ಯಡಿಯೂರಪ್ಪ ರಾಜೀನಾಮೆ ಕೊಡುತ್ತಾರಾ: ಪುಟ್ಟರಾಜು

ಮಂಗಳವಾರ, ಜೂನ್ 25, 2019
29 °C

ಯಡಿಯೂರಪ್ಪ ರಾಜೀನಾಮೆ ಕೊಡುತ್ತಾರಾ: ಪುಟ್ಟರಾಜು

Published:
Updated:
Prajavani

ಮಂಡ್ಯ: ‘ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ರಾಜಕೀಯ ನಿವೃತ್ತಿ ಪಡೆಯಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಆದರೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪುರಸಭೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಅದಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ರಾಜೀನಾಮೆ ಕೊಡುತ್ತಾರಾ’ ಎಂದು ಸಣ್ಣ ನೀರಾವರಿ ಸಿ.ಎಸ್‌.ಪುಟ್ಟರಾಜು ಮಂಗಳವಾರ ಸವಾಲು ಹಾಕಿದರು.

‘ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ತಮ್ಮ ಕೆಲಸದ ವೇಗ ಹೆಚ್ಚಿಸಿಕೊಂಡಿದ್ದಾರೆ. ಆದರೆ ವಿರೋಧಿಗಳು ಗಾಳಿ ಸುದ್ದಿ ಹಬ್ಬಿಸುತ್ತಿದ್ದಾರೆ. ಜನರು ಗಾಸಿಪ್‌ಗಳಿಗೆ ಕಿವಿಗೊಡಬಾರದು. ನಿಖಿಲ್‌ ಸೋಲಿನಿಂದಾಗಿ ಮುಖ್ಯಮಂತ್ರಿ ಮಂಡ್ಯ ಮರೆಯುತ್ತಾರೆ ಎಂಬುದೆಲ್ಲಾ ಸುಳ್ಳು. ಮಂಡ್ಯ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಇನ್ನೂ ಹೆಚ್ಚಿನ ಅನುದಾನ ಕೊಡುತ್ತಾರೆ’ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಅಮಾವಾಸ್ಯೆ ಅಡ್ಡಿ: ‘ಕೆ.ನಿಖಿಲ್‌ ಮಂಡ್ಯದಲ್ಲೇ ಇರುತ್ತಾರೆ. ಅಮಾವಾಸ್ಯೆ ಮುಗಿಸಿ ಬರಲು ಕಾಯುತ್ತಿದ್ದರು. ಇನ್ನು ಮುಂದೆ ಮಂಡ್ಯದ ಜನರ ನಡುವೆಯೇ ಇರುತ್ತಾರೆ. ತೋಟ ಖರೀದಿಸಿ ಕೃಷಿ ಮಾಡುತ್ತಾರೆ. ಮನೆ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ’ ಎಂದರು.

‘ಎಚ್‌.ವಿಶ್ವನಾಥ್‌ ಅವರು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಚುನಾವಣೆಗೂ ಮುನ್ನವೇ ನಿರ್ಧರಿಸಿದ್ದರು. ಚುನಾವಣೆ ಮುಗಿಯುವವರೆಗೂ ಕಾಯುವಂತೆ ತಿಳಿಸಿದ್ದೆವು. ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !