ಸೋಮವಾರ, ಏಪ್ರಿಲ್ 12, 2021
26 °C

ಮಲೇರಿಯಾ; ಸೂಕ್ತ ಚಿಕಿತ್ಸೆ ಪಡೆಯಿರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ದೇಶವನ್ನು 2022ರೊಳಗೆ ಮಲೇರಿಯಾ ಮುಕ್ತ ಮಾಡಬೇಕಾಗಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯ' ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಂ.ಎಸ್. ಪಲ್ಲೇದ ಹೇಳಿದರು.

ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾಮಟ್ಟದ ಮಲೇರಿಯಾ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮಲೇರಿಯಾ ಪತ್ತೆಯಾದ ರೋಗಿಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಶೀಘ್ರ ಚಿಕಿತ್ಸೆ ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡೆಯಬೇಕು’ ಎಂದರು.

ಇಲ್ಲಿನ ಮಲಪ್ರಭಾ ನಗರ ಹಾಗೂ ವಡಗಾವಿಯ ಮಾಧವಪುರದಲ್ಲಿ ಜಾಗೃತಿ ಜಾಥಾ ಜರುಗಿತು. ನಗರ ಸೇವಕ ರಮೇಶ ಸೊಂಟಕ್ಕಿ ಚಾಲನೆ ನೀಡಿದರು. 

ರತನ ಮಾಸೇಕರ ಮಲೇರಿಯಾ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿದರು. ಜಿಲ್ಲಾ ಪ್ರಭಾರ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಯಲಿಗಾರ, ಸಿ.ಜಿ. ಅಗ್ನಿಹೋತ್ರಿ, ಅಹ್ಮದ ಕಲೀಮುಲ್ಲಾ, ಕೀಟಶಾಸ್ತ್ರ ತಜ್ಞರಾದ ಗಣಪತಿ ಬಾರ್ಕಿ, ಶಿಲ್ಪಾ ಹಳೆಮನಿ, ನಗರ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು