ರಾಹುಲ್ ಗಾಂಧಿ ಮೂರು ದಿನಗಳ ಕೇರಳ ಭೇಟಿ: ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಬುಧವಾರ, ಜೂನ್ 19, 2019
23 °C

ರಾಹುಲ್ ಗಾಂಧಿ ಮೂರು ದಿನಗಳ ಕೇರಳ ಭೇಟಿ: ಸಾರ್ವಜನಿಕರಿಂದ ಅಹವಾಲು ಸ್ವೀಕಾರ

Published:
Updated:

ಕೇರಳ: ಮೂರು ದಿನಗಳ ಭೇಟಿಗಾಗಿ ಕೇರಳಕ್ಕೆ ಆಗಮಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಇಲ್ಲಿನ ಪ್ರಮುಖ ಸ್ಥಳಗಳಲ್ಲಿ ರೋಡ್ ಶೋ ನಡೆಸಿದ್ದು, ಜನರು ಅಭೂತಪೂರ್ವ ಸ್ವಾಗತ ಕೋರಿದ್ದಾರೆ.

ಶುಕ್ರವಾರ ಇಲ್ಲಿನ ಕೋಜಿಕೋಡ್‌‌ಗೆ ಬಂದಿಳಿದ ರಾಹುಲ್, ಎಂದಿನಂತೆ ದಾರಿಯುದ್ದಕ್ಕೂ ಜನರತ್ತ ಕೈಬೀಸುತ್ತಾ ನಗುಮುಖದಿಂದಲೇ ಪ್ರತಿಕ್ರಿಯಿಸಿದ್ದಾರೆ. ಕೆಲವರು ದುಂಬಾಲು ಬಿದ್ದು ಕೈಕುಲುಕಿದರೆ, ಕೆಲವರು ದೂರದಿಂದಲೇ 'ನೋಡಿ ನಾವು ನಿಮ್ಮೊಂದಿಗಿದ್ದೇವೆ' ಎಂಬ ಪೋಸ್ಟರ್‌‌ಗಳನ್ನು ಪ್ರದರ್ಶಿಸಿದ್ದಾರೆ.

ವಯನಾಡ್ ಲೋಕಸಭಾ ಕ್ಷೇತ್ರದ ಮತದಾರರು ಕಳೆದ ಲೋಕಸಭಾ ಚುನಾವಣೆಯಲ್ಲಿ 4.3ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಿ ಸಂಸತ್‌‌ಗೆ ಕಳುಹಿಸಿಕೊಟ್ಟಿದ್ದಾರೆ. ಇತ್ತೀಚೆಗೆ ತಾನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಪ್ರಕಟಿಸಿದ್ದರು. ಆದರೆ, ಸಮಿತಿ ಇದನ್ನು ತಳ್ಳಿಹಾಕಿತ್ತು.

ರಾಹುಲ್ ಗಾಂಧಿ ಮಲ್ಲಪುರಂ ಜಿಲ್ಲೆಯ ಕಲಿಕಾವು ಎಂಬಲ್ಲಿ ಮೊದಲ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಮಯದಲ್ಲಿ ಅಲ್ಲಿನ ಜನರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕನನ್ನು ಕಂಡು ಸಂಭ್ರಮಿಸಿದ್ದಾರೆ. ರಸ್ತೆಯ ಇಕ್ಕೆಲಗಳು ಜನರಿಂದ ತುಂಬಿದ್ದು ಅಭೂತಪೂರ್ವ ಸ್ವಾಗತ ದೊರೆತಿದೆ. ಚುನಾವಣೆ ನಂತರ ರಾಹುಲ್ ಅವರದು ಇದೇ ಮೊದಲ ಕಾರ್ಯಕ್ರಮವಾಗಿದೆ. ಭಾನುವಾರದವರೆಗೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಕೇರಳದಲ್ಲಿ ಸದ್ಯದಲ್ಲೇ ವಿಧಾನಸಭಾ ಉಪ ಚುನಾವಣೆ ನಡೆಯಲಿದ್ದು, ರಾಹುಲ್ ಗಾಂಧಿ ಅವರ ಭೇಟಿ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದಂತಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಂಡೂರು ಶಾಸಕ ಎಪಿ ಅನಿಲ್ ಕುಮಾರ್ ತಿಳಿಸಿದ್ದಾರೆ. ಇದಲ್ಲದೆ, ರಾಹುಲ್ ನೀಲಂಬೂರ್ ಹಾಗೂ ಈರ್ನಾಡ್ ಪ್ರದೇಶಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !