ಸೇತುವೆ ಕಟ್ಟಲು ಕಾನೂನು ಬಿಡುತ್ತಿಲ್ಲ!

ಬುಧವಾರ, ಜೂನ್ 19, 2019
22 °C

ಸೇತುವೆ ಕಟ್ಟಲು ಕಾನೂನು ಬಿಡುತ್ತಿಲ್ಲ!

Published:
Updated:
Prajavani

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನ ಮೂರು ಸ್ಥಳಗಳಲ್ಲಿ ಸ್ಥಳೀಯರು ಕಾಲುಸಂಕ ಕಟ್ಟಿಕೊಂಡಿದ್ದಾರೆ. ಲೋಂಡಾದಿಂದ ಮಾಚಾಳಿ ಮಧ್ಯೆದ ಪಾಂಡರಿ ನದಿಗೆ, ನೇರಸಾ ಗ್ರಾಮದಿಂದ ಕೊಂಗಳಾ, ಗವ್ವಾಳಿ ಮತ್ತು ಪಾಸ್ತೋಳಿ ಗ್ರಾಮಗಳ ನಡುವಿನ ಬಂಡೂರಿ ನಾಲಾ ಮತ್ತು ಮಹದಾಯಿ ನದಿಗೆ ಅಡ್ಡಲಾಗಿ ಕಾಲುಸಂಕ ನಿರ್ಮಿಸಿಕೊಂಡಿದ್ದಾರೆ.

ಖಾನಾಪುರ ತಾಲ್ಲೂಕು ಪಶ್ಚಿಮಘಟ್ಟ ಅರಣ್ಯ ಪ್ರದೇಶದ ಸೆರಗಿನಲ್ಲಿದ್ದು, ಮಳೆಗಾಲದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತದೆ. ‘ಊರುಗಳಿಗೆ ಅಥವಾ ಹೊಲಗಳಿಗೆ ಸುತ್ತು ಬಳಸಿ ಹೋಗುವುದನ್ನು ತಪ್ಪಿಸಿಕೊಳ್ಳಲು ಜನ ಕಾಲುಸಂಕಗಳನ್ನು ಬಳಸುತ್ತಿದ್ದಾರೆ. ಮಳೆ ಸುರಿಯುವ 3–4 ತಿಂಗಳು ಮಾತ್ರ ಈ ಕಾಲುಸಂಕವನ್ನು ಉಪಯೋಗಿಸುತ್ತಾರೆ. ಇಲ್ಲಿನ ಜನರಿಗೆ ಇದು ರೂಢಿಗತವಾಗಿದ್ದು, ಇದುವರೆಗೆ ಯಾವುದೇ ಅವಘಡ ಸಂಭವಿಸಿಲ್ಲ’ ಎಂದು ಸ್ಥಳೀಯರು ಹೇಳುತ್ತಾರೆ.

ಕಾನೂನಿನಲ್ಲಿ ಅವಕಾಶವಿಲ್ಲ

‘ಈ ಪ್ರದೇಶವು ಮೀಸಲು ಅರಣ್ಯ ಪ್ರದೇಶವಾಗಿರುವುದರಿಂದ ಇಲ್ಲಿ ಸೇತುವೆ, ರಸ್ತೆ ನಿರ್ಮಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಹೀಗಾಗಿ ನಿರ್ಮಿಸಿಲ್ಲ’ ಎಂದು ಹೆಸರು ಹೇಳಲು ಇಚ್ಛಿಸದ ಅರಣ್ಯಾಧಿಕಾರಿಯೊಬ್ಬರು ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !