ಭಾನುವಾರ, ಏಪ್ರಿಲ್ 11, 2021
28 °C

ಕ್ರೌರ್ಯ ತಡೆಗಟ್ಟದಿದ್ದರೆ ಭವಿಷ್ಯದಲ್ಲಿ ವಿನಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಪರಿಸರದ ಮೇಲೆ ನಡೆಯುತ್ತಿರುವ ಮನುಷ್ಯ ನಿರಂತರ ಕ್ರೌರ್ಯ ತಡೆಗಟ್ಟದಿದ್ದಲ್ಲಿ ಮುಂದೊಂದು ದಿನ ವಿನಾಶ ಕಟ್ಟಿಟ್ಟ ಬುತ್ತಿ. ಹೀಗಾಗಿ ಪ್ರಕೃತಿಯನ್ನು ಉಳಿಸಿ ಪೋಷಿಸಿಕೊಳ್ಳುವ ಅನಿವಾರ್ಯತೆ ಹಿಂದೆಂದಿಗಿಂತಲೂ ಈಗ ಪ್ರಸ್ತುತವಾಗಿದೆ’ ಎಂದು ಕೆ. ವಿ. ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ವಿ.ನರೇಂದ್ರಬಾಬು ತಿಳಿಸಿದರು.

‘ವಿಶ್ವ ಪರಿಸರ ದಿನಾಚರಣೆ’ ಪ್ರಯುಕ್ತ ನಗರದ ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆಯಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಇರುವುದು ಒಂದೇ ಪ್ರಪಂಚ. ಆದ್ದರಿಂದ ಇತರೆ ಜೀವಿಗಳಂತೆಯೇ ಮನುಷ್ಯ ಸಹ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಇದನ್ನು ಕರ್ತವ್ಯವೆಂದು ಭಾವಿಸಿ ಮನಸ್ಸಿನ ನಾಗಾಲೋಟಕ್ಕೆ ಕಡಿವಾಣ ಹಾಕಿ, ಪ್ರಕೃತಿದತ್ತ ವಸ್ತುಗಳನ್ನು ಮಿತವಾಗಿ ಬಳಸಿ ಉಳಿಸಿದಾಗ ಮುಂದಿನ ಪೀಳಿಗೆಯು ನೆಮ್ಮದಿಯಿಂದ ಬದುಕಬಹುದು’ ಎಂದು ಹೇಳಿದರು.

ಸಹಾಯಕ ವಾರ್ತಾಧಿಕಾರಿ ಮೈನಾಶ್ರೀ ಮಾತನಾಡಿ, ‘ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಪರಿಸರ ಮಾಲಿನ್ಯ ತಡೆಗಟ್ಟಬಹುದು. ಸರ್ಕಾರವೂ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದು, ಪರಿಸರ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರದ ಸಮತೋಲನ ಕಾಪಾಡಿಕೊಳ್ಳಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ’ ಎಂದರು.

ವಿದ್ಯಾರ್ಥಿಗಳಿಗಾಗಿ ಫ್ಯಾನ್ಸಿ ಡ್ರೆಸ್, ಭಿತ್ತಿ ಪತ್ರ, ಭಾಷಣ ಹಾಗೂ ಚಿತ್ರ ಬಿಡಿಸುವ ಸ್ಪರ್ಧೆಗಳನ್ನು, ವಿಶ್ವ ಪರಿಸರ ದಿನಾಚರಣೆಯ ಸಂದೇಶದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಂ. ಎಸ್.ಶೈಲಜಾ, ಕಾರ್ಯದರ್ಶಿ ಎನ್.ವೆಂಕಟೇಶ್, ಪ್ರಾಂಶುಪಾಲೆ ವಿಜಯಲಕ್ಷ್ಮೀರಾವ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು