ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ: ಭಾರಿ ಮಳೆಯ ಮುನ್ನೆಚ್ಚರಿಕೆ

ಬುಧವಾರ, ಜೂನ್ 19, 2019
25 °C
ಮಂಗಳೂರಿನಿಂದ ಕಾರವಾರದವರೆಗೆ ಭಾರಿ ಗಾಳಿ, ಮಳೆ ಸಾಧ್ಯತೆ

ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ: ಭಾರಿ ಮಳೆಯ ಮುನ್ನೆಚ್ಚರಿಕೆ

Published:
Updated:

ಮಂಗಳೂರು: ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಲಕ್ಷದ್ವೀಪದ ಬಳಿ ವಾಯುಭಾರ ಕುಸಿತ ಉಂಟಾಗಿದ್ದು, ಕೇರಳ ಮತ್ತು ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಂಗಳೂರು–ಕಾರವಾರ ನಡುವೆ ಭಾರಿ ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಮತ್ತು ಬಂಗಾಳ ಕೊಲ್ಲಿಯಲ್ಲಿ ಭಾನುವಾರ ರಾತ್ರಿಯಿಂದ ಪ್ರತಿ ಗಂಟೆಗೆ 45ರಿಂದ 55 ಕಿಲೋಮೀಟರ್‌ ವೇಗದಲ್ಲಿ ಗಾಳಿ ಬೀಸಲಿದೆ. ಮುಂದಿನ ಎರಡು ದಿನಗಳಲ್ಲಿ ಗಾಳಿಯ ವೇಗ 90ರಿಂದ 110 ಕಿ.ಮೀ.ವರೆಗೂ ತಲುಪಬಹುದು. ಮಂಗಳೂರಿನಿಂದ ಕಾರವಾರದವರೆಗೆ ಭಾರಿ ಗಾಳಿ, ಮಳೆಯಾಗುವ ಸಾಧ್ಯತೆ ಇದ್ದು, ಗುರುವಾರದವರೆಗೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಚಂಡಮಾರುತ ಸಾಧ್ಯತೆ

ಲಕ್ಷದ್ವೀಪಕ್ಕೆ ಹೊಂದಿಕೊಂಡಂತೆ ಅರಬ್ಬಿ ಸಮುದ್ರದ ಆಗ್ನೇಯ ಭಾಗ ಮತ್ತು ಮಧ್ಯ ಪೂರ್ವ ಭಾಗದಲ್ಲಿ ವಾಯುಭಾರತದ ಕುಸಿತದ ಕೇಂದ್ರವಿದೆ. ಮುಂದಿನ 24 ಗಂಟೆಗಳಲ್ಲಿ ಅದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯೂ ಇದೆ.  ಕರಾವಳಿಯಲ್ಲಿ ಐದು ದಿನಗಳ ಕಾಲ ಮತ್ತು ದಕ್ಷಿಣ ಒಳನಾಡಿನಲ್ಲಿ ಎರಡು ದಿನಗಳ ಕಾಲ ಭಾರಿ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಭಾನುವಾರ ಮಧ್ಯಾಹ್ನ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 16

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !