ಬಾಲಕನ ಬಲಿ ಪಡೆದ ಬೈಕ್ ಸವಾರಿ

ಮಂಗಳವಾರ, ಜೂನ್ 18, 2019
25 °C

ಬಾಲಕನ ಬಲಿ ಪಡೆದ ಬೈಕ್ ಸವಾರಿ

Published:
Updated:

ಬೆಂಗಳೂರು: ಆತ 13 ವರ್ಷದ ಬಾಲಕ. ತಂದೆಯ ದ್ವಿಚಕ್ರ ವಾಹನದ ಸವಾರಿ ಮಾಡಲು ಹೋಗಿ ಅಪಘಾತದಲ್ಲಿ ಮೃತಪಟ್ಟಿದ್ದಾನೆ.

ಜಯನಗರ ಸಮೀಪದ ಅಶೋಕ ಪಿಲ್ಲರ್ ಬಳಿ ಬಿಎಂಟಿಸಿ ಬಸ್ಸಿನ ಚಕ್ರದ ಕೆಳಗೆ ಸಿಲುಕಿ ಅಯೂಬ್ ಖಾನ್ ಎಂಬ ಬಾಲಕ ಮೃತಪಟ್ಟಿದ್ದಾನೆ. ಸಿದ್ದಾಪುರ ನಿವಾಸಿಯಾದ ಬಾಲಕ, ಖಾಸಗಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ.

‘ತಂದೆಯ ದ್ವಿಚಕ್ರ ವಾಹನವನ್ನು ಚಲಾಯಿಸಿಕೊಂಡು ಶುಕ್ರವಾರ ಅಶೋಕ ಪಿಲ್ಲರ್ ಬಳಿ ತೆರಳುತ್ತಿದ್ದ. ಅದೇ ವೇಳೆ ರಸ್ತೆಯ ವಿಭಜಕಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿತ್ತು. ರಸ್ತೆಯಲ್ಲೇ ವಾಹನ ಸಮೇತ ಉರುಳಿಬಿದ್ದಿದ್ದ ಆತ ಬಸ್ಸಿನ ಕೆಳಗೆ ಸಿಲುಕಿದ್ದ. ಆತನ ಮೇಲೆಯೇ ಬಸ್ಸಿನ ಚಕ್ರ ಹರಿದು ಹೋಗಿತ್ತು. ತೀವ್ರ ರಕ್ತಸ್ರಾವದಿಂದ ಆತ ಮೃತಪಟ್ಟಿದ್ದಾನೆ’ ಎಂದು ಜಯನಗರ ಸಂಚಾರ ಪೊಲೀಸರು ಹೇಳಿದರು.

ಆತ್ಮಹತ್ಯೆಗೆ ಯತ್ನಿಸಿದ ವೈದ್ಯಕೀಯ ವಿದ್ಯಾರ್ಥಿನಿ: ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

‘ಕಾಲೇಜಿನ ವಸತಿನಿಲಯದಲ್ಲಿ ವಾಸವಿದ್ದ ಯುವತಿ, ಅಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಯುವಕನನ್ನು ಇಷ್ಟಪಡುತ್ತಿದ್ದಳು. ಪ್ರೀತಿಸುವಂತೆ ಆತನನ್ನು ಕೋರಿದ್ದಳು. ಆತ ನಿರಾಕರಿಸುತ್ತಿದ್ದಂತೆ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸ್ನೇಹಿತೆಯರೇ ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಿದ್ದಾರೆ. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ’ ಎಂದು ಪೊಲೀಸರು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !