿದೆ. ಜಿಲ್ಲಾ ಹಾಲು ಉತ್ಪಾದಕ ಸಹಕಾರ ಸಂಘಗಳ ಒಕ್ಕೂಟ (ಮನ್‌ಮುಲ್‌)ದ ಕಾಂಗ್ರೆಸ್‌ ಸದಸ್ಯರನ್ನು ಅನರ್ಹಗೊಳಿಸಿದೆ. ದ್ವೇಷದ ರಾಜಕಾರಣ ಮುಂದುವರಿಯುತ್ತಲೇ ಇದೆ. ಕಾಂಗ್ರೆಸ್‌ ಮುಖಂಡರು ನಡೆಸುತ್ತಿರುವ ಕ್ಲಬ್‌ಗಳ ಮೇಲೆ ದಾಳಿ ನಡೆಯುತ್ತಿದೆ’ ಎಂದರು.

‘ಕಾಂಗ್ರೆಸ್‌ ಮುಖಂಡರ ವಿರುದ್ಧದ ದೌರ್ಜನ್ಯ ಸಹಿಸಿಕೊಂಡು ಕೂರಲು ಸಾಧ್ಯವಿಲ್ಲ. ಕಾರ್ಯಕರ್ತರ ರಕ್ಷಣೆ ಮಾಡುವಂತೆ ನಮ್ಮ ಪಕ್ಷದ ಮುಖಂಡರಾದ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ, ದಿನೇಶ್‌ ಗುಂಡೂರಾವ್‌ ಅವರಿಗೆ ಮನವಿ ಮಾಡುತ್ತೇವೆ’  ಎಂದರು.

‘ಮಧ್ಯಂತರ ಚುನಾವಣೆ ಬಗ್ಗೆ ಕಾಂಗ್ರೆಸ್‌ ಮುಖಂಡರು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸರ್ಕಾರ ಉಳಿಸಲು ಸಕಲ ಯತ್ನಗಳು ನಡೆಯುತ್ತಿವೆ. ಹೀಗಾಗಿ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ’ ಎಂದರು.

ತಿರುಗೇಟು: ‘ಸುಮಲತಾ ಅವರು ಗೆದ್ದು ಇನ್ನೂ ನಾಲ್ಕು ದಿನ ಕಳೆದಿಲ್ಲ. ಆಗಲೇ ಕೆಆರ್‌ಎಸ್‌ ನೀರು ಬಿಡಿಸಲಿ ಎಂದು ಜೆಡಿಎಸ್‌ ಮುಖಂಡರು ಹೇಳಿದ್ದಾರೆ. ಏಳುಜನ ಶಾಸಕರು, ಅವರಲ್ಲಿ ಇಬ್ಬರು ಸಚಿವರು ಮೊದಲು ತಮ್ಮ ಕೆಲಸ ಮಾಡಲಿ’ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿಕೆಗೆ ತಿರುಗೇಟು ನೀಡಿದರು.

‘ಸುಮಲತಾ ಅವರು ನಡವಳಿಕೆಯ ಮೂಲಕ ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಅವರು ಜಿಲ್ಲೆಯ ಜನರ ಹಿತ ಕಾಯುತ್ತಾರೆ ಎಂಬ ನಂಬಿಕೆ ನನಗಿದೆ’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !