ಬೆಂಕಿಗೆ ಬಸ್ ಸಂಪೂರ್ಣ ಭಸ್ಮ-ಕೂದಲೆಳೆಯ ಅಂತರದಲ್ಲಿ ಪ್ರಯಾಣಿಕರು ಪಾರು

ಮಂಗಳವಾರ, ಜೂನ್ 25, 2019
27 °C
ಬೆಳಗಿನ ಜಾವ ಸಂಭವಿಸಿದ ಘಟನೆ

ಬೆಂಕಿಗೆ ಬಸ್ ಸಂಪೂರ್ಣ ಭಸ್ಮ-ಕೂದಲೆಳೆಯ ಅಂತರದಲ್ಲಿ ಪ್ರಯಾಣಿಕರು ಪಾರು

Published:
Updated:

ಹೈದರಾಬಾದ್: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಉಂಟಾಗಿ ಬಸ್ ಸಂಪೂರ್ಣ ಭಸ್ಮವಾಗಿರುವ ಘಟನೆ ಗುರುವಾರ ಬೆಳಗಿನ ಜಾವ ಸಂಭವಿಸಿದೆ.

ಸುಮಾರು 29 ಪ್ರಯಾಣಿಕರಿದ್ದ ಈ ಬಸ್ಸು ಆಂಧ್ರದಿಂದ ಬರುತ್ತಿದ್ದಾಗ ಬೆಂಗಳೂರು- ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಬೆಳಗಿನ ಜಾವ 3.45ರಲ್ಲಿ ಪ್ರಯಾಣಿಕರು ನಿದ್ರೆಗೆ ಜಾರಿದ್ದರು. ಈ ಸಮಯದಲ್ಲಿ ಇದ್ದಕ್ಕಿದ್ದಂತೆ ಬಸ್ಸಿನಲ್ಲಿ ಹೊಗೆ ಬರಲಾರಂಭಿಸಿದೆ. ಇದನ್ನು ಗಮನಿಸಿದ ಚಾಲಕ ಕೂಡಲೆ ಬಸ್ಸು ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ತುರ್ತಾಗಿ ಕೆಳಗಿಳಿಸಿದ್ದಾನೆ.

ಎಲ್ಲರೂ ಕೆಳಗೆ ಇಳಿದ ಕ್ಷಣ ಮಾತ್ರದಲ್ಲಿಯೇ ಇಡೀ ಬಸ್ಸು ಹೊತ್ತಿ ಉರಿದಿದೆ. ವಿಷಯ ತಿಳಿದ ಕೂಡಲೆ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಬಸ್ಸು ಸಂಪೂರ್ಣ ಸುಟ್ಟುಹೋಗಿದೆ. ನಂತರ ಕ್ರೇನ್ ಸಹಾಯದಿಂದ ಬಸ್ಸನ್ನು ಸ್ಥಳಾಂತರಿಸಲಾಗಿದೆ ಎಂದು ಪೀಪುಲ್ಲಿ ಪೊಲೀಸ್ ಠಾಣೆಯ ಸಬ್ ಇನ್ಸ್‌‌ಪೆಕ್ಟರ್ ಮಾರುತಿ ಶಂಕರ್ ತಿಳಿಸಿದ್ದಾರೆ. ಘಟನೆಗೆ ಎಂಜಿನ್ನಿನಲ್ಲಿ ಕಾಣಿಸಿಕೊಂಡ ತಾಂತ್ರಿಕ ತೊಂದರೆಯೇ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದು ಯಾವುದೇ ತೊಂದರೆಯಾಗಿಲ್ಲ ಎನ್ನಲಾಗಿದೆ.

ಈ ಘಟನೆಯಿಂದಾಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವರು ಹೈದರಾಬಾದ್‌‌ಗೆ ವಾಪಸಾಗಿದ್ದಾರೆ, ಮತ್ತೆ ಕೆಲವರು ಬೇರೊಂದು ಬಸ್ಸಿನಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.
ಕಳೆದ ತಿಂಗಳು ಕರ್ನೂಲು ಜಿಲ್ಲೆಯ ವೇಲ್ದುರ್ತಿ ಸಮೀಪ  ಬೆಂಗಳೂರಿನ ಖಾಸಗಿ ಬಸ್ಸೊಂದರಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕಕ್ಕೆ 15 ಮಂದಿ ಬಲಿಯಾಗಿದ್ದರು. 

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 1

  Sad
 • 4

  Frustrated
 • 1

  Angry

Comments:

0 comments

Write the first review for this !