ಬುದ್ಧಿವಾದ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ

ಬುಧವಾರ, ಜೂನ್ 19, 2019
25 °C

ಬುದ್ಧಿವಾದ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ

Published:
Updated:

ಬೆಂಗಳೂರು: ಮಾರತ್ತಹಳ್ಳಿಯ ಪಣತ್ತೂರು ಮುಖ್ಯರಸ್ತೆಯಲ್ಲಿರುವ ಪೇಯಿಂಗ್‌ ಗೆಸ್ಟ್‌ ಕಟ್ಟಡವೊಂದರಲ್ಲಿ ಗೋಪಾಲ್‌ಸಿಂಗ್ (15) ಎಂಬಾತ ನೇಣು ಹಾಕಿಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನೇಪಾಳದ ಹರಿಸಿಂಗ್‌ ದಂಪತಿ ಪುತ್ರನಾಗಿದ್ದ ಗೋಪಾಲ್‌, ಎಂಟನೇ ತರಗತಿಯಲ್ಲಿ ಓದುತ್ತಿದ್ದ. ಆತನಿಗೆ ಇಬ್ಬರು ಸಹೋದರರಿದ್ದಾರೆ. ಪೇಯಿಂಗ್‌ ಗೆಸ್ಟ್‌ ಕಟ್ಟಡದಲ್ಲೇ ತಂದೆ ಹರಿಸಿಂಗ್, ಭದ್ರತಾ ಸಿಬ್ಬಂದಿ ಆಗಿ ಕೆಲಸ ಮಾಡುತ್ತಿದ್ದರು. ಕಟ್ಟಡದ ಹಿಂಭಾಗದ ಮನೆಯಲ್ಲಿ ಕುಟುಂಬ ಸಮೇತ ನೆಲೆಸಿದ್ದರು.

‘ಗೋಪಾಲ್‌ಸಿಂಗ್, ಹೆಚ್ಚು ಹೊತ್ತು ಮೊಬೈಲ್ ಬಳಸುತ್ತಿದ್ದ. ಪೋಷಕರು ಎಷ್ಟೇ ಹೇಳಿದರೂ ಮೊಬೈಲ್ ಬಳಕೆ ಕಡಿಮೆ ಮಾಡಿರ
ಲಿಲ್ಲ. ಸೋಮವಾರ ಮಧ್ಯಾಹ್ನ ಗೋಪಾಲ್ ಸಿಂಗ್, ಮೊಬೈಲ್‌ನಲ್ಲಿ ಆಟವಾಡುತ್ತಿದ್ದ. ಅದನ್ನು ನೋಡಿದ್ದ ತಂದೆ, ಮೊಬೈಲ್‌ ಕಸಿದುಕೊಂಡಿದ್ದರು. ಇನ್ನೊಮ್ಮೆ ಮೊಬೈಲ್ ಬಳಸದಂತೆ ಬುದ್ಧಿ  ಹೇಳಿದ್ದರು’ ಎಂದು ಪೊಲೀಸರು ಹೇಳಿದರು. ‘ತಂದೆಯ ಮಾತಿನಿಂದ ಕೋಪಗೊಂಡ ಬಾಲಕ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಂದೆ ದೂರು ನೀಡಿದ್ದು ದಾಖಲಿಸಿಕೊಳ್ಳಲಾಗಿದೆ’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !