ಕಾಮಗಾರಿ ಕಳಪೆಯಾದರೆ ದೂರು ನೀಡಿ: ಶಾಸಕ ಡಾ.ಕೆ.ಸುಧಾಕರ್

ಗುರುವಾರ , ಜೂನ್ 20, 2019
31 °C
ವಿವಿಧ ವಾರ್ಡ್‌ಗಳಲ್ಲಿ ನಡೆದಿರುವ ವಿಶೇಷ ಅನುದಾನ ಮತ್ತು ನಗರೋತ್ಥಾನ ಕಾಮಗಾರಿಗಳನ್ನು ವೀಕ್ಷಿಸಿದ ಶಾಸಕ

ಕಾಮಗಾರಿ ಕಳಪೆಯಾದರೆ ದೂರು ನೀಡಿ: ಶಾಸಕ ಡಾ.ಕೆ.ಸುಧಾಕರ್

Published:
Updated:
Prajavani

ಚಿಕ್ಕಬಳ್ಳಾಪುರ: ‘ನಗರೋತ್ಥಾನ 3ನೇ ಹಂತ ಮತ್ತು ವಿಶೇಷ ಅನುದಾನ ಸೇರಿ ಸುಮಾರು ₹100 ಕೋಟಿ ವೆಚ್ಚದಲ್ಲಿ ಸುಸಜ್ಜಿತ ನಗರ ಅಭಿವೃದ್ಧಿಪಡಿಸುವ ಕನಸು ಈಗ ನನಸಾಗುತ್ತಿದೆ. ಇದು ನಮ್ಮೆಲ್ಲರ ನಗರ. ಆದ್ದರಿಂದ ನಾಗರಿಕರು ಯಾವುದೇ ಕಾಮಗಾರಿಯಲ್ಲಿ ಗುಣಮಟ್ಟ ಕಂಡುಬರದಿದ್ದರೆ ನನಗೆ ನೀಡಬೇಕು’ ಎಂದು ಶಾಸಕ ಡಾ.ಕೆ.ಸುಧಾಕರ್ ಹೇಳಿದರು.

ವಿಶೇಷ ಅನುದಾನ ಮತ್ತು ನಗರೋತ್ಥಾನ 3ನೇ ಹಂತದ ಯೋಜನೆ ಅಡಿ ನಗರದ 5, 16 ಮತ್ತು 19 ವಾರ್ಡ್‌ಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಶನಿವಾರ ವೀಕ್ಷಿಸಿ ಗುಣಮಟ್ಟ ಪರೀಕ್ಷಿಸಿದ ಅವರು ಸಾರ್ವಜನಿಕರನ್ನು ಕುರಿತು ಮಾತನಾಡಿದರು.

‘ಕಾಮಗಾರಿಯಲ್ಲಿ ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಂಡಿರುವುದು ಸಂತೋಷದ ವಿಚಾರ. ಕೆಲವೆಡೆ ತಾಂತ್ರಿಕ ಸಮಸ್ಯೆಗಳಿಂದ ಕಾಮಗಾರಿ ನಿಂತಿವೆ. ಆ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿರುವೆ. ಡಿಸೆಂಬರ್ ಅಂತ್ಯಕ್ಕೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತದೆ’ ಎಂದು ತಿಳಿಸಿದರು.

ಐ.ಡಿ.ಎಸ್.ಎಂ.ಟಿ ಹಾಗೂ ಮುನಿಸಿಪಲ್ ಬಡಾವಣೆಗಳಲ್ಲಿನ ಉದ್ಯಾನವನಗಳಿಗೆ ಭೇಟಿ ನೀಡಿದ ಶಾಸಕರು, ‘ನಗರವನ್ನು ಸುಂದರಗೊಳಿಸುವ ನಿಟ್ಟಿನಲ್ಲಿ 8 ಉದ್ಯಾನಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕಂದವಾರ ಮತ್ತು ಅಪ್ಪಯ್ಯನ ಕುಂಟೆ ಪ್ರದೇಶದಲ್ಲಿ ವಿದೇಶಗಳ ಮಾದರಿಯಲ್ಲಿ ₹14 ಕೋಟಿ ವೆಚ್ಚದಲ್ಲಿ ಬಯಲು ಜಾಗ ಅಭಿವೃದ್ಧಿಪಡಿಸಲಾಗುತ್ತದೆ’ ಎಂದರು.

‘ಕಂದವಾರ, ಅಮಾನಿ ಗೋಪಾಲಕೃಷ್ಣ ಕೆರೆ ಅಭಿವೃದ್ಧಿಪಡಿಸಲಾಗುತ್ತದೆ. ನಗರಕ್ಕೆ ಬೇಕಾದ ಎಲ್ಲ ಮೂಲಸೌಕರ್ಯಗಳನ್ನು ಒದಗಿಸುವ ಕೆಲಸ ಮಾಡುತ್ತಿದ್ದೇವೆ. ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವರೆಗೆ ಮೆಟ್ರೊ ಸಂಚಾರ ಸೇವೆ ಆರಂಭಗೊಂಡ ಬಳಿಕ ಅದನ್ನು ಚಿಕ್ಕಬಳ್ಳಾಪುರದ ವರೆಗೆ ವಿಸ್ತರಿಸುವ ಉದ್ದೇಶವಿದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಸದಸ್ಯರಾದ ಲೀಲಾವತಿ ಶ್ರೀನಿವಾಸ್, ಮುನಿಕೃಷ್ಣ, ಮಹಾಕಾಳಿ ಬಾಬು, ನಾಗರತ್ನಾ ಯತೀಶ್, ಜಯಮ್ಮ, ಪದ್ಮಮ್ಮ, ಗಜೇಂದ್ರ, ಮಂಜುನಾಥಾಚಾರಿ, ಶಶಿಕುಮಾರ್, ಮುಖಂಡರಾದ ಅಪ್ಪಾಲು ಮಂಜು, ರಾಮ್ ಕುಮಾರ್, ಆನಂದರೆಡ್ಡಿ, ನಾಗರಾಜ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ನಟರಾಜ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಾಧವನ್ ಹಾಜರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !