ಕುಂದಲಹಳ್ಳಿ: ಸರ್ವೀಸ್‌ ರಸ್ತೆ ವಿಸ್ತರಣೆಗೆ ಸೂಚನೆ

ಬುಧವಾರ, ಜೂನ್ 26, 2019
23 °C
ವಿವಿಧ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ ಮೇಯರ್‌ ಗಂಗಾಂಬಿಕೆ

ಕುಂದಲಹಳ್ಳಿ: ಸರ್ವೀಸ್‌ ರಸ್ತೆ ವಿಸ್ತರಣೆಗೆ ಸೂಚನೆ

Published:
Updated:
Prajavani

ಬೆಂಗಳೂರು: ಕುಂದಲಹಳ್ಳಿ ಜಂಕ್ಷನ್‌ ಬಳಿ 10 ಮೀಟರ್‌ ಅಗಲದ ಸರ್ವಿಸ್‌ ರಸ್ತೆ ಅಭಿವೃದ್ಧಿ ಪಡಿಸಿ ಎಂದು ಮೇಯರ್‌ ಗಂಗಾಂಬಿಕೆ ಅಧಿಕಾರಿಗಳಿಗೆ ಬುಧವಾರ ಸೂಚಿಸಿದರು.

ನಗರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ‘ಕುಂದಲಹಳ್ಳಿಯಲ್ಲಿ ಮೊದಲು 5 ಮೀಟರ್‌ ಅಗಲದಲ್ಲಿ ಸರ್ವಿಸ್‌ ರಸ್ತೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿತ್ತು. ಸಂಚಾರದಟ್ಟಣೆ ಹೆಚ್ಚಾಗಿರುವ ಕಾರಣ, ಮತ್ತೆ 5 ಮೀಟರ್‌ ಜಾಗವನ್ನು ಹೆಚ್ಚುವರಿಯಾಗಿ ವಶಪಡಿಸಿಕೊಂಡು ರಸ್ತೆ ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು. 

ಇದಕ್ಕೂ ಮುನ್ನ, ಕುಂದಲಹಳ್ಳಿ ಜಂಕ್ಷನ್‌ ಬಳಿ ಕೈಗೊಳ್ಳಲಾಗಿರುವ ಸಿಗ್ನಲ್‌ ಮುಕ್ತ ಕಾರಿಡಾರ್‌ ಯೋಜನೆಯ ಪ್ರಗತಿ ಪರಿಶೀಲಿಸಿದರು. ಈ ಯೋಜನೆಯು 17.5 ಕಿ.ಮೀ. ರಸ್ತೆ ಅಭಿವೃದ್ಧಿಯ ಜೊತೆಗೆ, ಫುಟ್‌ಪಾತ್‌, ಚರಂಡಿ ಮತ್ತು ಅಡ್ಡರಸ್ತೆಗಳ ಅಭಿವೃದ್ಧಿಯ ಜೊತೆಗೆ ಮೂರು ಜಂಕ್ಷನ್‌ಗಳ ಅಭಿವೃದ್ಧಿಯನ್ನೂ ಒಳಗೊಂಡಿದೆ.

ಅಲ್ಲದೆ, ಕುಂದಲಹಳ್ಳಿ ಜಂಕ್ಷನ್‌ ಹಾಗೂ ಸುರಂಜನ್ ದಾಸ್ ಜಂಕ್ಷನ್ ಬಳಿ ಕೈಗೊಳ್ಳಲಾಗುತ್ತಿರುವ ಕೆಳಸೇತುವೆ ಕಾಮಗಾರಿಯನ್ನೂ ಮೇಯರ್‌ ಪರಿಶೀಲಿಸಿದರು. ಇದಾದ ನಂತರ, ವಿಂಡ್‌ ಟನಲ್‌ ಜಂಕ್ಷನ್‌ ಬಳಿ ನಿರ್ಮಿಸುತ್ತಿರುವ ಕೆಳಸೇತುವೆ ಕಾಮಗಾರಿ ವೀಕ್ಷಿಸಿದ ಅವರು, ಶೀಘ್ರವಾಗಿ ಕೇಬಲ್‌ ಬದಲಿಸಿ, ಕಾಮಗಾರಿ ಚುರುಕುಗೊಳಿಸಲು ಸೂಚಿಸಿದರು.  ಈ ಎಲ್ಲ ಕಾಮಗಾರಿಗಳನ್ನು ನವೆಂಬರ್‌ ಒಳಗಾಗಿ ಪೂರ್ಣಗೊಳಿಸುವಂತೆ ಮೇಯರ್‌ ಆದೇಶಿಸಿದರು.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !