ವಿದ್ಯಾರ್ಥಿ ಬಸ್‌ ಪಾಸ್ ಅವಧಿ ವಿಸ್ತರಣೆ

ಮಂಗಳವಾರ, ಜೂನ್ 25, 2019
28 °C

ವಿದ್ಯಾರ್ಥಿ ಬಸ್‌ ಪಾಸ್ ಅವಧಿ ವಿಸ್ತರಣೆ

Published:
Updated:

ಬೆಂಗಳೂರು: 2018–19ನೇ ಸಾಲಿನ ವಿದ್ಯಾರ್ಥಿ ಬಸ್‌ ಪಾಸ್‌ ಅವಧಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇದೇ 30ರವರೆಗೆ ವಿಸ್ತರಿಸಿದೆ.

ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ 2019–20ನೇ ಸಾಲಿನ ತರಗತಿಗಳು ಆರಂಭವಾಗಿವೆ ಎಂದು ಶಿಕ್ಷಣ ಸಂಸ್ಥೆಗಳು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಹೀಗಾಗಿ, ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ. ಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳು ಕಳೆದ ವರ್ಷದ ಪಾಸ್, ಪ್ರಸಕ್ತ ಸಾಲಿನ ಬೋಧನಾ ಶುಲ್ಕದ ರಸೀದಿ ಮತ್ತು ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಸ್‌ ಪಾಸ್‌ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು: ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಕೂಡಲೇ ಬಸ್‌ ಪಾಸ್‌ ನೀಡುವಂತೆ ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿಗಳ ಸಂಘಟನೆಯ (ಎಐಡಿಎಸ್‌ಒ) ಪದಾಧಿಕಾರಿಗಳು ಹಾಗೂ ನಗರದ ವಿವಿಧ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳು ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಶುಕ್ರವಾರ ಪ್ರತಿಭಟಿಸಿದರು. 

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ಸಿತಾರ ಮಾತನಾಡಿ,‘ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳಲ್ಲಿ ಒಂದಾದ ವಿದ್ಯಾರ್ಥಿ ಪಾಸ್‌ ಅನ್ನು ಕಾಲೇಜುಗಳು ಪ್ರಾರಂಭವಾಗಿ ಮೂರು ವಾರ ಕಳೆದರೂ ನೀಡಿಲ್ಲ. ಇದರಿಂದ ವಿದ್ಯಾರ್ಥಿಗಳು ಹಣ ಕೊಟ್ಟು ಪ್ರಯಾಣ ಮಾಡುತ್ತಿದ್ದಾರೆ. ಕೆಲವರು ಕಾಲೇಜಿಗೆ ಬಾರದೇ ಮನೆಯಲ್ಲೇ ಇರುವಂತಾಗಿದೆ. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. 

‘ಮೇ ತಿಂಗಳಿನಲ್ಲೇ ಪಿಯು ತರಗತಿಗಳು ಆರಂಭವಾಗಿವೆ. ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಸ್‌ ವಿತರಿಸಬೇಕಿರುವುದು ಬಿಎಂಟಿಸಿ ಹಾಗೂ ‌ಸರ್ಕಾರದ ಕರ್ತವ್ಯ. ಮೂರು ವಾರಗಳಿಂದ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಪರದಾಡುತ್ತಿದ್ದಾರೆ. ಇದರಿಂದ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಕೂಡಲೇ ಪಾಸ್‌ ವಿತರಿಸಬೇಕು ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿ ಒತ್ತಾಯಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !