ಇಬ್ಬರ ಬಂಧನ: ನಗ, ನಗದು ವಶ

ಭಾನುವಾರ, ಜೂನ್ 16, 2019
29 °C

ಇಬ್ಬರ ಬಂಧನ: ನಗ, ನಗದು ವಶ

Published:
Updated:

ಬೆಂಗಳೂರು: ಬೀಗ ಹಾಕಿದ ಮನೆಗಳನ್ನು ಗುರುತಿಸಿ ನಗ, ನಗದು ಕಳವು ಮಾಡುತ್ತಿದ್ದ ಇಬ್ಬರನ್ನು ವೈಯಾಲಿಕಾವಲ್ ಪೊಲೀಸರು ಬಂಧಿಸಿದ್ದಾರೆ.

ಮಾಗಡಿ ರಸ್ತೆಯ ತಾವರೆಕೆರೆ ನಿವಾಸಿ ಮಂಜುನಾಥ್ ಅಲಿಯಾಸ್ ಕೋಳಿ ಫಯಾಜ್ (30) ಮತ್ತು ಪಿಳ್ಳಗಾನಹಳ್ಳಿ ನಿವಾಸಿ ಶ್ರೀನಿವಾಸ ಅಲಿಯಾಸ್ ಸೈಲೆಂಟ್ ಸೀನ (32) ಬಂಧಿತರು.

ಆರೋಪಿಗಳಿಂದ ₹ 9 ಲಕ್ಷ ನಗದು ಹಾಗೂ ₹ 52 ಲಕ್ಷ ಮೌಲ್ಯದ 1 ಕೆ.ಜಿ. 319 ಗ್ರಾಂ ತೂಕದ ಚಿನ್ನಾಭರಣ, 2 ಕೆ.ಜಿ. ಬೆಳ್ಳಿ, ಎರಡು ದ್ವಿಚಕ್ರ ವಾಹನ, ಒಂದು ಕಾರು ಸೇರಿ ಒಟ್ಟು ₹ 52,60,800 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ಬಂಧನದಿಂದ ನಗರದ ವಿವಿಧ ಎಂಟು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕಳವು ಪ್ರಕರಣಗಳು ಪತ್ತೆಯಾಗಿವೆ.

ಕದ್ದ ವಾಹನಗಳಲ್ಲಿ ಬೆಳಿಗ್ಗೆ ನಗರ ಸುತ್ತಾಡುತ್ತಿದ್ದ ಈ ಇಬ್ಬರು, ಬೀಗ ಬಾಕಿದ ಮನೆಗಳನ್ನು ಗುರುತಿಸುತ್ತಿದ್ದರು. ಬಳಿಕ ಬೀಗ ಹೊಡೆದು ಚಿನ್ನಾಭರಣ, ನಗದು ಕಳ್ಳತನ ಮಾಡುತ್ತಿದ್ದರು.

ವೈಯಾಲಿಕಾವಲ್ ಠಾಣಾ ವ್ಯಾಪ್ತಿಯ ಜಿ.ಜಿ. ಪಾರ್ಕ್ ಬಡಾವಣೆ ನಿವಾಸಿ ಶಾಂತರಾಣಿ ಎಂಬುವರ ಮನೆಯ ಟೇಬಲ್ ಮೇಲೆ ಇಟ್ಟಿದ್ದ 80 ಗ್ರಾಂ ತೂಕದ ಚಿನ್ನದ ಸರವನ್ನು ಆರೋಪಿಗಳು ಇತ್ತೀಚೆಗೆ ಕಳವು ಮಾಡಿದ್ದರು. ಬಾಗಿಲು ತೆರೆದಿದ್ದರಿಂದ ಮನೆಯೊಳಗೆ ನೇರವಾಗಿ ನುಗ್ಗಿ ಸರ ಕದ್ದು ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !