ಬುಧವಾರ, ಸೆಪ್ಟೆಂಬರ್ 23, 2020
19 °C

ಕೌದೇನಹಳ್ಳಿ ಕೆರೆ ಸ್ವಚ್ಛತಾ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪುರ: 'ನಮ್ಮ ಪೂರ್ವಜರು ನಿರ್ಮಿಸಿದ ಕೆರೆಗಳು ನಶಿಸಿಹೋಗದಂತೆ ಅವುಗಳ ಉಳಿವಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದು ಲೇಖಕ ಚಂದ್ರಶೇಖರ್ ನಂಗಲಿ ತಿಳಿಸಿದರು.

ಕೆ.ಆರ್.ಪುರ ಕೆರೆ ಮತ್ತು ಪರಿಸರ ಸಂರಕ್ಷಣಾ ಟ್ರಸ್ಟ್ ಹಾಗೂ ಕೌದೇನಹಳ್ಳಿ ಕೆರೆ ನಡಿಗೆದಾರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆ ಹಾಗೂ ಸ್ವಚ್ಛತಾ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಕೆರೆಗಳು ನಗರದ ಜೀವನಾಡಿಯಾಗಿವೆ. ಪೂರ್ವಜರು ಕೆರೆಗಳ ಮೂಲಗಳಿಂದ ಕೃಷಿ ಚಟುವಟಿಕೆಗಳನ್ನು ಮಾಡಿ ಆದಾಯವನ್ನು ಹೆಚ್ಚಿಸಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಇಂದು ಕೆರೆಗಳು ನಾಶಗೊಂಡು ಅಳಿವಿನ ಅಂಚಿಗೆ ತಲುಪಿವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್‌ನ ಕೆ.ಆರ್.ಪುರ ಅಧ್ಯಕ್ಷ ಕಲ್ಕೆರೆ ಕೃಷ್ಣಮೂರ್ತಿ, ‘ಒಂದು ಕಾಲದಲ್ಲಿ ಜನರ ಜೀವನಾಡಿಯಾಗಿದ್ದ ಜಲಮೂಲಗಳು ಇಂದು ಕಲುಷಿತಗೊಂಡಿವೆ. ಅವುಗಳನ್ನು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಪರಿಸರ ಉಳಿಸಬೇಕಾಗಿದೆ’ ಎಂದು ಹೇಳಿದರು.

ಕೆರೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಸದಸ್ಯರು ಮಾಡಿದರು. ಕೆರೆಯಂಗಳದಲ್ಲಿ ನಡಿಗೆದಾರರು ಹಾಗೂ ಕಾರ್ಯಕಾರಿ ಸದಸ್ಯರು ಸಸಿ ನೆಟ್ಟರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು