ತಿಮ್ಮಪ್ಪನ ದೇಗುಲ 15 ಎಕರೆ ಭೂಮಿ

ಸೋಮವಾರ, ಜೂನ್ 24, 2019
26 °C
ರಾಮನಗರದತ್ತ ಎಚ್‌ಡಿಕೆ ಚಿತ್ತ

ತಿಮ್ಮಪ್ಪನ ದೇಗುಲ 15 ಎಕರೆ ಭೂಮಿ

Published:
Updated:
Prajavani

ಬೆಂಗಳೂರು: ತಿರುಪತಿ ತಿರುಮಲ ಟ್ರಸ್ಟ್‌ ವತಿಯಿಂದ ರಾಮನಗರದಲ್ಲಿ ವೆಂಕಟೇಶ್ವರ ದೇವಸ್ಥಾನ ನಿರ್ಮಿಸಲು 15 ಎಕರೆ ಭೂಮಿ, ಕೆಂಗಲ್‌ ಆಂಜನೇಯಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ₹21 ಕೋಟಿ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ ಐತಿಹಾಸಿಕ ಹಾಗೂ ಪಾರಂಪರಿಕ ದೇವಾಲಯಗಳ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಕುರಿತು ಶುಕ್ರವಾರ ಏರ್ಪಡಿಸಿದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ತಿರುಮಲದಲ್ಲಿ ಭಕ್ತರ ಪ್ರಯೋಜನಕ್ಕಾಗಿ ₹ 26 ಕೋಟಿ ವೆಚ್ಚದಲ್ಲಿ ಛತ್ರ ನಿರ್ಮಿಸಲು ತೀರ್ಮಾನ ತೆಗೆದುಕೊಳ್ಳಲಾಯಿತು. 

ಪ್ರಮುಖ ತೀರ್ಮಾನಗಳು:

l ಟಿಟಿಡಿ ಟ್ರಸ್ಟ್‌ ವತಿಯಿಂದ ರಾಮನಗರ ಜಿಲ್ಲೆಯಲ್ಲಿ ವೆಂಕಟೇಶ್ವರ ದೇವಸ್ಥಾನ ಮತ್ತು ಸಮುದಾಯ ಭವನ ನಿರ್ಮಾಣಕ್ಕೆ 15 ಎಕರೆ ಜಮೀನು ಗುರುತಿಸುವುದು.

l ಮಲೆ ಮಹದೇಶ್ವರ ಬೆಟ್ಟದಲ್ಲಿ ₹ 40 ಕೋಟಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಭಿವೃದ್ಧಿ ಕಾರ್ಯ. ಮಲೆ ಮಹದೇಶ್ವರ ಪ್ರಾಧಿಕಾರದ ವತಿಯಿಂದ ದೇವಸ್ಥಾನದ ಮೆಟ್ಟಿಲುಗಳ ದುರಸ್ತಿ. 

lಮುಡುಕುತೊರೆ ಶ್ರೀಮಲ್ಲಿಕಾರ್ಜುನ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸುವುದು.

l ಮುಂದಿನ ವರ್ಷ ತಲಕಾಡು ಪಂಚಲಿಂಗ ದರ್ಶನ ಆಚರಣೆ ನಡೆಯುವುದರಿಂದ, ಕ್ಷೇತ್ರದಲ್ಲಿ ಮೂಲ ಸೌಕರ್ಯ ವ್ಯವಸ್ಥೆ ಬಲಪಡಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !