ಯುವತಿಯ ಕೊಲೆ: ಯುವಕ ಪರಾರಿ

ಮಂಗಳವಾರ, ಜೂನ್ 25, 2019
24 °C

ಯುವತಿಯ ಕೊಲೆ: ಯುವಕ ಪರಾರಿ

Published:
Updated:

ಮಂಗಳೂರು: ಬ್ಯಾಂಕಿಂಗ್‌ ನೇಮಕಾತಿ ಪರೀಕ್ಷೆಯ ತರಬೇತಿಗೆಂದು ನಗರಕ್ಕೆ ಬಂದಿದ್ದ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಯುವತಿಯೊಬ್ಬರ ಶವ ಅತ್ತಾವರದ ಬಾಡಿಗೆ ಮನೆಯೊಂದರಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯನ್ನು ಬಾಡಿಗೆಗೆ ಪಡೆದಿದ್ದ ಯುವಕ ಪರಾರಿಯಾಗಿದ್ದಾನೆ.

ತರೀಕೆರೆ ನಿವಾಸಿ ಮಂಜುನಾಥ್‌ ಎಂಬುವವರ ಮಗಳು ಅಂಜನಾ ವಸಿಷ್ಠ್‌ (22) ಕೊಲೆಯಾದ ಯುವತಿ. ನಗರದ ಅತ್ತಾವರದಲ್ಲಿನ ಬಾಡಿಗೆ ಕೊಠಡಿಯೊಂದರಲ್ಲಿ ಈಕೆಯ ಶವ ಶುಕ್ರವಾರ ಪತ್ತೆಯಾಗಿದೆ. ಕೊಠಡಿಯನ್ನು ಬಾಡಿಗೆಗೆ ಪಡೆದಿದ್ದ ವಿಜಯಪುರ ಜಿಲ್ಲೆಯ ಸಂದೀಪ್‌ ರಾಠೋಡ್‌ ಎಂಬ ಯುವಕ ನಾಪತ್ತೆಯಾಗಿದ್ದು, ಆತನೇ ಕೊಲೆ ಮಾಡಿರುವ ಶಂಕೆ ಇದೆ.

ಅಂಜನಾ ನಗರದ ಕಾಲೇಜೊಂದರಲ್ಲಿ ಎಂಎಸ್ಸಿ ವ್ಯಾಸಂಗ ಮಾಡಿದ್ದರು. ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗವೂ ಸಿಕ್ಕಿತ್ತು. ಆದರೆ, ಬ್ಯಾಂಕಿಂಗ್‌ ನೇಮಕಾತಿ ಪರೀಕ್ಷೆ ಎದುರಿಸಲು ನಿರ್ಧರಿಸಿದ್ದರು. ಇದಕ್ಕಾಗಿ ತರಬೇತಿ ಪಡೆಯಲು ಗುರುವಾರ ಬೆಳಿಗ್ಗೆ ತರೀಕೆರೆಯಿಂದ ಮಂಗಳೂರಿಗೆ ಬಂದಿದ್ದರು. ಶುಕ್ರವಾರ ಮಧ್ಯಾಹ್ನ ಆಕೆಯ ಶವ ಸಂದೀಪ್‌ ರಾಠೋಡ್‌ನ ಕೊಠಡಿಯಲ್ಲಿ ಪತ್ತೆಯಾಗಿದೆ. ಮಲಗುವ ಮಂಚದ ಮೇಲೆ ಮೃತದೇಹ ಪತ್ತೆಯಾಗಿದ್ದು, ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂದೀಪ್‌ ರಾಠೋಡ್‌ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪರೀಕ್ಷೆಗೆ ತರಬೇತಿ ‍ಪಡೆಯಲು ನಗರಕ್ಕೆ ಬಂದಿದ್ದ. ಜೂನ್‌ 2ರಿಂದ ಲೂಯಿಸ್‌ ಪಯಾಸ್‌ ಎಂಬುವವರ ಒಡೆತನದ ಕೊಠಡಿಯನ್ನು ಬಾಡಿಗೆಗೆ ಪಡೆದುಕೊಂಡು, ಅಲ್ಲಿಯೇ ವಾಸವಾಗಿದ್ದ. ಶುಕ್ರವಾರ ಬೆಳಿಗ್ಗೆ ಸಂದೀಪ್‌ ರಾಠೋಡ್‌ನ ಕೊಠಡಿಗೆ ಯುವತಿ ಬಂದಿದ್ದಳು. ತಾನು ಆತನನ್ನು ಮದುವೆಯಾಗಿದ್ದೇನೆ. ಊರಿನಿಂದ ಚಪಾತಿ ತಂದಿದ್ದು, ಕೊಡಲು ಬಂದಿರುವುದಾಗಿ ತನ್ನ ಬಳಿ ಹೇಳಿ ಒಳಕ್ಕೆ ಹೋಗಿದ್ದಳು ಎಂದು ಕೊಠಡಿಯ ಮಾಲೀಕ ಲೂಯಿಸ್‌ ಪಯಾಸ್‌ ಪೊಲೀಸರಿಗೆ ತಿಳಿಸಿದ್ದಾರೆ.

ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ತನಿಖೆ ಚುರುಕುಗೊಳಿಸಿರುವ ಪೊಲೀಸರು, ನಾಪತ್ತೆಯಾಗಿರುವ ಸಂದೀಪ್‌ ರಾಠೋಡ್‌ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !