ಶನಿವಾರ, ಆಗಸ್ಟ್ 15, 2020
26 °C

ತುರ್ತು ಪರಿಸ್ಥಿತಿ ಶೀಘ್ರ ತೆರವು: ಸಿರಿಸೇನಾ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಕೊಲಂಬೊ: ಶ್ರೀಲಂಕಾದಲ್ಲಿ ಹೇರಲಾಗಿರುವ ತುರ್ತು ಪರಿಸ್ಥಿತಿಯನ್ನು ಇನ್ನೊಂದು ತಿಂಗಳಲ್ಲಿ ತೆರವುಗೊಳಿಸಲಾಗುವುದು ಎಂದು ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಸೋಮವಾರ ಹೇಳಿದ್ದಾರೆ. 

‘ಏಪ್ರಿಲ್ 21ರ ಈಸ್ಟರ್ ಭಾನುವಾರದ ಆತ್ಮಾಹುತಿ ದಾಳಿ ನಂತರ ದೇಶದ ಭದ್ರತಾ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು. ಈಗ ವ್ಯವಸ್ಥೆ ಶೇ 99ರಷ್ಟು ಸಹಜ ಸ್ಥಿತಿಗೆ ಮರಳಿದೆ. ಆದ್ದರಿಂದ ಈ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ಅವರು ಹೇಳಿದ್ದಾರೆ. 

ದಾಳಿ ಶಂಕಿತರನ್ನು ವಶಕ್ಕೆ ಪಡೆಯಲು ಹಾಗೂ ಬಂಧಿಸಲು ಸೇನೆಗೆ ಸಂಪೂರ್ಣ ಅಧಿಕಾರ ನೀಡಿ ಸಿರಿಸೇನಾ ಅವರು ಕಠಿಣವಾದ ತುರ್ತು ಪರಿಸ್ಥಿತಿ ಘೋಷಿಸಿದ್ದರು. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು