ಸಿದ್ದರಾಮಯ್ಯ ವಿರುದ್ಧ ಪ್ರಸಾದ್‌ ವಾಗ್ದಾಳಿ

ಮಂಗಳವಾರ, ಜೂನ್ 25, 2019
29 °C

ಸಿದ್ದರಾಮಯ್ಯ ವಿರುದ್ಧ ಪ್ರಸಾದ್‌ ವಾಗ್ದಾಳಿ

Published:
Updated:
Prajavani

ಮೈಸೂರು: ‘ಸಿದ್ದರಾಮಯ್ಯಗೆ ಹಂತ ಹಂತದಲ್ಲಿ ಮುಖಭಂಗವಾಗಿದೆ. ಅವನೊಬ್ಬ ನಾಚಿಕೆಗೆಟ್ಟ ಮನುಷ್ಯ. ಮೈಸೂರು ಜಿಲ್ಲೆಯಲ್ಲಿ ಮುಖ ತೋರಿಸಲಾಗದಂಥ ಪರಿಸ್ಥಿತಿ ತಂದಿಟ್ಟುಕೊಂಡಿದ್ದಾನೆ’ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್‌ ಶನಿವಾರ ಇಲ್ಲಿ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

‘ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ಒಬ್ಬ ದಲಿತ ಸಂಸದನಿಗೂ ಅವಕಾಶ ಸಿಕ್ಕಿಲ್ಲ. ಇದಕ್ಕಿಂತ ದೊಡ್ಡ ಅನ್ಯಾಯ, ದ್ರೋಹ ಬೇರೇನಿದೆ?’ ಎಂದು ಟ್ವೀಟ್‌ ಮಾಡಿದ್ದ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ ಅವರು, ‘ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬಂಥ ವ್ಯಕ್ತಿ ಸಿದ್ದರಾಮಯ್ಯ. ಚುನಾವಣೆಯಲ್ಲಿ ಜನರೇ ಉತ್ತರ ನೀಡಿದ್ದಾರೆ. ನಾವು ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುತ್ತೇವೆ’ ಎಂದರು.

‘ಪರಿಶಿಷ್ಟ ಜಾತಿಗೆ ಸೇರಿದ ಐವರು, ಪರಿಶಿಷ್ಟ ವರ್ಗದ ಇಬ್ಬರು ರಾಜ್ಯದಲ್ಲಿ ಗೆದ್ದಿದ್ದಾರೆ. ಮುಂದಿನ ಸಂಪುಟ ವಿಸ್ತರಣೆ ವೇಳೆ ಒಬ್ಬರಿಗೆ ಸ್ಥಾನ ಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !