ಇಡಿ ವಿಚಾರಣೆಗೆ ಹಾಜರಾದ ಪ್ರಫುಲ್‌ ಪಟೇಲ್‌

ಶುಕ್ರವಾರ, ಜೂನ್ 21, 2019
24 °C

ಇಡಿ ವಿಚಾರಣೆಗೆ ಹಾಜರಾದ ಪ್ರಫುಲ್‌ ಪಟೇಲ್‌

Published:
Updated:

ನವದೆಹಲಿ (ಪಿಟಿಐ): ವಿಮಾನಯಾನಕ್ಕೆ ಸಂಬಂಧಿಸಿದ ಬಹುಕೋಟಿ ಹಗರಣದಲ್ಲಿ ಏರ್‌ಇಂಡಿಯಾಕ್ಕೆ ನಷ್ಟ ಉಂಟು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಕುರಿತು ವಿಮಾನಯಾನ ಖಾತೆ ಮಾಜಿ ಸಚಿವ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷದ ನಾಯಕ ಪ್ರಫುಲ್‌ ಪಟೇಲ್‌ ಸೋಮವಾರ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾದರು. 

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ, ಸರಣಿ ಪ್ರಶ್ನೆಗಳನ್ನು ಕೇಳಲಾಗಿದ್ದು, ಪ್ರಫುಲ್‌ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. 

ಅಂತರರಾಷ್ಟ್ರೀಯ ವಿಮಾನಗಳಿಗೆ ಸಂಚಾರ ಅವಧಿ ನಿಗದಿ ಮಾಡುವ ಸಂದರ್ಭ ಅಕ್ರಮವೆಸಗಿ ಏರ್‌ಇಂಡಿಯಾಕ್ಕೆ ನಷ್ಟ ಉಂಟುಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದೆ. 

ವಿಮಾನ ಖರೀದಿ–ಮಾರಾಟ ವ್ಯವಹಾರದಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ಇತ್ತೀಚೆಗೆ ಬಂಧನಕ್ಕೆ ಒಳಗಾದ ದೀಪಕ್‌ ತಲ್ವಾರ್‌ ಎಂಬುವರ ವಿರುದ್ಧ ಸಲ್ಲಿಸಿದ ಆರೋಪ ಪಟ್ಟಿಯಲ್ಲಿಯೂ ಪ್ರಫುಲ್‌ ಪಟೇಲ್‌ ಅವರ ಹೆಸರು ಉಲ್ಲೇಖವಾಗಿದೆ. 2004ರಿಂದ 2011ರವರೆಗೆ ನಾಗರಿಕ ವಿಮಾನಯಾನ ಸಚಿವರಾಗಿದ್ದ ಪ್ರಫುಲ್‌ ಅವರನ್ನು ಈ ಪ್ರಕರಣದಲ್ಲಿ ಆರೋಪಿಯನ್ನಾಗಿ ಪರಿಗಣಿಸಿಲ್ಲ.

ಈ ಪ್ರಕರಣಕ್ಕೆ ಸಂಬಂಧಿಸಿ ಇಡಿ ಈಗಾಗಲೇ  ಸಚಿವಾಲಯದ ಹಲವು ಮಂದಿ ಹಿರಿಯ ಅಧಿಕಾರಿಗಳನ್ನು ಪ್ರಶ್ನೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.  ದೀಪಕ್‌ ತಲ್ವಾರ್‌ ಹೇಳಿಕೆಗಳಿಗೆ ಸಂಬಂಧಿಸಿದಂತೆಯೂ ಪ್ರಫುಲ್‌ ಪಟೇಲ್‌ ಅವರಿಗೆ ಪ್ರಶ್ನೆಗಳನ್ನು ಕೇಳುವ ನಿರೀಕ್ಷೆ ಇದೆ. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !