ಸರ್ಕಾರ ಉಳಿಯಬೇಕಾದರೆ ವಿಶ್ವಾಸ ಅಗತ್ಯ: ಶಾಸಕ ಡಾ.ಕೆ.ಸುಧಾಕರ್

ಬುಧವಾರ, ಜೂನ್ 26, 2019
22 °C

ಸರ್ಕಾರ ಉಳಿಯಬೇಕಾದರೆ ವಿಶ್ವಾಸ ಅಗತ್ಯ: ಶಾಸಕ ಡಾ.ಕೆ.ಸುಧಾಕರ್

Published:
Updated:
Prajavani

ಚಿಕ್ಕಬಳ್ಳಾಪುರ: ‘ಲೋಕಸಭೆ ಚುನಾವಣೆ ಫಲಿತಾಂಶ ಬಂದ ಮೇಲೆ ರಾಜ್ಯದ ಆಡಳಿತದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಸಮ್ಮಿಶ್ರ ಸರ್ಕಾರ ದೀರ್ಘಕಾಲ ಇರಬೇಕಾದರೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ನವರು ವಿಶ್ವಾಸದಿಂದ ಕೆಲಸ ಮಾಡಬೇಕಾಗುತ್ತದೆ’ ಎಂದು ಶಾಸಕ ಡಾ.ಕೆ.ಸುಧಾಕರ್ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎರಡು ಪಕ್ಷಗಳ ಕೆಳಹಂತದ ಕಾರ್ಯಕರ್ತರು, ಮುಖಂಡರು ಒಟ್ಟಾಗಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎನ್ನುವುದರ ಅನಿವಾರ್ಯತೆ ಎಷ್ಟಿದೆ ಎಂಬುದು ಈ ಫಲಿತಾಂಶ ನಮ್ಮೆಲ್ಲರಿಗೂ ತಿಳಿಸಿಕೊಟ್ಟಿದೆ. ಇದು ಮುಖ್ಯಮಂತ್ರಿಯಿಂದ ಹಿಡಿದು ನಮ್ಮೆಲ್ಲರಿಗೂ ಎಚ್ಚರಿಕೆಯಾಗಬೇಕು’ ಎಂದು ತಿಳಿಸಿದರು.

‘ಉಭಯ ಪಕ್ಷಗಳ ಮುಖಂಡರು, ಶಾಸಕರು, ಸಂಸದರು, ಮಾಜಿ ಶಾಸಕರ ನಡುವೆ ಸೌಹಾರ್ದಯುತ ವಾತಾವರಣ ಇಲ್ಲದೆ ಹೋದರೆ ಎರಡು ಪಕ್ಷಗಳಿಗೆ ಹೇಗೆ ದಯನೀಯವಾದ ಸೋಲು ಉಂಟಾಗುತ್ತದೆ ಎನ್ನುವುದಕ್ಕೆ ಈ ಫಲಿತಾಂಶ ದೊಡ್ಡ ಉದಾಹರಣೆ. ನಾವು ಇವತ್ತು ರಾಜಕೀಯವಾಗಿ ನಮ್ಮ ಬೇರುಗಳನ್ನು ಗಟ್ಟಿ ಮಾಡಿಕೊಳ್ಳುವ ಅವಶ್ಯಕತೆ ಇದೆ’ ಎಂದರು.

‘ಚುನಾವಣೆ ಮುನ್ನ ಪರಸ್ಪರ ನಡುವೆ ಇದ್ದ ನಂಬಿಕೆ, ವಿಶ್ವಾಸದ ಕೊರತೆ ಈಗ ಮುಗಿದು ಹೋಗಿರುವ ಅಧ್ಯಾಯ. ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ ನಾಯಕರು ಕೂಲಂಕಷವಾಗಿ ಇದರ ಬಗ್ಗೆ ಚರ್ಚೆ ಮಾಡಿದ್ದಾರೆ. ಎಲ್ಲರನ್ನೂ ವಿಶ್ವಾಸದಿಂದ ಕರೆದುಕೊಂಡು ಹೋಗುತ್ತೇನೆ ಎಂದು ಮುಖ್ಯಮಂತ್ರಿ ಅವರು ಭರವಸೆ ನೀಡಿರುವುದರಿಂದ ನಾವು ಅವರನ್ನು ನಂಬಿದ್ದೇವೆ’ ಎಂದು ಹೇಳಿದರು.

‘ಸಿದ್ದರಾಮಯ್ಯ ಅವರು ಯಾವತ್ತೂ ಬ್ಲಾಕ್‌ಮೇಲ್‌ ಮಾಡುವ ರಾಜಕಾರಣಿಯಲ್ಲ. ಮನಸ್ಸಿನಲ್ಲಿ ಇದ್ದದ್ದು ನೇರವಾಗಿ ಹೇಳುವ ಗುಣದವರು. ಅವರಿಗೆ ಈ ಸರ್ಕಾರ ಉಳಿಯಬಾರದು ಎನಿಸಿದರೆ ಸರ್ಕಾರ ಉಳಿಯಲು ಸಾಧ್ಯವಿಲ್ಲ. ಅವರಿಗೆ ಸರ್ಕಾರ ಉಳಿಯಬೇಕು. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯಬೇಕು ಎಂದು ಪಣ ತೊಟ್ಟಿದ್ದಾರೆ. ಆದ್ದರಿಂದ ಮಾಹಿತಿ ಕೊರತೆಯಿಂದ ಯಡಿಯೂರಪ್ಪ ಅವರು ಇಲ್ಲಸಲ್ಲದ ಆರೋಪ ಮಾಡಬಾರದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !