ಪಂಜಾಬ್‌: ಕೊಳವೆಬಾವಿಗೆ ಬಿದ್ದ ಮಗುವಿನ ಸಾವು

ಬುಧವಾರ, ಜೂನ್ 26, 2019
23 °C
110 ಗಂಟೆಗಳ ಕಾರ್ಯಾಚರಣೆ ವಿಫಲ

ಪಂಜಾಬ್‌: ಕೊಳವೆಬಾವಿಗೆ ಬಿದ್ದ ಮಗುವಿನ ಸಾವು

Published:
Updated:

ಸಂಗ್ರೂರ್‌: 150 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ ಎರಡು ವರ್ಷದ ಮಗುವನ್ನು 110 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಮಂಗಳವಾರ ಹೊರತೆಗೆಯಲಾಗಿದೆ. ಆದರೆ ದುರದೃಷ್ಟವಶಾತ್‌ ಮಗು ಬದುಕಿ ಉಳಿಯಲಿಲ್ಲ ಎಂದು ಅಧಿಕಾರಿಗಳು ಮತ್ತು ವೈದ್ಯರು ತಿಳಿಸಿದ್ದಾರೆ. 

ರಾಷ್ಟ್ರೀಯ ವಿಕೋಪ ಪ್ರತಿಸ್ಪಂದನಾಸ ಪಡೆಯ ಸದಸ್ಯರು ಮಂಗಳವಾರ ಬೆಳಿಗ್ಗೆ ಸುಮಾರು 5.30ಕ್ಕೆ ಮಗು ಫತೇವೀರ್‌ ಸಿಂಗ್‌ ನನ್ನು ಹೊರತೆಗೆದಿದ್ದು,  ಚಂಡೀಗಢದ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯ ಸ್ನಾತಕೋತ್ತರ ಸಂಸ್ಥೆ(ಪಿಸಿಐಎಂಇಆರ್‌)ಗೆ ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಲಾಯಿತು ಎಂದು ಸಂಗ್ರೂರು ಜಿಲ್ಲಾಧಿಕಾರಿ ಘನಶ್ಯಾಮ್‌ ಥೋರಿ ತಿಳಿಸಿದ್ದರೆ. ಆದರೆ ಮಗು ಸತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆದಷ್ಟು ಬೇಗ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಸಂ್ಥೆಯ ವೈದ್ಯಕೀಯ ಅಧೀಕ್ಷಕ ಎ.ಕೆ. ಗುಪ್ತಾ ಹೇಳಿದರು. 

ಗುರುವಾರ ಸಂಜೆ ಆಟವಾಡಿಕೊಳ್ಳುತ್ತಿದ್ದಾಗ ಪುಟಾಣಿ ಫತೇವೀರ್‌ 125 ಅಡಿ ಆಳದ ಏಳು ಇಂಚು ಅಗಲದ, ಬಳಕೆಯಲ್ಲಿಲ್ಲದ ಕೊಳವೆಬಾವಿಗೆ ಬಿದ್ದಿದ್ದ.  ಆಟದ ಮೈದಾನದಲ್ಲಿದ್ದ ಕೊಳವೆಬಾಯಿಯನ್ನು ಬಟ್ಟೆಯಿಂದ ಮುಚ್ಚಲಾಗಿತ್ತು. ಆದರೆ ಅಧಿಕಾರಿಗಳು ಸರಿಯಾಗಿ ಕಾರ್ಯಾಚರಣೆ ನಡೆಸದೇ ದೀರ್ಘ ಕಾಲ ತೆಗೆದುಕೊಂಡಿದ್ದರಿಂದ ಮಗು ಸಾಯಬೇಕಾಯಿತು ಎಂದು ಸಂಬಂಧಿಕರು ಆರೋಪಿಸಿದ್ದಾರೆ. 

ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ. ‘ಫತೇವೀರ್‌ ಸಾವಿನ ಸುದ್ದಿ ಕೇಳಿ ಬಹಳ ಬೇಸರವಾಯಿತು. ಅವನ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ದೊರೆಯಲಿ. ಜಿಲ್ಲೆಯಲ್ಲಿ ತೆರೆದ ಕೊಳವೆಬಾಯಿಗಳಿರುವ ಬಗ್ಗೆ ಜಿಲ್ಲಾಧಿಕಾರಿಯಿಂದ ವರದಿ ತರಿಸಿಕೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದ್ದಾರೆ. 

ದೀರ್ಘ ಕಾರ್ಯಾಚರಣೆಯ ಬಗ್ಗೆಸೋಮವಾರವೇ ಟೀಕೆಗಳು ವ್ಯಕ್ತವಾಗಿದ್ದವು. ಗ್ರಾಮಸ್ಥರು ಪ್ರತಿಭಟನೆಯನ್ನೂ ನಡೆಸಿದ್ದರು. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !