ನೀರಿಗಾಗಿ ಪಂಚಾಯ್ತಿ ಎದುರು ಪ್ರತಿಭಟನೆ

ಬುಧವಾರ, ಜೂನ್ 19, 2019
29 °C
ಕೊಣ್ಣೂರು: ಖಾಲಿ ಕೊಡಗಳ ಪ್ರದರ್ಶಿಸಿ ಗ್ರಾಮಸ್ಥರ ಆಕ್ರೋಶ

ನೀರಿಗಾಗಿ ಪಂಚಾಯ್ತಿ ಎದುರು ಪ್ರತಿಭಟನೆ

Published:
Updated:
Prajavani

ಜಮಖಂಡಿ: ಕುಡಿಯುವ ನೀರಿನ ಸಮಸ್ಯೆಯಿಂದ ಬೇಸತ್ತ ತಾಲ್ಲೂಕಿನ ಕೊಣ್ಣೂರ ಗ್ರಾಮಸ್ಥರು ಸೋಮವಾರ ಗ್ರಾಮ ಪಂಚಾಯ್ತಿ ಎದುರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು.

ಮಹಿಳೆಯರು, ಮಕ್ಕಳು ಎನ್ನದೇ ಗ್ರಾಮದ ಸಮಸ್ತರು ಸೇರಿ ಗ್ರಾಮ ಪಂಚಾಯ್ತಿ ಎದುರು ಜಮಾಯಿಸಿ ‘ಬೇಕೆ ಬೇಕು, ನೀರು ಬೇಕು’ ಎಂದು ಘೋಷಣೆ ಹಾಕುತ್ತ ಪ್ರತಿಭಟನೆ ಮಾಡಿದರು.

ಕಳೆದ ಎರಡು ತಿಂಗಳಿಂದ ಗ್ರಾಮದಲ್ಲಿ ನೀರಿನ ಹಾಹಾಕಾರ ಇದೆ. ಆದರೂ ಗ್ರಾಮ ಪಂಚಾಯ್ತಿ ಸಮಸ್ಯೆ ಬಗೆಹರಿಸಲು ಮುಂದಾಗಲಿಲ್ಲ. ದಿನನಿತ್ಯ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು, ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ನೀರು ಪೂರೈಕೆಗೆ ಸಾಕಷ್ಟು ಅನುದಾನ ಇದೆ, ನೀರಿಗೆ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಪರಿಹರಿಸಿ ಎಂದು ಜಿಲ್ಲಾಧಿಕಾರಿ ನಿತ್ಯ ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ.ಆದರೆ ಇಲ್ಲಿ ನೋಡಿದರೆ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ‘ಎರಡು ದಿನಗಳಲ್ಲಿ ನೀರಿನ ಸಮಸ್ಯೆ ಸರಿಪಡಿಸದಿದ್ದರೆ ಗ್ರಾಮ ಪಂಚಾಯ್ತಿ ಮುಂದೆ ಉಪವಾಸ ಸತ್ಯಾಗ್ರಹ ಆರಂಭಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಕೊಣ್ಣೂರ ಗ್ರಾಮ ಪಂಚಾಯ್ತಿ ಪಿಡಿಒ ಅವರಿಗೆ ನೀರು ಕೇಳಿದರೆ ಕೊಳವೆ ಬಾವಿ ಕೊರೆಸುವುದಾಗಿ ಎರಡು ತಿಂಗಳಿನಿಂದ ಹೇಳುತ್ತಿದ್ದಾರೆ. ಆದರೆ ಇಲ್ಲಿಯವರೆಗೆ ಕೊರೆಸಿಲ್ಲ, ಕೆಲಸಕ್ಕೆ ಹೋಗುವದನ್ನು ಬಿಟ್ಟು ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಬಂದಿದೆ ಎಂದು ಅಳಲು ತೋಡಿಕೊಂಡರು.

‘ಜನ ಜಾನುವಾರಗಳ ದಾಹ ನೀಗಿಸಲು ಸಾಧ್ಯವಾಗುತ್ತಿಲ್ಲ, ಮೇವಿನ ಸಮಸ್ಯೆಯು ತೀವ್ರವಾಗಿದೆ, ಜನರು, ದನ ಕರು, ಕುರಿಗಳನ್ನು ಊರೂರು ತಿರುಗಿ ಮೇಯಿಸಲು ಗುಳೆ ಹೋಗುವ ಪರಿಸ್ಥಿತಿ ಬಂದಿದೆ’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !