ಕ್ರಿಪ್ಟೊಕರೆನ್ಸಿ ಬಳಕೆ: 10 ವರ್ಷ ಜೈಲು ಶಿಕ್ಷೆ?

ಬುಧವಾರ, ಜೂನ್ 19, 2019
32 °C
ಶೀಘ್ರದಲ್ಲಿಯೇ ಸಂಸತ್‌ನಲ್ಲಿ ಮಸೂದೆ ಮಂಡನೆ

ಕ್ರಿಪ್ಟೊಕರೆನ್ಸಿ ಬಳಕೆ: 10 ವರ್ಷ ಜೈಲು ಶಿಕ್ಷೆ?

Published:
Updated:
Prajavani

ಬೆಂಗಳೂರು: ಡಿಜಿಟಲ್‌ ಕರೆನ್ಸಿ (ಕ್ರಿಪ್ಟೊ ಕರೆನ್ಸಿ) ಬಳಕೆ ನಿರ್ಬಂಧಿಸಲು, ಇವುಗಳ ಖರೀದಿ ಮತ್ತು ಮಾರಾಟದಲ್ಲಿ ತೊಡಗಿದವರಿಗೆ ಗರಿಷ್ಠ 10 ವರ್ಷ ಜೈಲು ಶಿಕ್ಷೆ ವಿಧಿಸುವ ಕಾಯ್ದೆ ಸದ್ಯದಲ್ಲೇ ಜಾರಿಗೆ ಬರುವ ನಿರೀಕ್ಷೆ ಇದೆ.

ಈ ಸಂಬಂಧ ಕೇಂದ್ರ ಸರ್ಕಾರವು ಸಂಸತ್‌ನಲ್ಲಿ ಮಸೂದೆ ಮಂಡಿಸಲು ಸಿದ್ಧತೆ ನಡೆಸಿದೆ. ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ನೇತೃತ್ವದಲ್ಲಿನ ಉನ್ನತ ಮಟ್ಟದ ಸಮಿತಿಯು ಕರಡು ಮಸೂದೆ ಸಿದ್ಧಪಡಿಸುತ್ತಿದೆ.

ದೇಶದಲ್ಲಿ ಕ್ರಿಪ್ಟೊ ಕರೆನ್ಸಿ ಬಳಕೆಯನ್ನು ಕಾನೂನು ಬಾಹಿರಗೊಳಿಸಲು ಕರಡು ಮಸೂದೆ ರಚಿಸುತ್ತಿರುವ ಸಮಿತಿಯು ಉದ್ದೇಶಿಸಿದೆ. ಯಾರಾದರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಡಿಜಿಟಲ್‌ ಕರೆನ್ಸಿಗಳನ್ನು ಬಳಿಯಲ್ಲಿ ಇಟ್ಟುಕೊಳ್ಳುವುದು, ಮಾರಾಟ ಮಾಡುವುದು, ವರ್ಗಾವಣೆ ಮಾಡುವ ಕೃತ್ಯದಲ್ಲಿ ತೊಡಗಿದ್ದರೆ ಅವರಿಗೆ ದುಬಾರಿ ದಂಡ ಇಲ್ಲವೇ ಜೈಲು ಶಿಕ್ಷೆ ವಿಧಿಸಲು ಮಸೂದೆಯಲ್ಲಿ ಉದ್ದೇಶಿಸಲಾಗಿದೆ.

ಸಮಿತಿಯಲ್ಲಿ ಭಾರತೀಯ ಷೇರು ನಿಯಂತ್ರಣ ಮಂಡಳಿ (ಸೆಬಿ), ವಿವಿಧ ತನಿಖಾ ತಂಡಗಳು ಮತ್ತು ನೇರ ತೆರಿಗೆ ಕೇಂದ್ರೀಯ ಮಂಡಳಿ (ಸಿಬಿಡಿಟಿ) ಪ್ರತಿನಿಧಿಗಳು ಇದ್ದಾರೆ.

ಡಿಜಿಟಲ್‌ ರೂಪಿ?:  ಕ್ರಿಪ್ಟೊ ಕರೆನ್ಸಿ ಬಳಕೆ ನಿರ್ಬಂಧಿಸಲು ಕಠಿಣ ಕ್ರಮ ಕೈಗೊಳ್ಳಲು ಸಮಿತಿ ಮುಂದಾಗಿರುವುದರ ಜತೆಗೆ, ದೇಶದ ಅಧಿಕೃತ ಡಿಜಿಟಲ್‌ ಕರೆನ್ಸಿ (ರೂಪಿ) ಜಾರಿಗೆ ತರುವ ಸಾಧ್ಯತೆಗಳನ್ನೂ ಪರಿಶೀಲಿಸುತ್ತಿದೆ. ಈ ಸಂಬಂಧ ಸಮಿತಿಯು ಭಾರತೀಯ ರಿಸರ್ವ್ ಬ್ಯಾಂಕ್‌ನ ಅಭಿಪ್ರಾಯ ಪಡೆದು ಅಂತಿಮ ನಿರ್ಧಾರಕ್ಕೆ ಬರಲಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !