ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜೂ.10ರಂದು ರಾಷ್ಟ್ರೀಯ ಹೆದ್ದಾರಿ ಬಂದ್

ಮಂಗಳವಾರ, ಜೂನ್ 18, 2019
25 °C
ರೈತಸಂಘದ ವತಿಯಿಂದ ಪ್ರತಿಭಟನೆ

ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜೂ.10ರಂದು ರಾಷ್ಟ್ರೀಯ ಹೆದ್ದಾರಿ ಬಂದ್

Published:
Updated:

ಚಿಕ್ಕಬಳ್ಳಾಪುರ: ‘ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೂನ್ 10 ರಂದು ರೈತ ಸಂಘದ ವತಿಯಿಂದ ಚದುಲಪುರ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ದಿನವೀಡಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಹೇಳಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘2014ರಲ್ಲಿ ಜಾರಿಗೆ ತಂದ ಭೂಸ್ವಾಧೀನ ಕಾಯ್ದೆ ತಿದ್ದುಪಡಿಯನ್ನು ಸರ್ಕಾರ ವಾಪಸ್ ಪಡೆಯಬೇಕು. ಸ್ವಾಧೀನ ಪಡಿಸಿಕೊಂಡ ನಗರ ಪ್ರದೇಶ ವ್ಯಾಪ್ತಿಯ ಭೂಮಿಗೆ ಮಾರುಕಟ್ಟೆಗಿಂತ ಎರಡು ಪಟ್ಟು ದರ ನೀಡಬೇಕು’ ಎಂದು ಆಗ್ರಹಿಸಿದರು. 

‘ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಐದು ವರ್ಷದ ಒಳಗೆ ಉದ್ದೇಶಿತ ಯೋಜನೆಗಳಗೆ ಬಳಸದಿದ್ದರೆ ರೈತರಿಗೆ ವಾಪಸ್ ನೀಡಬೇಕು ಎಂಬ ನಿಯಮ ಇದೆ. ಆದರೆ ಸರ್ಕಾರ ಈ ಅಂಶ ಕೈಬಿಟ್ಟು ರೈತ ಸಮುದಾಯಕ್ಕೆ ದ್ರೋಹ ಬಗೆದಿದೆ’ ಎಂದು ಆರೋಪಿಸಿದರು.

‘ರಾಜ್ಯವು ಸತತವಾಗಿ ಬರಗಾಲಕ್ಕೆ ಗುರಿಯಾಗುತ್ತಿದೆ. ಬರಪೀಡಿತ ರಾಜ್ಯಗಳಲ್ಲಿ ದೇಶದಲ್ಲೇ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ಈ ವರ್ಷವಂತೂ ಬರಗಾಲ ಅತ್ಯಂತ ತೀವ್ರವಾಗಿದೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವದಿಂದ ರೈತರು ಕಂಗಾಲಾಗಿದ್ದಾರೆ. ನೀರು, ಮೇವಿಲ್ಲದೆ ಜಾನುವಾರುಗಳನ್ನು ಸಂತೆಗಳಲ್ಲಿ ಕೈಗೆ ಬಂದ ಬೆಲೆಗೆ ಮಾರುತ್ತಿದ್ದಾರೆ’ ಎಂದು ತಿಳಿಸಿದರು.

‘ಬರಗಾಲದಿಂದ ತತ್ತರಿಸುತ್ತಿರುವ ಬಯಲು ಸೀಮೆ ರೈತರು ಹಾಗೂ ಗ್ರಾಮೀಣ ಪ್ರದೇಶದ ರೈತರು ಜೀವನೋಪಾಯಕ್ಕಾಗಿ ಕೆಲಸ ಹುಡುಕಿಕೊಂಡು ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ರಾಜ್ಯದಲ್ಲಿ ಇಷ್ಟೆಲ್ಲ ಕಷ್ಟಗಳು ಇದ್ದರೂ ನಮ್ಮ ಜನಪ್ರತಿನಿಧಿಗಳು ತಮ್ಮ ಖುರ್ಚಿ ಉಳಿಸಿಕೊಳ್ಳುವ ಕಡೆ ಗಮನ ಹರಿಸಿ ಜನರನ್ನು ಮರೆತಿದ್ದಾರೆ’ ಎಂದು ಹೇಳಿದರು.

ರೈತ ಸಂಘದ ಜಿಲ್ಲಾ ಘಟಕ ಕಾರ್ಯದರ್ಶಿ ಮಂಡಿಕಲ್ ವೇಣು, ಉಪಾಧ್ಯಕ್ಷ ಸತ್ಯನಾರಾಯಣ, ತಾಲ್ಲೂಕು ಘಟಕದ ಅಧ್ಯಕ್ಷರಾದ ಸೀಕಲ್ ರಮಣಾರೆಡ್ಡಿ, ತಾದೂರು ಮಂಜುನಾಥ್, ಎಂ.ರಾಮಾಂಜಿನಪ್ಪ, ಎಸ್.ಲಕ್ಷ್ಮಣರೆಡ್ಡಿ, ಕೋಲವ ನರಸಿಂಹರೆಡ್ಡಿ, ಎಚ್.ಪಿ.ರಮಾನಾಥ್ ಹಾಜರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !