75 ವೈದ್ಯಕೀಯ ಕಾಲೇಜು

ಬುಧವಾರ, ಜೂನ್ 26, 2019
23 °C

75 ವೈದ್ಯಕೀಯ ಕಾಲೇಜು

Published:
Updated:

ನವದೆಹಲಿ(ಪಿಟಿಐ): ಆರೋಗ್ಯ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲದ ಲಭ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಆರೋಗ್ಯ ಸಚಿವಾಲಯವು 75 ಜಿಲ್ಲಾಸ್ಪತ್ರೆಗಳನ್ನು ವೈದ್ಯಕೀಯ ಕಾಲೇಜುಗಳನ್ನಾಗಿ ಪರಿವರ್ತಿಸುವ ಪ್ರಸ್ತಾವನೆ ಸಿದ್ಧಪಡಿಸಿದೆ. 

ದೇಶದ ಹಿಂದುಳಿದ ಜಿಲ್ಲೆಗಳಲ್ಲಿ ಜಿಲ್ಲಾಸ್ಪತ್ರೆಗಳನ್ನು ವೈದ್ಯಕೀಯ ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸುವ ಕೇಂದ್ರ ಸರ್ಕಾರದ  ಯೋಜನೆಯ ಭಾಗವಾಗಿ ಈ ಪ್ರಸ್ತಾವನೆ ರೂಪಿಸಲಾಗಿದೆ. ಇದನ್ನು ಹಣಕಾಸು ವೆಚ್ಚ ಸಮಿತಿಗೆ ಕಳುಹಿಸಲಾಗಿದ್ದು, ಬಳಿಕ ಇದನ್ನು ಸಂಪುಟದ ಒಪ್ಪಿಗೆಗೆ ಕಳುಹಿಸಲಾಗುವುದು ಎಂದು ಮೂಲಗಳು ಹೇಳಿವೆ. ಪ್ರತಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ₹325 ಕೋಟಿ ಮೊತ್ತದ ಅವಶ್ಯಕತೆ ಇದೆ ಎಂದು ಪ್ರಸ್ತಾವನೆಯ ಕರಡು ಪ್ರತಿಯಲ್ಲಿ ವಿವರಿಸಲಾಗಿದೆ. 

ಆರೋಗ್ಯ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲದ ಕೊರತೆಯಿಂದಾಗಿ ಗ್ರಾಮೀಣ ಪ್ರದೇಶ, ಬುಡಕಟ್ಟು ಮತ್ತು ಬೆಟ್ಟ ಪ್ರದೇಶಗಳಲ್ಲಿ ಆರೋಗ್ಯ ಸೌಕರ್ಯ ಒದಗಿಸುವುದು ಕಷ್ಟವಾಗಿದೆ. ಹೊಸ ಯೋಜನೆಯು ಜಾರಿಗೆ ಬಂದರೆ 10 ಸಾವಿರ ಎಂಬಿಬಿಎಸ್‌ ಸೀಟುಗಳು ಮತ್ತು 8 ಸಾವಿರ ಸ್ನಾತಕೋತ್ತರ ಸೀಟುಗಳು ಹೆಚ್ಚುವರಿಯಾಗಿ ಲಭ್ಯವಾಗಲಿವೆ. ಇದರಿಂದ ದೇಶದಲ್ಲಿ ಆರೋಗ್ಯ ಸೇವೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಸಹಕಾರಿ ಆಗಬಹುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !