ಸಿಇಟಿ: ದಾಖಲೆ ಪರಿಶೀಲನೆ ಆರಂಭ

ಗುರುವಾರ , ಜೂನ್ 27, 2019
26 °C

ಸಿಇಟಿ: ದಾಖಲೆ ಪರಿಶೀಲನೆ ಆರಂಭ

Published:
Updated:
Prajavani

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೂಲಕ ವೃತ್ತಿಪರ ಕೋರ್ಸ್‌ಗಳ ಆಯ್ಕೆಗಾಗಿ ವಿವಿಧ ಜಿಲ್ಲೆಗಳಲ್ಲಿ ಗುರುವಾರದಿಂದ ದಾಖಲೆಗಳ ಪರಿಶೀಲನೆ ಆರಂಭವಾಯಿತು. 1ರಿಂದ 2000 ರ‍್ಯಾಂಕ್‌ಗಳ ವರೆಗಿನ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಲಾಯಿತು.

ರಾಮನಗರದಲ್ಲಿ ಬೆಳಿಗ್ಗೆ ಬಿಎಸ್‌ಎನ್‌ಎಲ್‌ ಅಂತರ್ಜಾಲ ಲಭ್ಯವಾಗಲಿಲ್ಲ. ಇದರಿಂದಾಗಿ ದಾಖಲೆ ಪರಿಶೀಲನೆಗೆ ತೊಡಕಾಯಿತು. ದೂರದಿಂದ ಬಂದಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರು ಕಾಯುತ್ತಲೇ ಇದ್ದರು.

ಕೇಂದ್ರದ ನೋಡಲ್‌ ಅಧಿಕಾರಿಗಳು ಬಿಎಸ್‌ಎನ್‌ಎಲ್‌ ಅಧಿಕಾರಿಗಳನ್ನು ಸಂಪರ್ಕಿಸುವ ಪ್ರಯತ್ನ ಮಾಡಿದರೂ ಸ್ಪಂದನೆ ದೊರೆಯಲಿಲ್ಲ. ಮಧ್ಯಾಹ್ನ 12 ಗಂಟೆ ವೇಳೆಗೆ ಪರ್ಯಾಯ ಅಂತರ್ಜಾಲ ವ್ಯವಸ್ಥೆ ಬಳಸಿ ದಾಖಲೆ ಪರಿಶೀಲನೆ ನಡೆಸಲಾಯಿತು.

ಶುಕ್ರವಾರ 2001ರಿಂದ 5 ಸಾವಿರ ರ‍್ಯಾಂಕ್‌ನವರ ದಾಖಲೆ ಪರಿಶೀಲನೆ ನಡೆಯಲಿದೆ. ಮೂಲ ದಾಖಲೆಗಳೊಂದಿಗೆ ದೃಢೀಕೃತ ಒಂದು ಸೆಟ್‌ ಪ್ರತಿಯನ್ನು ತರಬೇಕು.

ಡಿಪ್ಲೊಮಾ ಪರೀಕ್ಷೆ: ಜುಲೈ 14ರಂದು ಡಿಪ್ಲೊಮಾ ಸಿಇಟಿ ಪರೀಕ್ಷೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸದೆ ಇರುವವರು ಇದೇ 10ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ  http://kea.kar.nic.in ವೆಬ್‌ಸೈಟ್‌ ಸಂಪರ್ಕಿಸಬಹುದು ಎಂದು ಕೆಇಎ ಆಡಳಿತಾಧಿಕಾರಿ ಅವರ ಪ್ರಕಟಣೆ ತಿಳಿಸಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !