‘ಬೆಂಗಳೂರು 20’ ಯೋಜನೆಗೆ ಚಾಲನೆ

ಮಂಗಳವಾರ, ಜೂನ್ 25, 2019
22 °C
ಸ್ವಚ್ಛ ಭಾರತ ರ‍್ಯಾಂಕಿಂಗ್‌ನಲ್ಲಿ ಮಹಾನಗರದ ಸ್ಥಾನ ಉತ್ತಮಗೊಳಿಸಲು ಯತ್ನ

‘ಬೆಂಗಳೂರು 20’ ಯೋಜನೆಗೆ ಚಾಲನೆ

Published:
Updated:
Prajavani

ಬೆಂಗಳೂರು: ಸ್ವಚ್ಛ ಭಾರತ ರ‍್ಯಾಂಕಿಂಗ್‌ನಲ್ಲಿ ಬೆಂಗಳೂರಿನ ಸ್ಥಾನವನ್ನು 20ರೊಳಗೆ ತರುವ ಉದ್ದೇಶದಿಂದ ‘ಬೆಂಗಳೂರು 20’ ಯೋಜನೆ ಜಾರಿಗೊಳಿಸಲಾಗಿದೆ ಎಂದು ಮೇಯರ್‌ ಗಂಗಾಂಬಿಕೆ ಘೋಷಿಸಿದರು. 

ಯೋಜನೆಯ ಕುರಿತಂತೆ 198 ವಾರ್ಡ್‌ಗಳ ‍ಪಾಲಿಕೆ ಸದಸ್ಯರು, ಅಧಿಕಾರಿಗಳು ಮತ್ತು ವಿವಿಧ ಸರ್ಕಾರೇತರ ಸಂಸ್ಥೆಗಳ ಸದಸ್ಯರ ಜೊತೆ ಶುಕ್ರವಾರ ಮೊದಲ ಸಭೆ ನಡೆಸಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತ್ಯಾಜ್ಯ, ಘನ ತ್ಯಾಜ್ಯ ವಿಲೇವಾರಿ ಮತ್ತು ಶೌಚಾಲಯಗಳ ಬಳಕೆಯಲ್ಲಿ ಕಳಪೆ ನಿರ್ವಹಣೆ ತೋರಿದ್ದರಿಂದ ಬೆಂಗಳೂರು ಸ್ವಚ್ಛ ಭಾರತ ಪಟ್ಟಿಯಲ್ಲಿ 194ನೇ ಸ್ಥಾನದಲ್ಲಿದೆ. ನಗರದಲ್ಲಿ ಇನ್ನೂ ಕನಿಷ್ಠ 30 ಸಾವಿರ ಶೌಚಾಲಯಗಳ ಅಗತ್ಯವಿದೆ. ಆದರೆ, ನಗರದಲ್ಲಿ ಇರುವುದು ನೂರಾರು ಶೌಚಾಲಯ
ಗಳು ಮಾತ್ರ. ಹಾಗಾಗಿ, ಹೊಸ ಶೌಚಾಲಯಗಳನ್ನು ನಿರ್ಮಿಸಬೇಕು ಮತ್ತು ಅವುಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು’ ಎಂದು ಹೇಳಿದರು. 

 ‘ಈ ಯೋಜನೆ ಅಥವಾ ಅಭಿಯಾನದಲ್ಲಿ ನಾಗರಿಕರನ್ನೂ ಒಳಗೊಳ್ಳುವಂತೆ ಮಾಡುವುದು ಮತ್ತು ಅವರನ್ನು ನಗರದ ಪ್ರಚಾರ ರಾಯಭಾರಿಗಳನ್ನಾಗಿ ಮಾಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು’ ಎಂದು ಹೇಳಿದರು.

‘ನಗರದಲ್ಲಿ ಒಣ ಕಸ ಸಂಗ್ರಹ ಕೇಂದ್ರಗಳು ಮತ್ತು ಎಂಟು ಸಂಸ್ಕರಣ ಘಟಕಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಕೂಡ ಬೇರೆ ನಗರಗಳಿಗಿಂತ ರ‍್ಯಾಂಕಿಂಗ್‌ನಲ್ಲಿ ಹಿಂದೆ ಬಿದ್ದಿರುವುದಕ್ಕೆ ಬೇಸರವಿದೆ’ ಎಂದರು. 

‘ಪ್ರಮುಖವಾಗಿ ಸಾಮಾಜಿಕ ಮಾಧ್ಯಮದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ ಅಭಿಪ್ರಾಯ ವ್ಯಕ್ತಪಡಿಸದೇ ಇರುವುದು ಕೂಡ ಕಡಿಮೆ ರ‍್ಯಾಂಕ್‌ ಬರಲು ಕಾರಣ.  ನಾವು ನಗರದ ಮಾಲೀಕರು ಮತ್ತು ಈ ನಗರ ನಮ್ಮ ಹೆಮ್ಮೆ ಎಂಬ ಅರಿವನ್ನು ನಾಗರಿಕರಲ್ಲಿ ಮೂಡಿಸುವ ಅನಿವಾರ್ಯತೆ ಇದೆ’ ಎಂದರು.

‘ಪಾಲಿಕೆ ಸದಸ್ಯರು ಮತ್ತು ಎಂಜಿನಿಯರ್‌ಗಳ ನಡುವೆ ಸಹಕಾರ ಮತ್ತು ಸಮನ್ವಯದ ಕೊರತೆ ಇದೆ. ಇದನ್ನು ಸರಿ ಮಾಡುವ ಅವಶ್ಯಕತೆ ಇದೆ. ವಾರ್ಡ್‌ ಮಟ್ಟದಲ್ಲಿ ಪಾಲಿಕೆ ಸದಸ್ಯರು ಮತ್ತು ನಾಗರಿಕರೊಂದಿಗೆ ಸಭೆ ನಡೆಸಿ, ಅಲ್ಲಿನ ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು’ ಎಂದರು.

‘ಈಗಾಗಲೇ ನಿರ್ಮಿಸಲಾಗಿರುವ ಶೌಚಾಲಯಗಳ ನಿರ್ವಹಣೆ ಹೇಗಿದೆ ಎಂಬುದನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಸಮರ್ಪಕವಾಗಿ ನಿರ್ವಹಣೆ ಮಾಡಿರದಿದ್ದರೆ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !