ಸೋಮವಾರ, ಆಗಸ್ಟ್ 3, 2020
23 °C

ನಾರದಾ ಹಗರಣ: ಸಿಬಿಐನಿಂದ ಐಪಿಎಸ್‌ ಅಧಿಕಾರಿ ಮತ್ತೆ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ (ಪಿಟಿಐ): ನಾರದಾ ಟೇಪ್‌ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮಬಂಗಾಳದ ಹಿರಿಯ ಐಪಿಎಸ್‌ ಅಧಿಕಾರಿ ಎಸ್‌ಎಂಎಚ್‌ ಮಿರ್ಜಾ ಅವರು ಸಿಬಿಐ ಮುಂದೆ ಹಾಜರಾದರು.

ಜೂನ್‌ 6ರಂದು ಮಿರ್ಜಾ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತ್ತು. ಸೋಮವಾರ ಮತ್ತೊಮ್ಮೆ ವಿಚಾರಣೆ ನಡೆಸಲಾಯಿತು ಎಂದ ತನಿಖಾ ಸಂಸ್ಥೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ನಾರದಾ ಟೇಪ್ ಹಗರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಮುಕುಲ್‌ ರಾಯ್‌ ಜತೆ ಸಂಪರ್ಕ ಹೊಂದಿರುವ ಆರೋಪವನ್ನು ಮಿರ್ಜಾ ಎದುರಿಸುತ್ತಿದ್ದಾರೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

ನಾರದಾ ನ್ಯೂಸ್‌ ಪೋರ್ಟಲ್‌ ನಡೆಸುತ್ತಿದ್ದ ಮ್ಯಾಥ್ಯು ಸ್ಯಾಮುಯಲ್‌ ಅವರು ಕುಟುಕು ಕಾರ್ಯಾಚರಣೆ ನಡೆಸುತ್ತಿದ್ದಾಗ ಮಿರ್ಜಾ ಅವರು ಬುರ್ದ್ವಾನ್‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು.

ಮಿರ್ಜಾ ಅವರಿಗೆ ಹಣ ತೆಗೆದುಕೊಳ್ಳಲು ಯಾರು ಸೂಚನೆ ನೀಡಿದರು ಮತ್ತು ಅವರ ಪರವಾಗಿ ಯಾರು ಕೆಲಸ ಮಾಡಿದ್ದಾರೆ ಎಂಬುದರ ಮೂಲ ಕಂಡು ಹಿಡಿಯಲು ಸಿಬಿಐ ತನಿಖೆ ನಡೆಸುತ್ತಿದೆ.

ತೃಣಮೂಲ ಕಾಂಗ್ರೆಸ್‌ನ ಹಿರಿಯ ಮುಖಂಡರು ಹಾಗೂ ಕೆಲವು ಐಪಿಎಸ್‌ ಅಧಿಕಾರಿಗಳು ಅಸ್ತಿತ್ವದಲ್ಲಿ ಇಲ್ಲದ ಕಂಪೆನಿಯ ಪ್ರತಿನಿಧಿಗಳಿಂದ ಹಣ ಸ್ವೀಕರಿಸಿದ್ದಾರೆ ಎಂಬುದು 2014ರಲ್ಲಿ ನಡೆದ ಕುಟುಕು ಕಾರ್ಯಾಚರಣೆಯಲ್ಲಿ ಬಹಿರಂಗವಾಗಿತ್ತು. ಈ ಸಂಬಂಧ ಸಿಬಿಐ ತನಿಖೆ ನಡೆಸಲಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು