ಸ್ವಚ್ಛತೆಯಿಂದ ಅತಿಸಾರ ಭೇದಿ ದೂರ

ಮಂಗಳವಾರ, ಜೂನ್ 18, 2019
26 °C
‘ತೀವ್ರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ’ ಕಾರ್ಯಕ್ರಮ

ಸ್ವಚ್ಛತೆಯಿಂದ ಅತಿಸಾರ ಭೇದಿ ದೂರ

Published:
Updated:
Prajavani

ಚಿಕ್ಕಬಳ್ಳಾಪುರ: ‘ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಾಗರಿಕರು ಸ್ವಚ್ಛತೆ ಕಾಪಾಡಿಕೊಂಡಾಗ ಮಾತ್ರ ಮಕ್ಕಳಲ್ಲಿ ಉಂಟಾಗುವ ಅತಿಸಾರ ಭೇದಿ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯ’ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬಿ.ಎಂ.ರವಿಶಂಕರ್ ಹೇಳಿದರು.

ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ತೀವ್ರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅತಿಸಾರ ಭೇದಿ ಐದು ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ. ಹೀಗಾಗಿ ತಾಯಂದಿರು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಸದಾ ಶುದ್ಧ ಕುಡಿಯುವ ನೀರು ಬಳಕೆ ಮಾಡಬೇಕು. ಮನೆ ಅಂಗಳ, ಚರಂಡಿ, ಶೌಚಾಲಯ ಸೇರಿ ಮನೆಯ ಸುತ್ತ ಸ್ವಚ್ಛತೆ ಇರುವಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.

‘ಬಾಲ್ಯಾವಸ್ಥೆಯಲ್ಲಿ ಅತಿಸಾರ ಭೇದಿ ಶೂನ್ಯ ಶಿಶು ಮರಣ’ ಎಂಬ ಧ್ಯೇಯದೊಂದಿಗೆ ಜೂನ್‌3 ರಿಂದ 17ರ ವರೆಗೆ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಆಚರಿಸಲಾಗತ್ತಿದೆ. ಸರಿಯಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಜತೆಗೆ ಸಾಂಕ್ರಾಮಿಕ ರೋಗಗಳನ್ನು ಸಂಪೂರ್ಣ ತಡೆಗಟ್ಟುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ’ ಎಂದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯ್ ಕುಮಾರ್ ಮಾತನಾಡಿ, ‘ಶುದ್ಥ ಕುಡಿಯುವ ನೀರು, ಸ್ವಚ್ಛ ಪರಿಸರ ಹಾಗೂ ವೈಯಕ್ತಿಕ ನೈರ್ಮಲ್ಯ, ಎದೆ ಹಾಲುಣಿಸುವುದು, ಸೂಕ್ತ ಆಹಾರ ಸೇವನೆ ಮತ್ತು ಊಟಕ್ಕೆ ಮುನ್ನ ಹಾಗೂ ಶೌಚಾಲಯ ಬಳಕೆ ನಂತರ ಕೈಗಳನ್ನು ಸ್ವಚ್ಛವಾಗಿ ತೊಳೆಯುವುದು ರೂಢಿಸಿಕೊಂಡರೆ ಭೇದಿಯನ್ನು ತಡೆಗಟ್ಟಬಹುದು’ ಎಂದು ತಿಳಿಸಿದರು.

‘ಅತಿಸಾರ ಭೇದಿಯಿಂದ ಮಕ್ಕಳು ಸಾಯುವುದು ನಿಯಂತ್ರಿಸಲು ಮಕ್ಕಳ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗದಂತೆ ನೋಡಿಕೊಳ್ಳಬೇಕು. ಆ ದಿಸೆಯಲ್ಲಿ ತಕ್ಷಣ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು. ಶೌಚ ನಂತರ, ಆಟವಾಡಿದ ಬಳಿಕ, ಪ್ರಾಣಿಗಳನ್ನು ಮುಟ್ಟಿದಾಗ, ಅಡುಗೆ ಮಾಡುವ ಮೊದಲು, ಮಕ್ಕಳಿಗೆ ಊಟ ತಿನ್ನಿಸುವ ಮೊದಲು ಸಾಬೂನಿನಿಂದ ಕೈಗಳನ್ನು ಸ್ವಚ್ಛವಾಗಿ ತೊಳೆಯಬೇಕು’ ಎಂದು ಹೇಳಿದರು.

ಮಕ್ಕಳ ತಜ್ಞ ಡಾ ಪ್ರಕಾಶ್ ಮಾತನಾಡಿ, ‘ಹೆಚ್ಚಿನ ಸಂದರ್ಭಗಳಲ್ಲಿ ಕೈ ಶುಚಿಯಾಗಿಟ್ಟುಕೊಳ್ಳದೆ ಮಕ್ಕಳಿಗೆ ಹಾಗೇ ಊಟ ಮಾಡಿಸುವುದು ಕೂಡ ಅತಿಸಾರ ಭೇದಿಗೆ ಕಾರಣವಾಗುತ್ತದೆ. ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಮತ್ತು ಪೋಷಕರಲ್ಲಿ ಮಕ್ಕಳಲ್ಲಿ ಅತಿಸಾರ ಭೇದಿಯನ್ನು ನಿಯಂತ್ರಿಸುವ ಬಗ್ಗೆ ಜಾಗೃತಿ ಮೂಡಿಸಬೇಕಿದೆ’ ಎಂದರು. ಜಿಲ್ಲಾ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ. ರಮೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ ಮುನಿಯಪ್ಪ ಉಪಸ್ಥಿತರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !