ಬರ ಅಧ್ಯಯನಕ್ಕೆ ಮುಂದಾದ ರೈತ ಸಂಘ

ಬುಧವಾರ, ಜೂನ್ 26, 2019
22 °C

ಬರ ಅಧ್ಯಯನಕ್ಕೆ ಮುಂದಾದ ರೈತ ಸಂಘ

Published:
Updated:
Prajavani

ಮೈಸೂರು: ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಂಡು, ಬರ ಪರಿಸ್ಥಿತಿ ಅಧ್ಯಯನ ನಡೆಸಲು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮುಂದಾಗಿದೆ.

‘ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಸರ್ಕಾರದ ಗಮನ ಸೆಳೆಯುವಲ್ಲಿ ವಿರೋಧ ಪಕ್ಷದವರೂ ಎಡವಿದ್ದಾರೆ. ಹೀಗಾಗಿ, ಪರಿಸ್ಥಿತಿ ವಿವರಿಸಲು ಸಂಘದ ನಿಯೋಗವು ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿ ಮಾಡಲಿದೆ’ ಎಂದು ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಕೆಲವರು ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುವುದರಲ್ಲಿ ತೊಡಗಿದ್ದರೆ, ಮತ್ತೊಂದೆಡೆ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತು ನಡೆಸಲಾಗುತ್ತಿದೆ. ಸರ್ಕಾರ ಯಾವಾಗ ಬೀಳುತ್ತದೋ ಎಂದು ವಿರೋಧ ಪಕ್ಷದವರು ಕಾದು ಕುಳಿತಿದ್ದಾರೆ. ಆದರೆ, ರೈತರತ್ತ ಯಾರೂ ಗಮನ ಹರಿಸುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೀಗಾಗಿ, ಮೊದಲ ಹಂತದಲ್ಲಿ ಜೂನ್‌ 13ರಿಂದ 19ರವರೆಗೆ ಸಂಘದ 10 ಮಂದಿ ಪದಾಧಿಕಾರಿಗಳ ತಂಡ ಬರ ಅಧ್ಯಯನ ನಡೆಸಲಿದೆ. ಸಮಸ್ಯೆಗಳ ಮಾಹಿತಿ ಸಂಗ್ರಹಿಸುವಂತೆ ಈಗಾಗಲೇ ಜಿಲ್ಲಾ ಪದಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಧ್ಯಯನ ನಡೆಸಿ ರಾಜ್ಯ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಹೋರಾಟ ರೂಪಿಸಲಾಗುವುದು ಎಂದು ಅವರು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !