ಯುವಜನತೆ ರಕ್ತದಾನಕ್ಕೆ ಒಲುವು ತೋರಲಿ

ಗುರುವಾರ , ಜೂನ್ 27, 2019
26 °C
ನಟ ನಂದಮೂರಿ ಬಾಲಕೃಷ್ಣ ಅವರ 59ನೇ ಜನ್ಮದಿನದ ಅಂಗವಾಗಿ ನಂದಮೂರಿ ಅಭಿಮಾನಿಗಳ ಸಂಘದ ವತಿಯಿಂದ ರಕ್ತದಾನ ಶಿಬಿರ ಆಯೋಜನೆ

ಯುವಜನತೆ ರಕ್ತದಾನಕ್ಕೆ ಒಲುವು ತೋರಲಿ

Published:
Updated:
Prajavani

ಚಿಕ್ಕಬಳ್ಳಾಪುರ: ತೆಲುಗು ನಟ ನಂದಮೂರಿ ಬಾಲಕೃಷ್ಣ ಅವರ 59ನೇ ಜನ್ಮದಿನದ ಅಂಗವಾಗಿ ನಂದಮೂರಿ ಅಭಿಮಾನಿಗಳ ಸಂಘದ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಸೋಮವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಸಂಘಟನೆ ರಾಜ್ಯ ಘಟಕದ ಉಸ್ತುವಾರಿ ಕೊಮ್ಮಿನೇನಿ ರವಿಕುಮಾರ್, ‘ಎಲ್ಲ ದಾನಗಳಿಗಿಂತ ರಕ್ತದಾನ ಶ್ರೇಷ್ಠ. ರಕ್ತದಾನ ಮತ್ತೊಬ್ಬರ ಜೀವ ಉಳಿಸುವ ಜತೆಗೆ ಆರೋಗ್ಯವಂತ ಜೀವನ ನಡೆಸಲು ಸಹಾಯವಾಗುತ್ತದೆ. ಹುಟ್ಟು ಸಾವಿನ ನಡುವೆ ನಾವೆಲ್ಲ ಕೈಲಾದ ಮಟ್ಟಿಗೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.

‘ಚಿತ್ರ ನಟರು ಹಾಗೂ ಸಮಾಜದ ಮೇರು ವ್ಯಕ್ತಿಗಳ ಜನ್ಮದಿನಾಚರಣೆ ಸಂದರ್ಭಗಳಲ್ಲಿ ಇಂತಹ ಉದಾತ್ತ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಬೇಕು. ಅದರಿಂದ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದಂತಾಗುತ್ತದೆ. ಆರೋಗ್ಯವಂತ ಯುವ ಸಮುದಾಯ ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಿ ಸಂಕಷ್ಟದಲ್ಲಿರುವವ ನೋವಿಗೆ ಸ್ಪಂದಿಸುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಉಸ್ತುವಾರಿ ಜಿ.ಸಿ.ವೆಂಕಟರಮಣಪ್ಪ ಮಾತನಾಡಿ, ‘ಸಕಾಲಕ್ಕೆ ರಕ್ತ ಸಿಗದೇ ಸಾಕಷ್ಟು ಸಂದರ್ಭಗಳಲ್ಲಿ ಅಮೂಲ್ಯವಾದ ಪ್ರಾಣ ಕಳೆದು ಹೋಗುತ್ತಿರುತ್ತವೆ. ಒಬ್ಬರ ರಕ್ತದಾನದಿಂದ ಮೂವರು ಬದುಕಿಗೆ ನೆರವಾಗಬಹುದು. ಆ ನಿಟ್ಟಿನಲ್ಲಿ ಯುವಕರು ರಕ್ತದಾನಕ್ಕೆ ಒಲುವು ತೋರುವ ಜತೆಗೆ ಇತರರಲ್ಲಿಯೂ ಈ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು’ ಎಂದರು.

‘ಮನುಷ್ಯ ಮನುಷ್ಯರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕು ಎನ್ನುವ ನಟ ಬಾಲಕೃಷ್ಣ ಅವರ ಮಾತಿನಂತೆ ನಮ್ಮ ಸಂಘಟನೆ ಕಳೆದ ಹಲವಾರು ವರ್ಷಗಳಿಂದ ರಕ್ತದಾನ ಶಿಬಿರ ಸೇರಿದಂತೆ ಹಲವಾರು ವರ್ಷಗಳಿಂದ ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳುತ್ತ ಬರುತ್ತಿದೆ’ ಎಂದು ಹೇಳಿದರು.

ಶಿಬಿರದಲ್ಲಿ ಸುಮಾರು 60 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಪದಾಧಿಕಾರಿಗಳಾದ ಮುನಿನಾರಾಯಣಪ್ಪ, ಕುಮಾರ್, ಪಿಳ್ಳಂಜಿನಪ್ಪ, ಮುರಳಿ, ಎಸ್.ರಾಜು, ಮಂಜುನಾಥ್, ಹರಿಪ್ರಸಾದ್, ಮೂರ್ತಿ, ಮಧು ಶಿಬಿರದಲ್ಲಿ ಭಾಗವಹಿಸಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !